ಜನರಿಗಾಗಿ ಆರೋಗ್ಯ ಸಚಿವ ಶ್ರೀರಾಮುಲು ಇಟ್ಟ ಬೇಡಿಕೆ ಏನು?
ಬೆಂಗಳೂರು, ಜ. 27: ತಮಗಾಗಿ ಅಲ್ಲ ಜನರಿಗಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎದುರು ಬಹುದೊಡ್ಡ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, ನಾನು ಡಿಸಿಎಂ ಆಗಬೇಕು ಎಂಬುದು ನನ್ನ ಬೇಡಿಕೆ ಅಲ್ಲ. ನನ್ನನ್ನು ತಪ್ಪು ತಿಳಿಯಬೇಡಿ. ಅದು ಜನರ, ನಮ್ಮ ಸಮಾಜ ಮತ್ತು ಇತರ ಸಮುದಾಯದವರ ಬೇಡಿಕೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಯಾರಿಗೆ ಯಾವ ಸಮಯದಲ್ಲಿ ಏನೇನು ಕೊಡಬೇಕು ಎಂಬುದನ್ನು ಪಕ್ಷದ ತೀರ್ಮಾನ ಮಾಡುತ್ತದೆ. ಪಕ್ಷದ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ. ಆದರೆ ಜನರ ಬೇಡಿಕೆಯನ್ನು ನಾನು ಅಲುಗಾಡಿಸಲು ಹೋಗುವುದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದೆ. ಸಂಪುಟ ವಿಸ್ತರಣೆ ಬಗ್ಗೆ ನಮಗೆ ಯಾವುದೆ ಮಾಹಿತಿ ಬಂದಿಲ್ಲ. ಸಂಪುಟ ಪುನರ್ ರಚನೆ ಮಾಡುವುದಿಲ್ಲ ಎಂದು ಶ್ರೀರಾಮುಲು ಅವರು ಹೇಳಿದ್ದಾರೆ.

ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆಯನ್ನು ಕೊಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾಹಿತಿಯಿದೆ. ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಶ್ರೀರಾಮುಲು ಅವರೂ ಕೂಡ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದಾರೆ.












Click it and Unblock the Notifications