ಸರ್ವಜ್ಞ ನಗರದಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ, 90 ಯುವಕರಿಗೆ ತರಬೇತಿ
ಬೆಂಗಳೂರು ಸೆಪ್ಟೆಂಬರ್ 30: ಕೈಗಾರಿಕೆಗಳಿಗೆ ಅಗತ್ಯವಿರುವ ಸಿದ್ದ ತರಬೇತಿಯನ್ನು ನೀಡುತ್ತಿರುವ ಪಠ್ಯಕ್ರಮ ಹೊಂದಿರುವ ದೇಶದ ಪ್ರಮುಖ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದು. ರಾಜ್ಯದಲ್ಲಿ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಪಡೆದುಕೊಳ್ಳಲು ವಿಫುಲ ಅವಕಾಶಗಳನ್ನು ಕಲ್ಪಿಸಿದ್ದು, ಅದರ ಉಪಯೋಗ ಪಡೆದುಕೊಳ್ಳುವಂತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಸಿ.ಎನ್ ಅಶ್ವಥ್‌ನಾರಾಯಣ ಕರೆ ನೀಡಿದರು.
ಇಂದು ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಂಬೆಸಿ ಗಾಲ್ಫ್ ಲಿಂಕ್ಸ್ ಬಿಸಿನೆಸ್ ಪಾರ್ಕ್‌ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿರುವ ಮಾಜಿ ಸಚಿವ ಕೆ ಜೆ ಜಾರ್ಜ್ ಅವರು ಸಿಎಸ್‌ಆರ್ ನಿಧಿಯನ್ನು ಬಳಸಿಕೊಂಡು ನಿರ್ಮಿಸಿರುವ ಎರಡನೇ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲ ಬದಲಾದಂತೆ ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ದೇಶದ ಯುವ ಜನಾಂಗಕ್ಕೆ ಈ ಬಗ್ಗೆ ಸೂಕ್ತ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೌಶಲ್ಯಾಭಿವೃದ್ದಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿ ವರ್ಷ 20 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳ ನಿರ್ಮಾಣವಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ವಜ್ಞ ನಗರ ಶಾಸಕ ಹಾಗೂ ಮಾಜಿ ಸಚಿವರಾದ ಕೆ ಜೆ ಜಾರ್ಜ್, ಸಂಸದ ಪಿ ಸಿ ಮೋಹನ್, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಗೋವಿಂದರಾಜ್, ಪರಿಷತ್ ಸದಸ್ಯರಾದ ರಮೇಶ್ ಗೌಡ ಉಪಸ್ಥಿತರಿದ್ದರು.

ಶಿಕ್ಷಣ ಸಂಸ್ಥೆಗಳಲ್ಲಿ 41 ನೂತನ ಕೋರ್ಸ್
ನಮ್ಮ ರಾಜ್ಯದ ಅದರಲ್ಲೂ ನಗರದ ಯುವಜನಾಂಗ ಇದರ ಉಪಯೋಗವನ್ನು ಹೆಚ್ಚು ಪಡೆದುಕೊಳ್ಳಬೇಕು. ರಾಜ್ಯ ಸರಕಾರ ರಾಜ್ಯದ 150 ಐಟಿಐ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಅಭಿವೃದ್ದಿಗೊಳಿಸಿದೆ. ಈ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ 41 ನೂತನ ಕೋರ್ಸ್‌ಗಳನ್ನು ಅಳವಡಿಲಾಗಿದೆ. ಈ ತರಬೇತಿಯ ಪಠ್ಯಕ್ರಮ ಕೈಗಾರಿಕಾ ಸಿದ್ದವಾದಂತಹದ್ದಾಗಿದ್ದು, ಇಂತಹ ಪಠ್ಯಕ್ರಮ ಅಳವಡಿಸಿಕೊಂಡಿರುವ ಪ್ರಮುಖ ರಾಜ್ಯ ಎನ್ನುವುದು ನಮ್ಮ ಹೆಗ್ಗಳಿಕೆಯಾಗಿದೆ. ಈ ಶೈಕ್ಷಣಿಕ ಸಂಸ್ಥೆಗಳಲ್ಲಿ ಶುಲ್ಕ ಬಹಳ ಕಡಿಮೆಯಿದ್ದು, ಸರಕಾರದ ವತಿಯಿಂದ ಪ್ರತಿವರ್ಷ ಪ್ರತಿಯೊಬ್ಬ ವಿದ್ಯಾರ್ಥಿ ಮೇಲೆ ಸುಮಾರು 3 ಲಕ್ಷರೂಪಾಯಿಗಳ ವೆಚ್ಚವನ್ನು ಮಾಡಲಾಗುತ್ತದೆ. ಸರ್ವಜ್ಞ ನಗರದಲ್ಲಿ ಆರಂಭವಾಗಿರುವಂತಹ ಕೌಶಲ್ಯಾಭಿವೃದ್ದಿ ಕೇಂದ್ರಗಳು ಪ್ರಸ್ತುತ ಸನ್ನಿವೇಶದಲ್ಲಿ ಉದ್ಯೋಗ ಪಡೆಯಲು ಹಾಗೂ ಉದ್ಯೋಗದಲ್ಲಿ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಯೋಜನವಾಗಲಿವೆ ಎಂದು ಹೇಳಿದರು.

