ಮಲ್ಲೇಶ್ವರದಲ್ಲಿ ಶ್ರೀಸ್ಟಾರ್ ಗೋಲ್ಡ್ ಮಾಲ್ ಉದ್ಘಾಟಿಸಿದ ಅಶೋಕ
ಬೆಂಗಳೂರು ಮಾರ್ಚ್ 6: ಶ್ರೀ ಸ್ಟಾರ್ ಗೋಲ್ಡ್ ಕಂಪನಿಯ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಅಡವಿಟ್ಟ ಚಿನ್ನವನ್ನು ಬಿಡಿಸಿ ಮಾಲೀಕರಿಗೆ ಬಾಡಿಗೆಗೆ ನೀಡುವ ವಿನೂತನ ಯೋಜನೆಗೆ ಕಂದಾಯ ಸಚಿವ ಆರ್ ಅಶೋಕ್ ಅವರು ಚಾಲನೆ ನೀಡಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಆಭರಣಗಳ ಮೇಲೆ ತಕ್ಷಣ ಹಣ ನೀಡುವ ಪರಿಕಲ್ಪನೆಯನ್ನು ಪ್ರಾರಂಭಿಸಿದ ಶ್ರೀಸ್ಟಾರ್ ಗೋಲ್ಡ್ ಕಂಪನಿಯ ವತಿಯಿಂದ ಮಲ್ಲೇಶ್ವರದಲ್ಲಿ ನಿರ್ಮಿಸಿರುವ ಚಿನ್ನಾಭರಣಗಳ ಮಾರಾಟ ಹಾಗೂ ಚಿನ್ನಾಭರಣಗಳಿಗೆ ತಕ್ಷಣ ಹಣ ನೀಡುವ ಶ್ರೀಸ್ಟಾರ್ ಗೋಲ್ಡ್ ಮಾಲ್ ಗೆ ಇದೇ ವೇಳೆ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಸಚಿವರು, ಚಿನ್ನಾಭರಣಗಳ ಮಾರಾಟ ಅಂಗಡಿ ಶ್ರೀ ಸ್ಟಾರ್ ಗೋಲ್ಡ್ ಮಾಲ್‌ನ್ನು ಮಲ್ಲೇಶ್ವರದಲ್ಲಿ ಪ್ರಾರಂಭ ಮಾಡಿದ್ದು ಉತ್ತಮ ಯೋಜನೆಗಳನ್ನು ನೀಡಲಾಗುತ್ತಿದೆ. ಈ ಅಂಗಡಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು.

ಶ್ರೀಸ್ಟಾರ್ ಗೋಲ್ಡ್ ಕಂಪನಿಯ ಮಾಲೀಕರಾದ ಶ್ರೀಕಾಂತ್ ಮಾತನಾಡಿ, 1999 ರಲ್ಲಿ ಕೇವಲ ಲೇವಾದೇವಿಗಾರರು ಕಾರ್ಯನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ಜನರು ತಮಗೆ ಅಗತ್ಯವಿರದೇ ಇರುವ ಆಭರಣಗಳನ್ನು ಮಾರಾಟ ಮಾಡಲು ಇನ್ನಿಲ್ಲದ ಅಪಮಾನ, ಸಂಕೋಚ ಹಾಗೂ ಪ್ರಶ್ನೆಗಳನ್ನು ಎದುರಿಸಬೇಕಾಗಿತ್ತು. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾರಂಭಿಸಲಾದ ಕ್ರಾಂತಿಕಾರಿ ಪರಿಕಲ್ಪನೆಯಿಂದ ದೇಶದಲ್ಲೇ ಆಭರಣಗಳಿಗೆ ತಕ್ಷಣ ಹಣ ನೀಡುವ ಮೊದಲ ಕಂಪನಿಯಾಗಿ ಶ್ರೀಸ್ಟಾರ್ ಹೆಸರು ಪಡೆದಿದೆ.
ಗ್ರಾಹಕರು ತಾವು ಅಡವಿಟ್ಟ ಚಿನ್ನವನ್ನು ಪೂರ್ತಿ ಹಣ ನೀಡದೆ ಬಿಡಿಸಿಕೊಳ್ಳಲು ಆಗುವುದಿಲ್ಲ. ಇದರಿಂದಾಗಿ ಅವರು ತಮ್ಮ ಆಭರಣಗಳು ಇದ್ದರೂ ಇಲ್ಲದ ಹಾಗೆ ಜೀವನ ಮಾಡಬೇಕಾಗುತ್ತದೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ನಾವು ದೇಶದಲ್ಲೇ ಮೊದಲ ಬಾರಿಗೆ ವಿನೂತನ ಯೋಜನೆಯೊಂದನ್ನು ಜಾರಿಗೊಳಿಸಿದ್ದೇವೆ.

Recommended Video
ಜನರು ಅಡವಿಟ್ಟ ಚಿನ್ನವನ್ನು ನಾವು ಬಿಡಿಸಿ ಅದನ್ನು ಅದರ ಮಾಲೀಕರುಗಳೀಗೆ ಬಾಡಿಗೆ ರೂಪದಲ್ಲಿ ನೀಡುತ್ತೇವೆ. ಇದಕ್ಕಾಗಿ ನಾವು ಪಡೆಯುವುದು ಬಹಳ ಕಡಿಮೆ ಬಡ್ಡಿದರವನ್ನು. ಇದಲ್ಲದೆ, ಚಿನ್ನಾಭರಣಗಳಿಗೆ ತಕ್ಷಣ ಹಣ ನೀಡುವುದಲ್ಲದೆ, ಕೊಂಡುಕೊಂಡಂತಹ ಚಿನ್ನಾಭರಣಗಳನ್ನು ಕಡಿಮೆ ವೆಸ್ಟೇಜ್ ಹಾಗೂ ಮೇಕಿಂಗ್ ಚಾರ್ಜ್‌ನಲ್ಲಿ ಗ್ರಾಹಕರು ಕೊಂಡುಕೊಳ್ಳಲು ಅವಕಾಶ ನೀಡಲು ಗೋಲ್ಡ್ ಮಾಲನ್ನು ಪ್ರಾರಂಭಿಸಿದ್ದೇವೆ ಎಂದು ಹೇಳೀದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications