ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಶನಿವಾರ ಗಣಿ ಹೂಡಿಕೆದಾರರ ಸಮಾವೇಶ: ಪ್ರಲ್ಹಾದ್ ಜೋಶಿ

|
Google Oneindia Kannada News

ಬೆಂಗಳೂರು, ಡಿ. 01: ಡಿಸೆಂಬರ್ 03ರ ಶನಿವಾರದಂದು ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬೈನಲ್ಲಿ ಗುರುವಾರ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.

ಮುಂಬೈನಲ್ಲಿ‌ ನಡೆದ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು ಸಮಾವೇಶದಲ್ಲಿ ಭಾಗವಹಿಸಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೂಡಿಕೆದಾರರಿಗೆ ಆಹ್ವಾನ ನೀಡಿದ್ದಾರೆ.

ಬೆಳಗಾವಿ-ಹುನಗುಂದ-ರಾಯಚೂರು ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುಮೋದನೆಬೆಳಗಾವಿ-ಹುನಗುಂದ-ರಾಯಚೂರು ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುಮೋದನೆ

ಮುಂಬೈ, ಬೆಂಗಳೂರಿನ ಹೂಡಿಕೆದಾರರ ಸಮಾವೇಶಗಳು ಭಾರತದಲ್ಲಿನ ಗಣಿಗಾರಿಕೆ ಕ್ಷೇತ್ರದ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಣಿಜ್ಯ ಗಣಿ ಹರಾಜು ಮತ್ತು ದೇಶದ ಗಣಿಗಾರಿಕೆ ವಲಯದಲ್ಲಿ ವಿವಿಧ ಅವಕಾಶಗಳ ಕುರಿತು ಸಮಾವೇಶವನ್ನು ನಡೆಸಲಾಗುತ್ತಿದೆ. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಧ ವಾಣಿಜ್ಯ ಗಣಿಗಳ ಮೆಗಾ ಹರಾಜು ಕುರಿತು ಹೂಡಿಕೆದಾರರಿಗೆ ಮಾಹಿತಿ ಒದಗಿಸುವುದಾಗಿ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Mining Investors Conference in Bengaluru on 3rd December

ಭಾರತವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ವಿದ್ಯುತ್ ಉತ್ಪಾದನೆ ಅವಶ್ಯಕವಾಗಿದೆ. ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಉತ್ಪಾದನೆ ಹೆಚ್ವಳಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಮುಂಬೈ ನಲ್ಲಿ ನಡೆದ ಸಮಾವೇಶದಲ್ಲಿ ಮಹಾರಾಷ್ಟ್ರಕ್ಕೆ 13 ಕಲ್ಲಿದ್ದಲು ಬ್ಲಾಕ್ಸ್ ಗಳನ್ನ ನೀಡಲಾಗಿದೆ. ಇದರಲ್ಲಿ 5 ಗಣಿ ಬ್ಲಾಕ್ಸ್ ಗಳು ಸಂಪೂರ್ಣವಾಗಿ ಅನ್ವೇಷಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಬಳಕೆಯನ್ನು ಇನ್ನಷ್ಟು ಸುಧಾರಿಸುವ ಮಾರ್ಗಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಸಚಿವ ಪ್ರಲ್ಹಾದ್ ಜೋಶಿ ಸಭೆ ನಡೆಸಿದ್ದಾರೆ.

ಕಲ್ಲಿದ್ದಲು ವ್ಯಾಗನ್‌ಗಳ ಇಳಿಸುವಿಕೆಯ ಸಮಯವನ್ನು ಸುಧಾರಿಸಲು ಒತ್ತು ನೀಡುವುದು ಸೇರಿದಂತೆ ದೀರ್ಘಾವಧಿಯ ಕಲ್ಲಿದ್ದಲು ದಾಸ್ತಾನು ನಿರ್ಮಿಸಲು ಆರ್‌ಎಸ್‌ಆರ್ (ರೈಲ್ ಕಮ್ ಸೀ) ಮೋಡ್ ಅನ್ನು ಅನ್ವೇಷಿಸಲು ಪ್ರಲ್ಹಾದ್ ಜೋಶಿ ಸೂಚಿಸಿದ್ದಾರೆ.

ರೋಡ್ ಮೋಡ್ ಮತ್ತು ರೋಪ್‌ವೇ ಮೂಲಕ 40,000 TPD ಕಲ್ಲಿದ್ದಲನ್ನು ಎತ್ತಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರತರಾಗುವಂತೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿರ್ದೇಶನ ನೀಡಿದ್ದಾರೆ.

English summary
An investor conference will be held in Bengaluru on Saturday, December 03 says Coal and Mines union Minister Pralhad Joshi in mumbai. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X