ಬಿಸಿಯೂಟ ನೌಕರರ ಪ್ರತಿಭಟನೆಯ ಫಲ: ವೇತನ 500ರೂ ಹೆಚ್ಚಳ

ಬೆಂಗಳೂರು, ಮಾರ್ಚ್ 06: ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಗೌರವ ಧನ 500 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ, ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೂ ಸಿಹಿ ಸುದ್ದಿಯನ್ನು ನೀಡಿದೆ.

ಬಿಸಿಯೂಟ ಅಡುಗೆ ಸಿಬ್ಬಂದಿಗಳ ಗೌರವ ಧನವನ್ನ 500 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ಹಾಗು ಅನುದಾನಿತ ಶಾಲೆಗಳಲ್ಲಿನ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುವ ಮುಖ್ಯ ಅಡುಗೆಯವರು ಹಾಗೂ ಅಡುಗೆ ಸಹಾಯಕರಿಗೆ ಮಾಸಿಕ 500 ರೂ. ಗೌರವ ಧನ ಹೆಚ್ಚಳವಾಗಿದೆ. ಜನವರಿಯಿಂದಲೇ ವೇತನ ಹೆಚ್ಚಳ ಆದೇಶ ಪೂರ್ವಾನ್ವಯವಾಗಲಿದೆ.

Mid-day meal workers get Rs 500 hike after protest

ಈ ಮೊದಲು ಗೌರವ ಧನ ಹೆಚ್ಚಳಕ್ಕಾಗಿ ಬಿಯೂಟ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಇದರು, ಅವರ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಲಾಗಿತ್ತು. ಇದೀಗ 500 ರೂ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ಮತ್ತು ಬಿಸಿಯೂಟ ಸಿಬ್ಬಂದಿ ಗೌರವ ಧನ ಹೆಚ್ಚಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಜನರನ್ನ ಸೆಳೆಯಲು ಮುಂದಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+