ಬೆಂಗಳೂರು : ಲಂಚ ಪಡೆದು ಸಿಕ್ಕಿಬಿದ್ದ ಪೊಲೀಸ್ ಪೇದೆಗಳು

ಬೆಂಗಳೂರು, ಜ.28 : ಲಂಚ ಪಡೆಯುವಾಗ ಇಬ್ಬರು ಪೊಲೀಸ್ ಪೇದೆಗಳು ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣದಲ್ಲಿ ಇನ್‌ಸ್ಪೆಕ್ಟರ್ ಕೂಡ ಶಾಮೀಲಾಗಿದ್ದಾರೆಂದು ಶಂಕಿಸಲಾಗಿದೆ. ಇನ್‌ಸ್ಪೆಕ್ಟರ್ ಲೋಕಾಯುಕ್ತ ಪೊಲೀಸರು ಬರುವ ಮಾಹಿತಿ ತಿಳಿದು ಠಾಣೆಯಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಸಾಜ್ ಪಾರ್ಲರ್ ಮಾಲೀಕರಿಂದ 50 ಸಾವಿರ ರೂ. ಲಂಚ ಪಡೆಯುವಾಗ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮುಖ್ಯಪೇದೆ ಶಿವಮಾಧು ಹಾಗೂ ಪೇದೆ ಶಿವಪ್ರಸಾದ್ ಲೋಕಾಯುಕ್ತರಿಗೆ ಸಿಕ್ಕಿಬಿದಿದ್ದಾರೆ. ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ್ ಸಹ ಇದರಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. [ಪೊಲೀಸರಿಗೆ ಲಂಚ ಕೊಡಲು ತಾಳಿ ಮಾರಿದ ಗೃಹಿಣಿ]

Bribe

ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. [ಲಂಚ ನೀಡದೆ ಬೆಳಗಾವಿಯಲ್ಲೊಂದು ಮನೆ ಮಾಡಿ!]

ಇನ್‌ಸ್ಪೆಕ್ಟರ್ ಪರಾರಿ : ಮುಖ್ಯಪೇದೆ ಶಿವಮಾಧು ಹಾಗೂ ಪೇದೆ ಶಿವಪ್ರಸಾದ್ ಅವರು ಮಸಾಜ್ ಪಾರ್ಲರ್ ಮಾಲೀಕರಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಮಂಜುನಾಥ್ ಸಹ ಇದರಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ವಿಚಾರಣೆಗೆ ನಡೆಸಲು ಠಾಣೆಗೆ ಲೋಕಾಯುಕ್ತರು ಆಗಮಿಸುವ ವೇಳೆಗೆ ಮಂಜುನಾಥ್ ಅಲ್ಲಿಂದ ಪರಾರಿಯಾಗಿದ್ದರು.

ಪ್ರಕರಣ ಇತ್ಯರ್ಥಕ್ಕೆ ಲಂಚ : ಮೈಕೊ ಲೇಔಟ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಂತ ಕುಮಾರ್ ಎಂಬುವವರು ಮಸಾಜ್ ಪಾರ್ಲರ್ ನಡೆಸುತ್ತಿದ್ದರು. ಕೆಲವು ದಿನಗಳ ಇಲ್ಲಿ ಕಾನೂನು ಬಾಹಿರ ಕೃತ್ಯ ನಡೆಯುತ್ತಿದೆ ಎಂದು ಪೊಲೀಸರು ದಾಳಿ ನಡೆಸಿದ್ದರು.

ಈ ಪ್ರಕರಣವನ್ನು ಇತ್ಯರ್ಥಪಡಿಸಲು ಪೊಲೀಸರು 2 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮೊದಲು ಹಣ ಕೊಡಲು ಒಪ್ಪದ ಅನಂತ ಕುಮಾರ್ ನಂತರ ಬಲವಂತ ಮಾಡಿದಾಗ ಒಪ್ಪಿಕೊಂಡಿದ್ದರು. ಅದರಂತೆ 50 ಸಾವಿರ ರೂ.ಗಳನ್ನು ಮಂಗಳವಾರ ರಾತ್ರಿ ನೀಡುವುದಾಗಿ ಹೇಳಿದ್ದರು.

ಈ ಕುರಿತು ಅನಂತ ಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು ಲಂಚ ಪಡೆಯುವಾಗ ಹಿಡಿಯಬೇಕೆಂದು ಕಾರ್ಯತಂತ್ರ ರೂಪಿಸಿದ್ದರು. ಅದರಂತೆ ಮಂಗಳವಾರ ರಾತ್ರಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+