ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಾಗ್ರಾಮ ಕಟ್ಟಡ ನಿರ್ಮಾಣ ಕಾಮಗಾರಿ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಜೂನ್ 23: ಬೆಂಗಳೂರಿನ ಕಲಾಗ್ರಾಮ ಕಟ್ಟಡ ನಿರ್ಮಾಣದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಮಾತನಾಡಿದ್ದಾರೆ. ಇಂದು ಭೇಟಿ ನೀಡಿದ ಅವರು ಕಾಮಗಾರಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Recommended Video

ಪೌರಕಾರ್ಮಿಕರು ನೀರು ಕೇಳಿದ್ದಕ್ಕೆ ಅಮಾನವೀಯವಾಗಿ ನಡೆದುಕೊಂಡ‌ ಮಹಿಳೆ | Oneindia Kannada

ವರ್ಷಗಳ ಹಿಂದೆ ವಿದ್ಯುತ್ ಅವಘಡದಿಂದ ಕಟ್ಟಡ ಹಾಳಾಗಿತ್ತು. ಅದರ ಕಾಮಗಾರಿ ಆದಷ್ಟು ಬೇಗ ಮುಗಿಸಿಕೊಡುವಂತೆ ರಂಗ ತಂಡಗಳು ಸರ್ಕಾರಕ್ಕೆ ಮನವಿ ಮಾಡಿದವು. ಸರ್ಕಾರ ಈ ಬಗ್ಗೆ ಗಮನ ನೀಡಿದೆ ಇರುವಾಗ ಪ್ರತಿಭಟನೆಯನ್ನು ಸಹ ಮಾಡಲಾಗಿತ್ತು.

ಚಿಕ್ಕಮಗಳೂರು: ಪ್ರವಾಸೋದ್ಯಮ ತಾಣವಾಗಿ ಅಯ್ಯನಕೆರೆ ಅಭಿವೃದ್ಧಿಚಿಕ್ಕಮಗಳೂರು: ಪ್ರವಾಸೋದ್ಯಮ ತಾಣವಾಗಿ ಅಯ್ಯನಕೆರೆ ಅಭಿವೃದ್ಧಿ

ಇದೀಗ ಸಿಟಿ ರವಿ ಕಲಾಗ್ರಾಮಕ್ಕೆ ಭೇಟಿ ನೀಡಿ, ಕಟ್ಟಡ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕಟ್ಟಡದ ಕಾಮಗಾರಿ ಸಂಪೂರ್ಣವಾಗಲು ಇನ್ನೂ 30 ಕೋಟಿ ಅನುದಾನದ ಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಮುಂದಿನ ಆಯವ್ಯಯದಲ್ಲಿ ಅನುದಾನ ಸಿಗಬಹುದು ಎನ್ನುವ ಭರವಸೆಯನ್ನು ನೀಡಿದರು.

Minister CT Ravi Visited Kalagrama Bengaluru Today

300 ಆಸನಗಳುಳ್ಳ ಸಭಾಂಗಣ ನಿರ್ಮಾಣ, ಬಯಲು ರಂಗಮಂದಿರದಲ್ಲಿ ಸಹ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡಿಕೊಳ್ಳುವಂತೆ ಎರಡು ಪ್ರಸಾದನ ಕೊಠಡಿ, ಡಿಪ್ಲೊಮಾ ಕೋರ್ಸ್‍ಗಳ ಕಟ್ಟಡ ನಿರ್ಮಾಣ, ಕಲಾಗ್ರಾಮದ ಪ್ರವೇಶದ್ವಾರದ ಪಕ್ಕದಲ್ಲಿ ಟೈಮ್ ಆಫೀಸ್ ಹೀಗೆ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆಯಂತೆ.

ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದರೆ, ಅಧಿಕಾರಿಗಳು ಜವಾಬ್ದಾರಿಯಾಗಿರುತ್ತಾರೆ. ಒಂದು ವೇಳೆ ಸಣ್ಣಪುಟ್ಟ ದೋಷ ಆದರೆ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವುದು ಎಂದು ಸಿಟಿ ರವಿ ಎಚ್ಚರಿಕೆ ನೀಡಿದ್ದಾರೆ.

ಆದಷ್ಟು ಬೇಗ ಕಾಮಗಾರಿ ಮುಗಿಯಲಿದ್ದು, ರಂಗ ಚಟುವಟಿಕೆಗಳನ್ನು ಪ್ರಾರಂಭ ಮಾಡಬಹುದು ಎಂದು ಸಿಟಿ ರವಿ ತಿಳಿಸಿದ್ದಾರೆ.

English summary
Kannada & Culture and Tourism Minister CT Ravi visited kalagrama bengaluru today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X