ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಸಿಯೂಟ ಯೋಜನೆಯ ಖಾಸಗೀಕರಣ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 3: ಬಿಸಿಯೂಟ ಯೋಜನೆಯ ಖಾಸಗೀಕರಣ ವಿರೋಧಿಸಿ ಬಿಡಿಯೂಟ ಕಾರ್ಯಕರ್ತೆಯರು ಬೆಂಗಳೂರಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನೆ ಆರಂಭಿಸಿದ್ದಾರೆ, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂತೆದುಕೊಳ್ಳಬಾರದು ಎಂದು ನಿರ್ಧರಸಿದ್ದಾರೆ.

ತೀವ್ರಗೊಂಡ ಬಿಸಿಯೂಟ ನೌಕರರ ಪ್ರತಿಭಟನೆ: ಬೇಡಿಕೆಗಳೇನು?ತೀವ್ರಗೊಂಡ ಬಿಸಿಯೂಟ ನೌಕರರ ಪ್ರತಿಭಟನೆ: ಬೇಡಿಕೆಗಳೇನು?

ಪ್ರತಿಭಟನೆಗೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ಆರಂಭಿಸಿರುವುದಕ್ಕಾಗಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Midday Meal Workers Protest Begins Once Again

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಹೋರಾಟ ಹಮ್ಮಿಕೊಂಡಿದ್ದಾರೆ.

ಹೋರಾಟದಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ, ಈಗಾಗಲೇ 4 ಸಾವಿರ ಕ್ಕೂ ಹೆಚ್ಚು ಮಂದಿ ಆಗಮಿಸಿದ್ದಾರೆ.ಈ ಹಿಂದೆ ಸಂಘಟನೆ ರಸ್ತೆಯಲ್ಲೇ ಅಹೋರಾತ್ರಿ ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಹಲವು ಸಮಸ್ಯೆಗಳಿಗೆ ಕಾರಣವಾಗಿತ್ತು.

ಸ್ವಾತಂತ್ರ್ಯ ಉದ್ಯಾನದಲ್ಲಿ 2ರಿಂದ ಎರಡೂವರೆ ಸಾವಿರ ಮಂದಿ ಮಾತ್ರ ಸೇರಬಹುದು. ಹೆಚ್ಚಿನ ಜನರು ಸೇರಲು ಸಾಧ್ಯವಿಲ್ಲ. ಅನುಮತಿ ಅರ್ಜಿಯಲ್ಲಿ ಫೆ.3ರಂದು ಪ್ರತಿಭಟನೆ ಎಂದು ಉಲ್ಲೇಖಿಸಿದ್ದಾರೆ. ಆದರೆ ಕರಪತ್ರದಲ್ಲಿ ಅನಿರ್ಧಿಷ್ಠಾವಧಿ ಹೋರಾಟ ಎಂದು ಹೇಳಲಾಗುತ್ತಿದೆ.

English summary
Midday Meal Workers Protest Begins Once Again in Bengaluru. About 15 Thousand workers have threatened to launch indefinite protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X