ಅನಿತಾ ಕುಮಾರಸ್ವಾಮಿ ಗೆಲುವಿಗಾಗಿ 'ಬಿ' ಫಾರಂಗೆ ಪೂಜೆ ಸಲ್ಲಿಸಿದ ರೇವಣ್ಣ
Recommended Video

ಬೆಂಗಳೂರು, ಅಕ್ಟೋಬರ್ 11: ವಿಧಾನಸಭೆ ಉಪಚುನಾವಣೆಗೆ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಸಚಿವ ಎಚ್ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಸಜ್ಜಾಗಿರುವ ದಳಪತಿಗಳು ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಬಿ ಫಾರಂ ಕೂಡ ಇದ್ಧಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಚಿವ ಎಚ್ಡಿ ರೇವಣ್ಣ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಪೂಜೆ ಮಾಡಿದರು.
ನವರಾತ್ರಿ ಮೊದಲ ದಿನ ಶುಭ ಎಂದು ಭಾವಿಸಿರುವ ರೇವಣ್ಣ ಪೂಜೆ ಸಲ್ಲಿಸಿದರು. ರಾಮನಗರ ಮತ್ತು ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ತಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸಲಿ ಎಂದು ದೇವರಲ್ಲಿ ಮೊರೆ ಹೋದರು. ರೇವಣ್ಣ ಅವರಿಗೆ ಪಕ್ಷದ ಕೆಲವು ನಾಯಕರು ಜೊತೆಯಾದರು.

ರೇವಣ್ಣ ಅವರು ವಿಧಾನಸಭಾ ಚುನಾವಣೆ ವೇಳೆ ಸಹ ಬಿ ಫಾರಂ ಗಳನ್ನು ತಿರುಪತಿಗೆ ಕೊಂಡೊಯ್ದು ವಿಶೇಷ ಪೂಜೆ ನೆರವೇರಿಸಿದ್ದರು. ಪ್ರತಿ ಚುನಾವಣೆಯಲ್ಲೂ ತಮ್ಮ ಅಭ್ಯರ್ಥಿಗಳ ಜಯಕ್ಕಾಗಿ ಬಿ ಫಾರಂಗಳಿಗೆ ವಿಶೇಷ ಪೂಜೆ ಮಾಡಿಸುತ್ತಾರೆ. ಹಾಗೆಯೇ ಈ ಬಾರಿಯೂ ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿ ಎಂದು ಪೂಜೆ ಸಲ್ಲಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications