ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು. 8-9 ರಂದು ನಾಗರಬಾವಿಯಲ್ಲಿ ಸಾವಯವ-ಸಿರಿಧಾನ್ಯ ಮೇಳ

|
Google Oneindia Kannada News

ಬೆಂಗಳೂರು, ಜುಲೈ 5: ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಕೃಷಿ ಇಲಾಖೆ, ಜೈವಿಕ್ ಕೃಷಿಕ್ ಸೋಸೈಟಿ (ರಿ.) ಸಹಯೋಗಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಆಯೋಜಿಸಿದೆ. ಬೆಂಗಳೂರಿನ ನಾಗರಬಾವಿ ಸರ್ಕಲ್ ಹತ್ತಿರದ ಮೈದಾನದಲ್ಲಿ ಜುಲೈ 8 ಮತ್ತು 9 ರಂದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.30 ರವರೆಗೆ ಮೇಳ ನಡೆಯಲಿದ್ದು, ಪ್ರವೇಶ ಉಚಿತವಾಗಿದೆ.

ರೈತರು ತಾವು ಬೆಳೆದ ಗುಣಮಟ್ಟದ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ತಮ್ಮ ನೋಂದಾಯಿತ ಸಂಘಗಳ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳ ಅನುವು ಮಾಡಿಕೊಡಲಿದೆ. ಗ್ರಾಹಕರು ವಿವಿಧ ರೀತಿಯ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಬಹುದಾಗಿದೆ ಹಾಗೂ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳ ಗುಣಮಟ್ಟದ ಬಗ್ಗೆ ನೇರವಾಗಿ ಉತ್ಪಾದಕರು ಹಾಗೂ ಸರಬರಾಜುದಾರರೊಂದಿಗೆ ವಿಚಾರ ವಿನಿಮಯಕ್ಕೂ ಇಲ್ಲಿ ಅವಕಾಶವಿದೆ.

Millet fest in Bengaluru on July 8th and 9th

ಜು. 8 ರಂದು ಪ್ರಾರಂಭವಾಗಲಿರುವ ಈ ಮೇಳವನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಉದ್ಘಾಟಿಸಲಿದ್ದು, ವಸತಿ ಸಚಿವ ಎಂ ಕೃಷ್ಣಪ್ಪನವರು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಸಾವಯವ ಕೃಷಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ, ಸೋಮಶೇಖರ್ ಜಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

Millet fest in Bengaluru on July 8th and 9th

ಉದಲು ಪಿಜ್ಜಾ ಸವಿಯಿರಿ
ಮೇಳದಲ್ಲಿ ಉದಲು ಪಿಜ್ಜಾ, ರಾಗಿ ಕೇಕ್, ಬರಗು ಸಮೋಸ, ಸಾಮೆ ಅಣಬೆ ಬಿರಿಯಾನಿ, ನವಣೆ ಕಟ್‍ಲೆಟ್, ನವಣೆ ಬ್ರೆಡ್, ಜೋಳದ ಜೀರಾ ಲಸ್ಸಿ, ನವಣೆ ಪೊಂಗಲ್, ಹಾರಕ ಬಿಸಿಬೇಳೆಬಾತ್, ಸಾಮೆ ಪಾಯಸ, ಸಜ್ಜೆ ರೊಟ್ಟಿ, ಸಾಮೆ ಚೌಚೌಬಾತ್ ಸೇರಿದಂತೆ ಹಲವು ಖಾದ್ಯಗಳನ್ನು ಸವಿಯಬಹುದಾಗಿದೆ.

Millet fest in Bengaluru on July 8th and 9th

ಸಿರಿಧಾನ್ಯಗಳ ಖಾದ್ಯ ತಯಾರಿಕಾ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳಿಂದ ತಯಾರಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಹೈಡ್ರೋಪೋನಿಕ್ಸ್ ಮತ್ತು ಟೆರೇಸ್ ಗಾರ್ಡನಿಂಗ್ ಬಗ್ಗೆ ಪ್ರಾತ್ಯಕ್ಷಿಕೆ, ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಮೇಳದ ಪ್ರಮುಖ ಆಕರ್ಷಣೆಗಳಾಗಿರಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಪ್ರಯೋಜನ ಪಡೆಯಲು ಕೋರಲಾಗಿದೆ.

English summary
Millet fest will be held in Nagarabhavi, Bengaluru on July 8th, 9th. To create awareness about the health benifits of Millets the programme is organising.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X