Get Updates
Get notified of breaking news, exclusive insights, and must-see stories!

ಸರ್ಕಾರವೇ ನೀಡಲಿದೆ ಸಾಲ, ಬಡ್ಡಿನೂ ಇಲ್ಲ, ಚಕ್ರಬಡ್ಡಿನೂ ಇಲ್ಲ

ಬೆಂಗಳೂರು, ಸೆಪ್ಟೆಂಬರ್ 4: ಸರ್ಕಾರವು ಒಂದು ದಿನ ಬಡ್ಡಿ ರಹಿತ ಸಾಲವನ್ನು ನೀಡಲು ಯೋಜನೆ ರೂಪಿಸುತ್ತಿದೆ, ಶೀಘ್ರವೇ ಯೋಜನೆಯನ್ನು ಆರಂಭಿಸಲಾಗುತ್ತಿದ್ದು, ಯೋಜನೆ ಕುರಿತು ಬೀದಿಬದಿ ವ್ಯಾಪಾರಿಗಳಿಗೆ ಸಚಿವ ಬಂಡೆಪ್ಪ ಕಾಶೆಂಪೂರ್ ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಬಡವರ ಬಂಧು ದಿನದ ಮಟ್ಟಿಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆಯ ಅನುಷ್ಠಾನಕ್ಕಾಗಿ ಸಚಿವ ಬಂಡೆಪ್ಪ ಕಾಂಶೆಂಪೂರ್ ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್ ನಲ್ಲಿ ಮಂಗಳವಾರ ಸಭೆ ನಡೆಸಿದರು.

ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಮೊಬೈಲ್ ಅಪ್ಲಿಕೇಷನ್ ಆಧಾರಿತ ಧನ ಸಹಾಯ ಮಾಡಲು ಮುಂದಾಗಿದೆ. ಬೀದಿಬದಿ ವ್ಯಾಪಾರಿಗಳು ತಮ್ಮ ದಿನದ ಹಸಿವನ್ನು ನೀಗಿಸಿಕೊಳ್ಳಲು ವ್ಯಾಪಾರ ನಡೆಸುತ್ತಿರುತ್ತಾರೆ. ಆದರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ. ಅವರಿಗೆ ಲಾಭ ಹಾಗಿರಲಿ ಅಲ್ಲಿ ವ್ಯಾಪಾರ ಮಾಡುವುದೇ ಕಷ್ಟವಾಗಿದೆ.

Minister Khasempur says curbing extortion is the govt aim

ಆದರೆ ರಾಜ್ಯ ಸರ್ಕಾರವು ಬಡವರ ಬಂಧು ಎನ್ನುವ ನೂತನ ಯೋಜನೆಯನ್ನು ಜಾರಿಗೆ ತರುತ್ತಿದ್ದು ಅದರಿಂದ ಮೀಟರ್ ಬಡ್ಡಿಯನ್ನು ಸುಲಭವಾಗಿ ನಿಲ್ಲಿಸಬಹುದಾಗಿದೆ ಜತೆಗೆ ಸರ್ಕಾರವು ಒಂದು ದಿನದ ಬಡ್ಡಿ ರಹಿತ ಸಾಲವನ್ನೂ ಕೂಡ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಈ ಸಮಸ್ಯೆಗಳಿಗೆ ಬ್ರೇಕ್ ಹಾಕಲು ಮೊಬೈಲ್ ಆಧಾರಿತ ಧನ ಸಹಾಯ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಬಂಡೆಪ್ಪ ಕಾಂಶೆಂಪೂರ್ ಅವರು ಮಾರುಕಟ್ಡೆಗೆ ಭೇಟಿ ನೀಡಿ ಬೀದಿಬದಿ ವ್ಯಾಪಾರಿಗಳ ಜತೆ ಮಾತುಕತೆ ನಡೆಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+