ಸಚಿವ ಸಿ.ಟಿ. ರವಿ ಅವರಿಗೂ ಕೊರೊನಾವೈರಸ್ ಸೋಂಕು; ಪತ್ನಿ ಸೇಫ್

ಬೆಂಗಳೂರು, ಜುಲೈ.13: ನೊವೆಲ್ ಕೊರೊನಾವೈರಸ್ ಸೋಂಕಿನ ಭೀತಿ ಮುಖ್ಯಮಂತ್ರಿ ಆದಿಯಾಗಿ ಸಚಿವರು, ಸಂಸದರು, ಶಾಸಕರನ್ನೂ ಬೆನ್ನು ಬಿಡದೇ ಕಾಡುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾವೈರಸ್ ಸೋಂಕು ತಗಲಿದೆ.

Recommended Video

      C T ರವಿಗೂ ತಗುಲಿದ ಕೊರೊನ | Oneindia kannada

      ಭಾನುವಾರ ನಡೆಸಿದ ಕೊರೊನಾವೈರಸ್ ಸೋಂಕು ತಪಾಸಣೆ ಸಂದರ್ಭದಲ್ಲಿ ಸಚಿವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

      "ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ" ಎಂದು ಟ್ವೀಟ್ ಮಾಡಿದ್ದಾರೆ.

       Minister CT Ravi Tests Positive For Coronavirus. His Wife And Staff Members Test Negative.

      ಮನೆಯಲ್ಲಿ ಇದ್ದುಕೊಂಡೇ ಕೆಲಸ ಮಾಡುತ್ತೇನೆ:

      "ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ" ಎಂದು ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+