ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ಖಂಡಿಸಿದ ಸಚಿವ ಸುಧಾಕರ್

|
Google Oneindia Kannada News

ಬೆಂಗಳೂರು, ಜುಲೈ 30: ಕೊರೊನಾ ವೈರಸ್‌ ಬಿಕ್ಕಟ್ಟಿನ ವೇಳೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚು ವರದಿಯಾಗುತ್ತಿದೆ.

Recommended Video

North Korea claims to be 'totally free' of Coronavirus | Oneindia Kannada

ಕೊರೊನಾ ಅಲ್ಲದ ಇತರೆ ಕಾಯಿಲೆಗಳಿಂದ ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಕೆಲವು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿರುವ ಘಟನೆಗಳು ಬೆಳಕಿಗೆ ಬಂದಿದೆ. ಇಂತಹದ್ದೇ ಹೃದಯವಿದ್ರಾವಕ ಸನ್ನಿವೇಶವೊಂದು ಇಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ.

ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ, ಕೇಂದ್ರೀಕೃತ ವ್ಯವಸ್ಥೆಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ, ಕೇಂದ್ರೀಕೃತ ವ್ಯವಸ್ಥೆ

ಈ ಘಟನೆಗೆ ಸಂಬಂಧಿಸಿದಂತೆ ಆಂಬುಲೆನ್ಸ್ ಚಾಲಕನ ಮೇಲೆ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

'ಕೊರೊನಾ ವಾರಿಯರ್ ಆಂಬುಲೆನ್ಸ್ ಚಾಲಕನ ಮೇಲೆ ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಯ ಆವರಣದಲ್ಲಿ ಹಲ್ಲೆ ಮಾಡಿರೋದು ಅಮಾನವೀಯ ವರ್ತನೆ. ಪ್ರಾಣವನ್ನು ಲೆಕ್ಕಿಸದೇ 108 ಚಾಲಕ ಆಸ್ಪತ್ರೆಗೆ ದಾಖಲಿಸಲು ರೋಗಿಯನ್ನು ಕರೆ ತಂದರೆ ಈ ರೀತಿ ಹಲ್ಲೆ ಹಲ್ಲೆ ಮಾಡಿರೋದು ಸರಿಯಲ್ಲ' ಎಂದು ಖಂಡಿಸಿದ್ದಾರೆ.

Minister Sudhakar Condemns Assault On Ambulance Driver

'ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ರೋಗಿಯನ್ನು ಕಾಯಿಸಿದ್ದಕ್ಕೆ 75 ವರ್ಷದ ವ್ಯಕ್ತಿ ಆಂಬುಲೆನ್ಸ್ ನಲ್ಲೇ ಮೃತಪಟ್ಟಿದ್ದಾರೆ ಎಂಬ ಸುದ್ದಿ ನಿಜಕ್ಕೂ ನೋವಿನ ಸಂಗತಿ. ಸರ್ಕಾರ ಸಾವಿನ ಸಂಖ್ಯೆಯನ್ನು ಇಳಿಸಲು ಶತಪ್ರಯತ್ನ ಮಾಡುತ್ತಿದೆ. ಆದ್ರೆ ಆಸ್ಪತ್ರೆಯ ಸಿಬ್ಬಂದಿ ಅವರನ್ನು ಬೇಗ ಅಡ್ಮಿಂಟ್‌ ಮಾಡಿಕೊಂಡಿದ್ದರೆ ಪ್ರಾಣ ಉಳಿಯುತ್ತಿತ್ತು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

English summary
Medical Education Minister dr Sudhakar condemns assault on ambulance driver at MS Ramaiah hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X