• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಸಲೀಲೆ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ತಲೆದಂಡ ಕೇಳಲಿದೆಯಾ ಬಿಜೆಪಿ?

|

ಬೆಂಗಳೂರು, ಮಾರ್ಚ್ 2: ರಾಜ್ಯದ ಪ್ರಭಾವಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಅವರ "ರಾಸಲೀಲೆ ಸಿಡಿ' ಸ್ಪೋಟಗೊಳ್ಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

   Ramesh Jarakiholi ಕರ್ಮಕಾಂಡದ ಕಂಪ್ಲೀಟ್ ಸ್ಟೋರಿ | Oneindia Kannada

   ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾಗಿದ್ದ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿಯನ್ನು ಮಂಗಳವಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಬಿಡುಗಡೆ ಮಾಡಿದ್ದಾರೆ.

   ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೈಕಮಾಂಡ್ ಸೂಚನೆ

   ''ಜಲಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಅಧಿಕಾರ ದುರ್ಬಳಕೆ ಮಾಡಿಕೊಂಡು ಕಿರುಕುಳ ನೀಡಿ, ಬೆದರಿಕೆ ಹಾಕಿದ್ದಾರೆ'' ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

   ಸಚಿವ ರಮೇಶ್ ಜಾರಕಿಹೊಳಿ ತಮ್ಮನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಸಂತ್ರಸ್ಥ ಮಹಿಳೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಳಿ ಹೇಳಿಕೊಂಡಿದ್ದಾರೆ. ಇದೀಗ ಅವರು ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಬಳಿ ಇರುವ ಪೊಲೀಸ್ ಕಚೇರಿಗೆ ತೆರಳಿ ಡಿಸಿಪಿ ಅನುಚೇತ್ ಅವರಿಗೆ ದೂರು ಸಲ್ಲಿಸಿದ್ದಾರೆ. ಆದರೆ ಇನ್ನೂ ಎಫ್ಐಆರ್ ದಾಖಲಾಗಿಲ್ಲ.

   ಸಚಿವರ ರಾಸಲೀಲೆ ಸಿಡಿ ವಿಚಾರವನ್ನೇ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿಷಯವನ್ನು ಪ್ರಸ್ತಾಪ ಮಾಡಿ, ""ಏನ್ರಿ ಬಿಜೆಪಿ ಇದೆಲ್ಲ'' ಎಂದು ಪ್ರಶ್ನೆ ಮಾಡಿದೆ.

   ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್

   ಆದರೆ ಸಚಿವರ ಸಿಡಿ ಪ್ರಕರಣ ಹೊರಬೀಳುತ್ತಿದ್ದಂತೆ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದ್ದು, ಸಚಿವರ ತಲೆದಂಡಕ್ಕೆ ಬಿಜೆಪಿ ಪಕ್ಷದಲ್ಲೇ ಒತ್ತಡ ಶುರುವಾಗಿದೆ. ಶಿಸ್ತಿನ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಇಂತಹ ಪ್ರಕರಣಗಳನ್ನು ಸಹಿಸಿಕೊಳ್ಳುತ್ತಾ ಎಂದು ಕಾದು ನೋಡಬೇಕು.

   ವಿರೋಧ ಪಕ್ಷಗಳು ಬಿಜೆಪಿ ಮೇಲೆ ಮುಗಿಬೀಳುವ ಮುನ್ನ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆದುಕೊಳ್ಳಬಹುದು. ಅದಕ್ಕೂ ಮುನ್ನ ನೈತಿಕ ಹೊಣೆ ಹೊತ್ತು ಸಚಿವ ಜಾರಕಿಹೊಳಿ ಅವರು ಇದ್ದಲಿಂದಲೇ ರಾಜೀನಾಮೆ ಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕು.

   English summary
   Minister Ramesh Jarakiholi's Sex CD was released by social worker Dinesh Kallahalli on Tuesday and complaint registered. Will BJP Ask For His Resignation?.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X