• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಚಿವ ಡಾ.ಕೆ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾವೈರಸ್ ಪಾಸಿಟಿವ್

|

ಬೆಂಗಳೂರು, ಜೂನ್.23: ಕರ್ನಾಟಕದಲ್ಲಿ ನೊವೆಲ್ ಕೊರೊನಾವೈರಸ್ ಅಟ್ಟಹಾಸ ಮುಂದುವರಿದಿದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೂ ಕೊವಿಡ್-19 ಸೋಂಕು ಅಂಟಿಕೊಂಡಿದೆ.

   ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪತ್ನಿ,ಪುತ್ರಿಗೂ ಕೊರೋನಾ ಪಾಸಿಟಿವ್|Sudhakar wife & Daughter Corona+ve

   ಸೋಮವಾರವಷ್ಟೇ ಡಾ.ಕೆ.ಸುಧಾಕರ್ ಅವರ 82 ವರ್ಷದ ತಂದೆಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಕುಟುಂಬ ಇತರೆ ಸದಸ್ಯರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು.

   ಮಂಗಳವಾರ ಎಲ್ಲರ ವೈದ್ಯಕೀಯ ತಪಾಸಣಾ ವರದಿಯು ಬಂದಿದ್ದು, "ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ." ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

   ಸಚಿವ ಡಾ. ಕೆ. ಸುಧಾಕರ್ ತಂದೆಗೆ ಕೋವಿಡ್ - 19 ಸೋಂಕು

   ಸೋಮವಾರ ಸಚಿವರ ತಂದೆಗೆ ಕೊವಿಡ್-19 ಪಾಸಿಟಿವ್:

   ಜೂನ್.22ರಂದು "ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ" ಎಂದು ಸೋಮವಾರ ಸಂಜೆ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದರು. ಕುಟುಂಬ ಸದಸ್ಯರೆಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿಗೆ ಎದುರು ನೋಡುತ್ತಿರುವುದಾಗಿ ಸಚಿವರು ಟ್ವೀಟ್ ಮಾಡಿದ್ದರು. ಇಂದು ವೈದ್ಯಕೀಯ ವರದಿ ಬಂದಿರುವ ಹಿನ್ನೆಲೆ ತಮ್ಮ ಪತ್ನಿ ಹಾಗೂ ಪುತ್ರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ನಿಗದಿತ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

   English summary
   Minister Sudhakar Wife And daughter have Coronavirus Positive, Admitted to Hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X