ಸಚಿವರಾದ ಜೆ.ಸಿ. ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್‌ಗೆ ಕೋವಿಡ್ ಸೋಂಕು
ಬೆಂಗಳೂರು, ಜನವರಿ 11: ಸಂಸದೀಯ ವ್ಯವಹಾರ ಹಾಗೂ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಸಚಿವ ಮಾಧುಸ್ವಾಮಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. 2 ದಿನಗಳ ಹಿಂದೆ ಪುತ್ರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಇದೇ ವೇಳೆ ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆ ಸೋಮವಾರ ರಾತ್ರಿಯೇ ಸಿಎಂ ಬಸವರಾಜ ಬೊಮ್ಮಾಯಿ ಆಪ್ತ ಸಿಬ್ಬಂದಿ, ಪಿಎಗಳು, ಅಂಗ ರಕ್ಷಕರು, ಖಾಸಗಿ ನಿವಾಸದ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ನಿನ್ನೆ ರಾತ್ರಿ ಸಿಎಂ ಖಾಸಗಿ ನಿವಾಸದಲ್ಲಿ ಸ್ಯಾನಿಟೈಸೇಷನ್ ಕಾರ್ಯ ಸಹ ಮಾಡಲಾಗಿದೆ. ಇಂದು ಮಣಿಪಾಲ್ ಆಸ್ಪತ್ರೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ಡಿಸ್ಚಾರ್ಜ್ ಆಗಿದ್ದಾರೆ.

ಸಿಎಂ ಬೊಮ್ಮಾಯಿ ಒಂದು ವಾರ ಹೋಮ್ ಕ್ವಾರಂಟೈನ್
ಕೊವಿಡ್ ಸೋಂಕಿತ ಸಿಎಂ ಬೊಮ್ಮಾಯಿ ಒಂದು ವಾರ ಕಾಲ ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿ ಹೋಮ್ ಕ್ವಾರಂಟೈನ್ ಆಗಲಿದ್ದಾರೆ. ಅವರು ಮನೆಯಿಂದಲೇ ಆಡಳಿತ ನಿರ್ವಹಣೆ ಮಾಡಲಿದ್ದಾರೆ. ಆಡಳಿತ, ಕೋವಿಡ್ ನಿರ್ವಹಣೆ ಸಂಬಂಧ ಮನೆಯಿಂದ ವರ್ಚುವಲ್ ಸಭೆಗಳನ್ನು ನಡೆಸಲಿದ್ದಾರೆ.
ಇನ್ನು ಸಿಎಂ ಬೊಮ್ಮಾಯಿ ಪುತ್ರ ಭರತ್ ಮತ್ತು ಸೊಸೆ ಇಬ್ಬನಿ ಅವರಿಗೆ ಕೋವಿಡ್ ಹಿನ್ನೆಲೆ ಇತರೆ ಪರೀಕ್ಷೆಗಳು ನಡೆದಿದ್ದು, ಪುತ್ರ ಭರತ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ಕುರಿತು ವಿಚಾರಿಸಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂಗೆ ಕರೆ ಬಂದಿದೆ.
ಸುಮಾರು ಐದು ನಿಮಿಷಗಳ ಕಾಲ ಸಿಎಂ ಹಾಗೂ ಪ್ರಧಾನಿ ನಡುವೆ ಮಾತುಕತೆ ನಡೆದಿದ್ದು, ತಮಗೆ ಕೋವಿಡ್ ತಗಲಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದರು. ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
Recommended Video
ಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದಾಗ ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ನೀಡಿದ ಪ್ರಧಾನಿ ಮೋದಿ ಹೇಳಿದ್ದಾರೆ. ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.












Click it and Unblock the Notifications