ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡದಿರುವುದಕ್ಕೆ ಡಿಕೆಶಿ ಏನಂದ್ರು?

ಬೆಂಗಳೂರು, ಜನವರಿ 27 : ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡದಿರುವುದಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕಿತ್ತು, ಈ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ವಿಧಾನಸಭೆಯಲ್ಲೇ ನಿರ್ಣಯ ಮಾಡುತ್ತೇವೆ.

ಈಗಾಗಲೇ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಮತ್ತು ಸಂಸದರು ಮನವಿ ಮಾಡಿದ್ದಾರೆ. ಈ ವಿಚಾರದಲ್ಲಿ ಕೇಂದ್ರದ ಮೇಲೆ ಮತ್ತಷ್ಟುಒತ್ತಡ ಹೇರುತ್ತೇವೆ ಶಿವಕುಮಾರ್ ಹೇಳಿದರು.

Minister DK Shivakumar expressed disappointment

ಕಳೆದ ವರ್ಷದಿಂದಲೂ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಬೇಕೆಂಬ ಕೂಗು ಕೇಳಿಬರುತ್ತಲೇ ಇತ್ತು. ಈ ವರ್ಷ ಮರಣೋತ್ತರವಾಗಿಯಾದರೂ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಅಭಿಯಾನಗಳೂ ನಡೆದಿದ್ದವು.

ಆದರೆ, ಈ ಬಾರಿ ಪ್ರಣಬ್ ಮುಖರ್ಜಿ ಸೇರಿ ಅಸ್ಸಾಮಿ ಗಾಯಕ ಭೂಪೇನ್ ಹಜಾರಿಕಾ ಮತ್ತು ಭಾರತೀಯ ಜನಸಂಘದ ನಾಯಕ ನಾನಾಜೀ ದೇಶಮುಖ್ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಸಮಾಧಾನ ವ್ಯಕ್ತವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+