ಪಾದರಾಯನಪುರದಲ್ಲಿ ಕ್ವಾರಂಟೈನ್ ಉಲ್ಲಂಘನೆ; ತನಿಖೆಗೆ ಆದೇಶ
ಬೆಂಗಳೂರು, ಮೇ 11 : ಬೆಂಗಳೂರಿನ ಪಾದರಾಯನಪುರ ಮತ್ತೆ ಸುದ್ದಿಯಲ್ಲಿದೆ. ಕ್ವಾರಂಟೈನ್‌ನಲ್ಲಿ ಇರಬೇಕಾದ ಕೆಲವರು ಹೋರ ಹೋಗಿದ್ದು ಈ ಕುರಿತು ತನಿಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಬಿಬಿಎಂಪಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದಾಗ ಪಾದರಾಯನಪುರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.
ಕೊರೊನಾ ಸೋಂಕಿತರ ಜೊತೆ ಸಂಪರ್ಕ ಹೊಂದಿದವರಿಗೆ ಕ್ವಾರಂಟೈನ್‌ನಲ್ಲಿ ಇರಲು ಸೂಚನೆ ನೀಡಲಾಗುತ್ತದೆ. ಆಗ ಅವರು ಯಾರನ್ನೂ ಭೇಟಿ ಮಾಡುವಂತಿಲ್ಲ. ಕ್ವಾರಂಟೈನ್ ಕೇಂದ್ರ ಬಿಟ್ಟು ಹೊರ ಹೋಗುವಂತಿಲ್ಲ. ಆದರೆ, ಈ ನಿಯಮವನ್ನು ಪಾದರಾಯನಪುರದಲ್ಲಿ ಉಲ್ಲಂಘನೆ ಮಾಡಲಾಗಿದೆ.
ಹೌದು, ಪಾದರಾಯನಪುರದ ಕೆಲವು ಮಹಿಳೆಯರು ಕ್ವಾರಂಟೈನ್ ನಿಯಮ ಉಲ್ಲಂಘೆನ ಮಾಡಿ ಹೊರ ಹೋಗಿದ್ದಾರೆ ಎಂಬುದು ತಿಳಿದು ಬಂದಿದೆ. ಸ್ವತಃ ಆರೋಗ್ಯ ಸಚಿವ ಬಿ. ಶ್ರೀರಾಮುಲು ಇದನ್ನು ಖಚಿತಪಡಿಸಿದ್ದಾರೆ.

ಸೋಮವಾರ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. "ಪಾದರಾಯನಪುರದಲ್ಲಿ ಕ್ವಾರಂಟೈನ್ ನಲ್ಲಿರಬೇಕಾದ ಕೆಲ ಮಹಿಳೆಯರು ಹೊರ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ" ಎಂದು ಹೇಳಿದ್ದಾರೆ.
"ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುತ್ತದೆ" ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಪಾದರಾಯನಪುರದಲ್ಲಿ ಕ್ವಾರಂಟೈನ್ ನಲ್ಲಿರಬೇಕಾದ ಕೆಲ ಮಹಿಳೆಯರು ಹೊರ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ.
— B Sriramulu (@sriramulubjp) May 11, 2020
ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ.
ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕಾಗಿ ಮಾನ್ಯ @CMofKarnataka ಗಳೊಡನೆ ಚರ್ಚೆ ನಡೆಸಲಾಗುವುದು.
ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ. https://t.co/XxLz3FDmz6
ಪಾದರಾಯನಪುರವನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಅಲ್ಲಿಂದ ಹೊರ ಹೋಗಲು ಯಾರಿಗೂ ಅವಕಾಶವಿಲ್ಲ. ಆದರೆ, ಮಹಿಳೆಯರು ಸುಮಾರು 6 ಅಡಿ ಎತ್ತರದ ಗೋಡೆಯನ್ನು ಹಾರಿಕೊಂಡು ವಿಜಯನಗರ ಕಡೆ ಹೋಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.












Click it and Unblock the Notifications