ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಾವುದೇ ಕಾರಣಕ್ಕೂ ಗಣಿಗಾರಿಕೆ, ಕಲ್ಲು ಕ್ವಾರಿ ನಿಷೇಧವಿಲ್ಲ: ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಫೆಬ್ರವರಿ 2: ಸರ್ಕಾರದಿಂದ ಪರವಾನಗಿ ಪಡೆದಿರುವ ಗಣಿ ಹಾಗೂ ಕಲ್ಲು ಕ್ವಾರಿಗಳ ಮೇಲೆ ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.

ಕಾನೂನು ಬಾಹಿರವಾಗಿ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನು ಬದ್ಧವಾಗಿದ್ದರೆ ಯಾರೂ ಕೂಡ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದರು‌.

ಶಿವಮೊಗ್ಗ ಸ್ಪೋಟ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂಶಿವಮೊಗ್ಗ ಸ್ಪೋಟ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ

ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ಅಥವಾ ಕಲ್ಲು ಕ್ವಾರಿ ಚಟುವಟಿಕೆ ನಿಷೇಧಿಸಲು ಸಾಧ್ಯವಿಲ್ಲ. ಹಾಗೊಂದು ವೇಳೆ ಅಂತಹ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದರು.

Mining And Stone Quarry Cannot Be Banned: CM Yediyurappa

ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳಿಂದ ಲೈಸನ್ಸ್ ಪಡೆಯಬೇಕು. ಒಂದು ವೇಳೆ ಲೈಸನ್ಸ್ ಪಡೆಯದೆ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Recommended Video

ರಾಜ್ಯ ರಾಜಕೀಯದಲ್ಲಿ 'ಡಿನ್ನರ್' ಪಾಲಿಟಿಕ್ಸ್..! | Oneindia Kannada

ಸಿಎಂ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಹುಣಸೋಡುವಿನಲ್ಲಿ ಇತ್ತೀಚಿಗೆ ಕ್ರಷರ್ ಬಳಿ ಜಿಲೆಟಿನ್ ಸ್ಪೋಟಗೊಂಡು ೬ ಕಾರ್ಮಿಕರು ಮೃತಪಟ್ಟಿದ್ದರು. ಇದು ದೇಶಾದ್ಯಂತ ಸುದ್ದಿಯಾಗಿತ್ತು. ಮೃತ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ. ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಲ್ಲೆಡೆ ಒತ್ತಾಯ ಕೇಳಿಬಂದಿತ್ತು.

English summary
Chief Minister BS Yediyurappa told the assembly that the authorities have been instructed not to take any legal action against the government's licensed mines and quarries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X