ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್!

|
Google Oneindia Kannada News

ಬೆಂಗಳೂರು, ಜುಲೈ 11: ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೊನಾ ವೈರಸ್ ತಗುಲಿದೆ. ಸೋಂಕು ಖಚಿತವಾಗುತ್ತಿದ್ದಂತೆ ಹೋಮ್ ಕ್ವಾರಂಟೈನ್‌ಗೆ ಸಿಟಿ ರವಿ ಒಳಪಟ್ಟಿದ್ದಾರೆ.

Recommended Video

Drone Prathap ಇಷ್ಟು ದಿನ ಹೇಳಿದ್ದೆಲ್ಲಾ ಸುಳ್ಳಾ ? | Oneindia Kannada

ಈ ಕುರಿತು ಸ್ವತಃ ಸಿಟಿ ರವಿ ಅವರು ಟ್ವೀಟ್ ಮಾಡಿದ್ದು, ''ನಾನು ಕ್ಷೇಮವಗಿದ್ದೇನೆ. ಕೊರೊನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ'' ಎಂದು ಮಾಹಿತಿ ನೀಡಿದ್ದಾರೆ.

Minister C T Ravi tests positive for coronavirus

ಕೊವಿಡ್ ಬಿಕ್ಕಟ್ಟಿನ ವೇಳೆ ಚಿಕ್ಕಮಗಳೂರು ಕ್ಷೇತ್ರ ಹಾಗೂ ರಾಜ್ಯದ ಹಲವು ಕಡೆ ಸಂಚರಿಸಿದ್ದರು. ಕೊರೊನಾ ಸೋಂಕಿತ ಪ್ರದೇಶಗಳಿಗೂ ಭೇಟಿ ನೀಡಿದ್ದರು.

ಅಂದ್ಹಾಗೆ, ಕರ್ನಾಟಕದಲ್ಲಿ ಈಗಾಗಲೇ ಏಂಟು ಜನ ರಾಜಕೀಯ ನಾಯಕರಿಗೆ ಕೊವಿಡ್ ತಗುಲಿದೆ. ಮಾಜಿ ಕೇಂದ್ರ ಸಚಿವ, ದಕ್ಷಿಣ ಕನ್ನಡದ ಮಾಜಿ ಸಂಸದ ಜನಾರ್ದನ ಪೂಜಾರಿ, ಮಾಜಿ ಉಪಸಭಾಪತಿ ಪುಟ್ಟಣ್ಣ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯ, ಚಿಕ್ಕಮಗಳೂರಿನ ಪ್ರಾಣೇಶ್ ಎಂ.ಕೆ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡಗೆ ಕೊವಿಡ್ ಅಂಟಿಕೊಂಡಿದೆ.

English summary
Tourism Minister C T Ravi tests positive for coronavirus today. presently he was in home quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X