ಶಾಸಕ ಕೆ.ಜೆ ಜಾರ್ಜ್ ಮಾತನಾಡಿ
ಮಾಜಿ ಸಚಿವ ಮತ್ತು ಸರ್ವಜ್ಞ ನಗರ ಶಾಸಕರಾಗಿರುವ ಕೆ.ಜೆ ಜಾರ್ಜ್ ಮಾತನಾಡಿ, ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ಜೀವನಹಳ್ಳಿಯಲ್ಲಿ 2ನೇ ಕೌಶಲ್ಯಾಭಿದ್ದಿ ಕೇಂದ್ರ
ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಇಂದು ಉದ್ಘಾಟನೆಯಾಗಿರುವುದು ಎರಡನೇ ಕೌಶಲ್ಯಾಭಿದ್ದಿ ಕೇಂದ್ರವಾಗಿದೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್ ಬಾಸ್ಕೋ ಟೆಕ್ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್ ಮತ್ತು ಏರ್ ಕಂಡೀಷನರ್ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್ ಟೆಕ್ನೀಶಿಯನ್ ತರಬೇತಿ ಹಾಗೂ ಕಂಪ್ಯೂಟರ್ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್ ಹೇಳಿದರು.

ಸರಕಾರಿ ಶಾಲೆಗಳ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆ
* ಕೊರೊನಾದಿಂದಾಗಿರುವ ನಿರುದ್ಯೋಗ ಸಮಸ್ಯೆ ನಿವಾರಿಸಲು ಸರ್ವಜ್ಞ ನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ.
* ನಗರದ ವಿವಿಧ ಭಾಗದ ಯುವಕರಿಗೂ ತರಬೇತಿಯ ಜೊತೆಯಲ್ಲಿ ಉದ್ಯೋಗ ದೊರಕಿಸುವ ವ್ಯವಸ್ಥೆ ಸಿಗಲಿದೆ.
* ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಅಶ್ವಥ್ ನಾರಾಯಣ ಅವರಿಂದ ಸೆಪ್ಟೆಂಬರ್ 30 ರಂದು ಈ ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ
* ಮಾಜಿ ಸಚಿವ ಕೆ.ಜೆ ಜಾರ್ಜ್ ಅವರ ಆಲೋಚನೆಯಂತೆ - ಮೊದಲ ಹಂತದಲ್ಲಿ 90 ಯುವಕರಿಗೆ ತರಬೇತಿ
* ಸಿಎಸ್‌ಆರ್ ಫಂಡ್ ಮೂಲಕ ಸರ್ವಜ್ಞನಗರದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರಕಾರಿ ಶಾಲೆಗಳ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆ
* ಅಂಗನವಾಡಿ ಕೇಂದ್ರ ಹಾಗೂ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳ ಗುಣಮಟ್ಟದಲ್ಲಿ ಪರಿವರ್ತನೆ
* 18 ಸರಕಾರಿ ಶಾಲೆಗಳು - 38 ಅಂಗನವಾಡಿಗಳು ಫುಲ್ ಹೈಟೆಕ್ ಆಗಲಿದೆ.
Recommended Video
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications