• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೆಚ್ಚುವರಿ ಖಾತೆ ನೀಡಿದ ಸರ್ಕಾರಕ್ಕೆ ಸಲಾಂ ಎಂದ ಸಚಿವ ಡಾ. ಸುಧಾಕರ್

|

ನವದೆಹಲಿ, ಅಕ್ಟೋಬರ್.12: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟಕ್ಕೆ ಕೊನೆಗೂ ಸರ್ಜರಿಯಾಗಿದೆ. ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆಯನ್ನು ನೀಡಿದ್ದು, ಅವರ ಬಳಿಯಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಸಚಿವ ಡಾ. ಸುಧಾಕರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ ಸರ್ಕಾರಕ್ಕೆ ಸರಣಿ ಟ್ವೀಟ್ ಗಳ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. "ವೈದ್ಯಕೀಯ ಶಿಕ್ಷಣ ಇಲಾಖೆಯ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಯಡಿಯೂರಪ್ಪ ಅವರಿಗೆ ಧನ್ಯವಾದಗಳು. ಸ್ವಸ್ಥ ಮತ್ತು ಆರೋಗ್ಯಕರ ಸಮಾಜದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಅಂತಹ ಮಹತ್ತರ ಖಾತೆ ನಿಭಾಯಿಸುವ ಅವಕಾಶ ದೊರೆತಿರುವುದು ನನ್ನ ಜವಾಬ್ದಾರಿ ಹೆಚ್ಚಿಸಿದೆ" ಎಂದು ಡಾ. ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಡಾ. ಸುಧಾಕರ್‌ಗೆ ಡಬಲ್ ಧಮಾಕಾ, ಶ್ರೀರಾಮುಲುಗೆ ಶಾಕ್ ಮೇಲೆ ಶಾಕ್!

"ನಾಡಿನ ಸಮಸ್ತ ನಾಗರೀಕರಿಗೂ ಉತ್ತಮ ಗುಣಮಟ್ಟದ ಅರೋಗ್ಯ ಸೇವೆಗಳು ದೊರಕುವಂತೆ ಮಾಡುವುದೇ ನನ್ನ ದೀರ್ಘಾವಧಿ ಗುರಿ. ಕೋವಿಡ್ ವಿರುದ್ಧದ ಈ ಹೋರಾಟವನ್ನು ಮುಂದುವರಿಸುವುದ ಮತ್ತು ಲಸಿಕೆ ಲಭ್ಯವಾದ ಕೂಡಲೇ ಎಲ್ಲರಿಗೂ ಒದಗಿಸುವಿದು ತಕ್ಷಣದ ಸವಾಲುಗಳು" ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಪ್ರಾಮಾಣಿಕ ಮತ್ತು ದಕ್ಷತೆ ಬಗ್ಗೆ ಟ್ವೀಟ್:

   Sriramulu ಹಾಗು Sudhakar ಇಂದು ಮಾಧ್ಯಮದವರೊಂದಿಗೆ ಹೇಳಿದ್ದೇನು | Oneindia Kannada

   "ಪ್ರಧಾನಿ ನರೇಂದ್ರ ಮೋದಿ ಅವರ ಮಹಾತ್ವಾಕಾಂಕ್ಷೆಯ ಆಯುಶ್ಮಾನ್ ಭಾರತ್, ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಮುಂತಾದ ಯೋಜನೆಗಳನ್ನು ಸಮರ್ಥವಾಗಿ ಜಾರಿ ಮಾಡಲು ಮತ್ತು ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾಡಿನ ಜನತೆ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತೇನೆ" ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

   English summary
   Minister Sudhakar Thanked To Govt And High Command For Additional Portfolio.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X