ಮೋದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಚಿವ ರೋಷನ್ ಬೇಗ್
ಬೆಂಗಳೂರು, ಅಕ್ಟೋಬರ್ 13 : ನಗರಾಭಿವೃದ್ಧಿ, ಮಾಹಿತಿ ಮತ್ತು ಹಜ್ ಸಚಿವ ರೋಷನ್ ಬೇಗ್ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.
ಬೆಂಗಳೂರಿನ ಪುಲಕೇಶಿ ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ರೋಷನ್ ಬೇಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ಟೀಕಿಸಿದ್ದು, ಇದೀಗ ಸಾಕಷ್ಟು ವಿವಾದಗಳಿಗೆ ಎಡೆ ಮಾಡಿಕೊಟ್ಟಿದೆ.

500, 1000 ರೂ ನೋಟು ನಿಷೇಧದ ಬಗ್ಗೆ ಟೀಕಿಸುವ ಭರದಲ್ಲಿ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ಟೀಕಿಸಿದರು. ರೋಷನ್ ಬೇಗ್ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಪ್ರಧಾನಿ ಬಗ್ಗೆ ಅವಾಚ್ಯ ಶಬ್ದ ಬಳಸಿದ ರೋಷನ್ ಬೇಗ್ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.












Click it and Unblock the Notifications