ಜಾರಕಿಹೊಳಿ ಸಿಡಿ ಪ್ರಕರಣ: ದಿನೇಶ್ ಕಲ್ಲಹಳ್ಳಿಗೆ ಪೊಲೀಸ್‌ ನೋಟಿಸ್

ಬೆಂಗಳೂರು, ಮಾರ್ಚ್‌ 03: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೋಟಿಸ್ ನೀಡಿದ್ದಾರೆ. ದೂರಿಗೆ ಸಂಬಂಧಿಸಿಂತೆ ಮಾಹಿತಿ ಒದಗಿಸುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಜಲಸಂಪನ್ಮೂಲ ಸಚಿವ ರಮೆಶ್ ಜಾರಕಿ ಹೊಳಿ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ದಿನೇಶ್ ಕಲ್ಲಹಳ್ಳಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಜಾರಕಿಹೊಳಿ ಯುವತಿ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಸಿಡಿ, ಅಡಿಯೋ ಬಿಡುಗಡೆ ಆಗಿತ್ತು. ಆನಂತರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಚಿವರ ಸಿಡಿ ಬಿಡುಗಡೆ ಮಾಡಲಿಕ್ಕೆ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಒಂದ ನೆಪಮಾತ್ರ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಬೆನ್ನಲ್ಲೇ ಪ್ರಕರಣ ಕುರಿತು ಸಮಗ್ರ ತನಿಖೆಯಾಗಲಿ ಎಂದು ಸಚಿವ ರಮೇಶ್ ಜಾರಕಿಹೊಳಿಯೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ಒದಗಿಸಲು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

Minister Ramesh Jarkiholi CD Row DCP issued Notice To Complainant

ಸಂತ್ರಸ್ತ ಯುವತಿ ದೂರು ಸಲ್ಲಿಕೆ ಅಗತ್ಯ: ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲು ಸಾಧ್ಯವಿಲ್ಲ. ಒಂದು ಸಂತ್ರಸ್ತ ಯುವತಿ ದೂರು ನೀಡಬೇಕು. ಇಲ್ಲವೇ ಪೋಷಕರು ದೂರು ನೀಡಬೇಕು. ಆದರೆ, ಸಂತ್ರಸ್ತ ಯುವತಿಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿರುವ ದಿನೇಶ್ ಕಲ್ಲಹಳ್ಳಿ, ಯುವತಿ ಸಂಬಂಧಿಕರೊಬ್ಬರು ನನಗೆ ಸಿಡಿ ನೀಡಿದ್ದಾರೆ. ಕೆಲಸ ಕೊಡಿಸುವ ಆಮಿಷೆ ಒಡ್ಡಿ ಯುವತಿಗೆ ಸಚಿವರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿನ ಸಂತ್ರಸ್ತ ಯುವತಿ ಯಾರು ? ಎಲ್ಲಿದ್ದಾರೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಕಲ್ಲಹಳ್ಳಿಗೆ ನೊಟೀಸ್ ನೀಡಲಾಗಿದೆ.

Recommended Video

      'ಸಿಡಿ ವಿಚಾರ ನಿಜವಾಗಿದ್ದರೆ ರಮೇಶ್‌ ಜಾರಕಿಹೊಳಿಯಿಂದ ರಾಜೀನಾಮೆ ಕೊಡಿಸುತ್ತೇನೆ'- ಬಾಲಚಂದ್ರ ಜಾರಕಿಹೊಳಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+