BMTC: ಕೆಎಸ್‌ಆರ್‌ಟಿಸಿ ನೌಕರರಿಗೆ ಲಭ್ಯವಿದ್ದ ಅಪಘಾಯ ವಿಮೆ ಬಿಎಂಟಿಸಿ ನೌಕರರಿಗೂ ವಿಸ್ತರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಬಿಎಂಟಿಸಿ ಸಂಸ್ಥೆಗೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಸಚಿವರು ಈ ಘೋಷಣೆ ಮಾಡಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ನಡೆದ ಬಿಎಂಟಿಸಿ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರಿಗೆ ಲಭ್ಯವಿರುವ ಒಂದು ಕೋಟಿ ಅಪಘಾತ ವಿಮೆಯನ್ನು ಈಗ ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುವುದು. ಬಿಎಂಟಿಸಿ ಉದ್ಯೋಗಿಯೊಬ್ಬರು ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತವನ್ನು ಸಿಗುತ್ತದೆ ಎಂದು ಹೇಳಿದರು.

ಅಪಘಾತದಿಂದ ಸಾವನ್ನಪ್ಪುವ ನೌಕರರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು ಎಂದು ಅವರು ಹೇಳಿದರು. 'ಕೆಲವು ತಾಂತ್ರಿಕ ಕಾರಣಗಳಿಂದ ಎಂಟು ವರ್ಷಗಳಿಂದ ಉದ್ಯೋಗಗಳನ್ನು ಒದಗಿಸಲಾಗಿಲ್ಲ. ಕೂಡಲೇ ಹಂತಹಂತವಾಗಿ ಕುಟುಂಬ ಸದಸ್ಯರಿಗೆ ನೇಮಕಾತಿ ಆದೇಶ ನೀಡುವಂತೆ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಅವರಿಗೆ ಆದೇಶ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ಬಸ್ ಟ್ರ್ಯಾಕಿಂಗ್ ಆ್ಯಪ್ ಬಿಡುಗಡೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಟ್ರ್ಯಾಕಿಂಗ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ನಮ್ಮ ಬಿಎಂಟಿಸಿ ಅಪ್ಲಿಕೇಶನ್, ಅದರ ಬೀಟಾ ಆವೃತ್ತಿಯನ್ನು ಏಪ್ರಿಲ್ 18, 2023 ರಂದು ಪ್ರಾರಂಭಿಸಲಾಯಿತು, ಇದೀಗ ಅಧಿಕೃತವಾಗಿ ಆರಂಭಿಸಲಾಗಿದೆ. ಬಿಎಂಟಿಸಿ ನೀಡಿರುವ ಮಾಹಿತಿ ಪ್ರಕಾರ ಪ್ರಕಾರ ಐದು ಸಾವಿರ ಬಸ್‌ಗಳನ್ನು ನೈಜ ಸಮಯದಲ್ಲಿ ಅಪ್ಲಿಕೇಶನ್‌ನಲ್ಲಿ ಟ್ರ್ಯಾಕ್ ಮಾಡಬಹುದು. ಇದೇ ಸಂದರ್ಭದಲ್ಲಿ ನಿಗಮವು ನಿರ್ಭಯಾ ಯೋಜನೆ ಮತ್ತು ಏಳನೇ ವಲಯ (ವಾಯುವ್ಯ) ದ ಲೋಗೋವನ್ನು ಸಹ ಬಿಡುಗಡೆ ಮಾಡಿತು.
ಬೆಂಗಳೂರು ಸಾರಿಗೆ ಕಂಪನಿಯು 98 ವಾಹನಗಳೊಂದಿಗೆ 1940 ರಲ್ಲಿ ಖಾಸಗಿ ಉದ್ಯಮವಾಗಿ ಸ್ಥಾಪನೆಯಾಯಿತು. ಮೈಸೂರು ಸರ್ಕಾರವು 1956 ರಲ್ಲಿ ಅದನ್ನು ಸ್ವಾಧೀನಪಡಿಸಿಕೊಂಡಿತು ಮತ್ತು ಬೆಂಗಳೂರು ಸಾರಿಗೆ ಸೇವೆ (BTS) ಎಂದು ಮರುನಾಮಕರಣ ಮಾಡಿತು. ನಂತರ ಆಗಸ್ಟ್ 15, 1997 ರಂದು ಕೆಎಸ್‌ಆರ್‌ಟಿಸಿಯಿಂದ ಬಿಎಂಟಿಸಿಯನ್ನು ಪ್ರತ್ಯೇಕಿಸಲಾಯಿತು.
ಸಮಾರಂಭದಲ್ಲಿ, ಬಿಎಂಟಿಸಿ ತನ್ನ 10 ಮರಣ ಹೊಂದಿದ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರಗಳನ್ನು ವಿತರಿಸಿತು. ಇನ್ನೆರಡು ದಿನಗಳಲ್ಲಿ ಇಂತಹ ಇನ್ನೂ 190 ಪತ್ರಗಳನ್ನು ನೀಡಲಾಗುವುದು ಎಂದು ಹೇಳಿದೆ.
ಇದಲ್ಲದೆ, ಅಪಘಾತ ರಹಿತ ದಾಖಲೆಗಳನ್ನು ಸಾಧಿಸಿದ 50 ಚಾಲಕರಿಗೆ ನಿಗಮವು ಬೆಳ್ಳಿ ಪದಕಗಳನ್ನು ನೀಡಿತು. ಇನ್ನು 1,156 ಬೆಳ್ಳಿ ಪದಕಗಳನ್ನು ನವೆಂಬರ್ 1 ರಂದು ಪ್ರದಾನ ಮಾಡಲಾಗುವುದು. ಬಿಎಂಟಿಸಿ ನೌಕರರಿಗಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕ್ಯಾಂಟೀನ್ ಕೂಡ ತೆರೆಯಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications