ಬೆಂಗಳೂರು ಉಪನಗರ ರೈಲು ಯೋಜನೆ ಅಪಡೇಟ್ ಕೊಟ್ಟ ಸಚಿವ ಎಂಬಿ ಪಾಟೀಲ್
ಬೆಂಗಳೂರು, ಆಗಸ್ಟ್ 11: ಬೆಂಗಳೂರು ಉಪನಗರ ರೈಲು ಯೋಜನೆಯು 148.17-ಕಿಮೀ ವರೆಗೆ ಎಲ್ಲಾ 4 ಕಾರಿಡಾರ್‌ಗಳಿಗೆ ಪೂರ್ಣಗೊಳ್ಳಲು 2028 ರವರೆಗೆ ಅವಧಿ ತೆಗೆದುಕೊಳ್ಳಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಖಾತೆ ಸಚಿವ ಎಂಬಿ ಪಾಟೀಲ್ ಹೇಳಿದರು.
ಉಪನಗರ ರೈಲ್ವೆ ಯೋಜನೆಯ ಯಶವಂತಪುರ- ಬೆನ್ನಿಗಾನಹಳ್ಳಿ ನಡುವಿನ ಕಾಮಗಾರಿಯನ್ನು ಎಂ.ಬಿ.ಪಾಟೀಲ ಶುಕ್ರವಾರ ಪರಿಶೀಲಿಸಿದರು. ಯೋಜನೆಗೆ ಪೂರ್ಣಗೊಳಿಸಲು ಇರುವ 2026ರ ಗಡುವನ್ನು ಉಳಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಆದರೆ ಕೇವಲ 2 ವರ್ಷಗಳ ಗ್ರೇಸ್ ಸಮಯವನ್ನು ಸೇರಿಸುತ್ತಿದ್ದೇನೆ ಎಂದು ಹೇಳಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಸೇರಿದಂತೆ ಇತರ ಅಧಿಕಾರಿಗಳು ಇದ್ದರು. ಜಾರ್ಜ್ ಅವರ ಕ್ಷೇತ್ರದಲ್ಲಿ ಬರುವ ಲಿಂಗರಾಜಪುರದಲ್ಲಿ ರೈಲ್ವೆ ತಡೆಗೋಡೆ, ಸೋಂಪುರದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳನ್ನು ಸಚಿವರು ಪರಿಶೀಲಿಸಿದರು. ಬಳಿಕ ಹೆಬ್ಬಾಳದಲ್ಲಿ ಉದ್ದೇಶಿತ ರೈಲ್ವೆ ನಿಲ್ದಾಣದ ಕಾಮಗಾರಿ ವೀಕ್ಷಣೆ ಮಾಡಿದರು.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿತ್ತು. ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ ಲಿಮಿಟೆಡ್ (ಕೆ-ರೈಡ್) ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಹತ್ತಿರದ ನಗರಗಳು ಮತ್ತು ಪಟ್ಟಣಗಳಿಗೆ ವಿಸ್ತರಿಸಲು 452 ಕಿಮೀ ಉದ್ದದ ಹೊಸ ಪ್ರಸ್ತಾವನೆ ಸಿದ್ಧಪಡಿಸಿದೆ ಮತ್ತು ಪೂರ್ವಭಾವಿ ಅಧ್ಯಯನ ನಡೆಸಲು ನೈರುತ್ಯ ರೈಲ್ವೆ ವಲಯದ ಅನುಮೋದನೆಯನ್ನು ಕೋರಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿತ್ತು.
ಕೋಲಾರ, ತುಮಕೂರು, ಮೈಸೂರು, ಬಂಗಾರಪೇಟೆ, ಹೊಸೂರು ಮತ್ತು ಗೌರಿಬಿದನೂರು ನಗರಗಳಿಗೆ ಬಿಎಸ್‌ಆರ್‌ಪಿ ನೆಟ್‌ವರ್ಕ್ ಅನ್ನು ವಿಸ್ತರಿಸುವ ಯೋಜನೆಯ ಹೊಸ ಪ್ರಸ್ತಾವನೆ ಕುರಿತು ನೈರುತ್ಯ ರೈಲ್ವೆ ವಲಯಕ್ಕೆ ಪತ್ರ ಬರೆಯಲಾಗಿತ್ತು. 2ನೇ ಹಂತದ ವಿಸ್ತರಣೆ ಒಟ್ಟು ಉದ್ದ 452 ಕಿ.ಮೀ ಉದ್ದವನ್ನು ಒಳಗೊಂಡಿದೆ. ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಹೀಳಲಿಗೆಯಿಂದ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬುದು ಈ ಪ್ರಸ್ತಾವನೆ ಒಳಗೊಂಡಿದೆ.
ಸದ್ಯಕ್ಕೆ ಪ್ರಗತಿಯಲ್ಲಿರುವ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆಯಲ್ಲಿ ಒಟ್ಟು ನಾಲ್ಕು ಕಾರಿಡಾರ್‌ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್ (25.01 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ಉದ್ದವಿದೆ.
ಈ ಯೋಜನೆಗೆ 177.22 ಎಕರೆ ಭೂಮಿ ಅಗತ್ಯವಿದೆ. ಈ ಪೈಕಿ ಈಗಾಗಲೇ 164 ಎಕರೆಯ ಸ್ವಾಧೀನ ಕಾರ್ಯ ಮುಗಿದಿದೆ. ಆದರೆ ಉಳಿದ 12.39 ಎಕರೆ ಭೂಮಿ ರಕ್ಷಣಾ ಇಲಾಖೆ ಮತ್ತು ಸರಕಾರದ್ದಾಗಿದ್ದು, ಸ್ವಲ್ಪ ಕಗ್ಗಂಟಾಗಿದೆ. ಕೆ-ರೈಡ್ ಅಧಿಕಾರಿಗಳು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿದ್ದಾರೆ. ಈ ಸಮಸ್ಯೆಯನ್ನು ಆದಷ್ಟು ಬೇಗನೆ ಬಗೆಹರಿಸಬೇಕಾಗಿದೆ. ಯೋಜನೆಯ ಭಾಗವಾಗಿ ಸೋಲದೇವನಹಳ್ಳಿ ಮತ್ತು ದೇವನಹಳ್ಳಿಯಲ್ಲಿ ಎರಡು ಡಿಪೋ ನಿರ್ಮಿಸಲಾಗುತ್ತದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications