MB Patil: ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂ.ಬಿ ಪಾಟೀಲ
ಬೆಂಗಳೂರು: ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ 2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ (ಅಕ್ಕ ಕೆಫೆ) ಸರ್ಕಾರವು 25 ಕೋಟಿ ರೂ. ಮಂಜೂರು ಮಾಡಿದೆ. ಇದರಿಂದ ಕಾಫಿ ಉದ್ಯಮದಲ್ಲಿ ಮೌಲ್ಯ ಸರಪಳಿಯ ಬಲವರ್ಧನೆ ಮತ್ತು ಉದ್ಯೋಗ ಸೃಷ್ಟಿಯ ಮೂಲಕ ಆರ್ಥಿಕ ಸಬಲೀಕರಣ ಸಾಧ್ಯವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಸ್ಪೆಷಾಲಿಟಿ ಕಾಫಿ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್.ಸಿ.ಎ.ಐ) ಸಂಘಟನೆಯು ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವವನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು. ಕಾಫಿ ಬೋರ್ಡ್ ಸಂಸ್ಥೆಯು ರಾಷ್ಟ್ರೀಯ ಜೀವನೋಪಾಯ ಮಿಷನ್-ಕರ್ನಾಟಕದ ಜತೆ ಕೈಜೋಡಿಸಿ, ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ರಾಜ್ಯದ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಬ್ರೂಯಿಂಗ್, ಕೆಫೆ ನಿರ್ವಹಣೆ ಮತ್ತು ಉದ್ಯಮಶೀಲತೆಗೆ ಸಂಬಂಧಿಸಿದ ತರಬೇತಿ ನೀಡುತ್ತಿದೆ. ಸರ್ಕಾರವು ಕೊಡಗು ಜಿಲ್ಲೆಯಲ್ಲಿ ಕಾಫಿ ತೋಟಗಳು ಮತ್ತು ದೊಡ್ಡ ಪ್ಲಾಂಟೇಷನ್ಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಉತ್ಸವದಲ್ಲಿ ಕಾಫಿ ಬೆಳೆಗಾರರು ತಮ್ಮ ಬೆಳೆಗಳನ್ನು ತಾವೇ ಬ್ರ್ಯಾಂಡ್ ಮಾಡಿ, ಇಲ್ಲಿ ಪ್ರದರ್ಶಿಸುತ್ತಿರುವುದು ಮೆಚ್ಚಬೇಕಾದ ಸಂಗತಿಯಾಗಿದೆ. ಕೈಗಾರಿಕಾ ಇಲಾಖೆಯು ರಾಜ್ಯದ ಕಾಫಿಗೆ ಜಾಗತಿಕ ಮನ್ನಣೆ ತಂದುಕೊಡುವ ಪ್ರಯತ್ನವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ ತೆರೆದಿದ್ದು, ಅಲ್ಲಿ ವಿಶೇಷ ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಮೂಲಕ ಕಾಫಿ ಸೇರಿದಂತೆ ರಾಜ್ಯದ 45ಕ್ಕೂ ಹೆಚ್ಚು ಜಿಐ ಮಾನ್ಯತೆ ಹೊಂದಿರುವ ವಸ್ತುಗಳನ್ನು ಮಾರಾಟ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 2.2 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕಾಫಿ ಬೆಳೆಯಲಾಗುತ್ತಿದ್ದು, ದೇಶದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ. ಭಾರತದಲ್ಲಿ ಬೆಳೆಯಲಾಗುವ ಒಟ್ಟು ಕಾಫಿಯಲ್ಲಿ ಶೇ.75ರಷ್ಟನ್ನು ಕರ್ನಾಟಕದ ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೇ ಬೆಳೆಯಲಾಗುತ್ತಿದೆ. ಬೆಳೆಗಾರರು, ಸಂಸ್ಕರಣೆಗಾರರು, ರಫ್ತುದಾರರು, ರೋಸ್ಟರ್ಸ್, ಕೆಫೆ ಮತ್ತು ಆತಿಥ್ಯೋದಮ ಸೇವೆ ಒದಗಿಸುವವರು, ಸಾಧನ ಸಲಕರಣೆಗಳ ತಯಾರಕರು, ವೃತ್ತಿಪರರು ಮತ್ತು ಗ್ರಾಹಕರನ್ನೆಲ್ಲ ಈ ಉತ್ಸವವು ಒಂದೆಡೆ ತಂದಿರುವುದು ಒಳ್ಳೆಯ ಉಪಕ್ರಮವಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಉತ್ಸವದಲ್ಲಿ ಇರುವ ಹಲವು ಮಳಿಗೆಗಳಿಗೆ ಭೇಟಿ ನೀಡಿ, ಕಾಫಿ ತಳಿ ಇತ್ಯಾದಿಗಳ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡು, ಒಂದಿಷ್ಟನ್ನು ಖರೀದಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಫಿ ಬೋರ್ಡ್ ಅಧ್ಯಕ್ಷ ಎಂ ಜೆ ದಿನೇಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಭಾರತೀಯ ಕಾಫಿ ಬೋರ್ಡ್ ಕಾರ್ಯದರ್ಶಿ ಮತ್ತು ಸಿಇಒ ಎಂ.ಕೂರ್ಮಾರಾವ್, ಎಸ್ಸಿಎಐ ಅಧ್ಯಕ್ಷೆ ಹಂಸಿನಿ ಅಪ್ಪಾದೊರೈ, ಕಾರ್ಯದರ್ಶಿ ಶ್ರೀಕಂಠ ರಾವ್, ಮಾಜಿ ಅಧ್ಯಕ್ಷ ಎಂ.,ಪೂರ್ಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Bengaluru Karaga: ಬೆಂಗಳೂರು ಕರಗ ಮಹೋತ್ಸವ ಅವಧಿಯಲ್ಲಿ 12 ದಿನಗಳಲ್ಲಿ 455 ಟನ್ ತ್ಯಾಜ್ಯ ವಿಲೇವಾರಿ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್











Click it and Unblock the Notifications