ಮನೆಯಿಂದ ತಪ್ಪಿಸಿಕೊಂಡಿದ್ದ ಯುವತಿಯನ್ನು ವೇಶ್ಯಾವಾಟಿಕೆಗೆ ಮಾರಲು ಯತ್ನ: ಆರೋಪಿ ಅರೆಸ್ಟ್
ಬೆಂಗಳೂರು, ಫೆ. 11: ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಲು ಕರೆದೊಯ್ಯುತ್ತಿದ್ದ ಯುವತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ರಕ್ಷಿಸಿದ್ದಾರೆ. ಯುವತಿಯನ್ನು ಮಾರಲು ಯತ್ನಿಸಿದ ಟ್ರಾವೆಲ್ ಏಜೆನ್ಸಿ ಏಜೆಂಟ್ ನನ್ನು ಬಂಧಿಸಿದ್ದಾರೆ.
ಕೋಲಾರ ಮೂಲದ ಯುವತಿ ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಬೆಂಗಳೂರಿಗೆ ಬಂದಿದ್ದಾಳೆ. ಮೆಜೆಸ್ಟಿಕ್ ಬಳಿ ಇಳಿದು ಎಲ್ಲಿ ಹೋಗಲು ದಿಕ್ಕು ತೋಚದೇ ಅಳುತ್ತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆಂಟ್ ನಾಗೇಶ್ ಆಕೆಯನ್ನು ವಿಚಾರಿಸಿದ್ದಾನೆ. ಮನೆ ಬಿಟ್ಟು ಬಂದಿರುವ ಸಂಗತಿಯನ್ನು ಯುವತಿ ಹೇಳಿದ್ದಾರೆ.
ಒಳ್ಳೆಯ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ದೇವನಹಳ್ಳಿಗೆ ಕರೆದೊಯ್ದು ಮನೆಯಲ್ಲಿ ಇಟ್ಟುಕೊಂಡು ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ವೇಶ್ಯಾವಾಟಿಕೆ ಜಾಲವನ್ನು ಸಂಪರ್ಕಿಸಿದ್ದ ನಾಗೇಶ್ ಆಕೆಯನ್ನು ಮಾರಾಟ ಮಾಡಲೆಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದಾನೆ. ಈ ವೇಳೆ ಏರ್ ಪೋರ್ಟ್ ಭದ್ರತಾ ಸಿಬ್ಬಂದಿ ಅನುಮಾನಗೊಂಡು ಯುವತಿಯನ್ನು ಮತ್ತು ನಾಗೇಶನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಸಲಿ ಸಂಗತಿ ಬೆಳಕಿಗೆ ಬಂದಿದ್ದು ಅಂತಾರಾಷ್ಟ್ರೀಯ ವಿಮಾನ ನಲ್ದಾಣ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೆಜೆಸ್ಟಿಕ್ ಕಿರಾತಕರು:
ಮೆಜೆಸ್ಟಿಕ್ ಅಪರಾಧಗಳ ಮಾಯಾಲೋಕ. ಮನೆ ಬಿಟ್ಟು ಬರುವ ಹುಡುಗರಿಗೆ ಹಾಗೂ ಹುಡುಗಿಯರನ್ನು ಪತ್ತೆ ಮಾಡಿ ಮಾರಾಟ ಮಾಡುವ ಜಾಲ ಈಗಲೂ ಪೊಲೀಸರ ಕಣ್ಣಿಗೆ ಕಾಣದಂತೆ ಕಾರ್ಯ ನಿರ್ವಹಿಸುತ್ತಿದೆ. ಯಾರಾದರೂ ಮನೆ ಬಿಟ್ಟು ಬಡುವ ಅಪ್ರಾಪ್ತರನ್ನು ಪತ್ತೆ ಮಾಡಿ ಅವರಿಗೆ ಸಾಂತ್ವನ ಹೇಳಿ ಕೆಲಸ ಕೊಡಿಸುವ ಸೋಗಿನಲ್ಲಿ ಹೋಟೆಲ್‌ಗಳಿಗೆ ಬಿಡುತ್ತಾರೆ. ಮೂರು ತಿಂಗಳ ವೇತನ ಪಡೆದು ಎಸ್ಕೇಪ್ ಆಗುತ್ತಾರೆ. ಹೀಗಾಗಿ ಪ್ರತಿ ನಿತ್ಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಹದ್ದಿನ ಕಣ್ಣಿಟ್ಟು ಹುಡುಕುವ ಏಜೆಂಟರು ಈಗಲೂ ತಳವೂರಿದ್ದಾರೆ.
ಅದೇ ರೀತಿ ಮನೆ ಬಿಟ್ಟು ಬರುವ ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವ ಸೋಗಿನಲ್ಲಿ ನಂಬಿಸಿ ಕರೆದುಕೊಂಡು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡುತ್ತಾರೆ. ಇದಕ್ಕೂ ಪ್ರತ್ಯೇಕ ಏಜೆಂಟರು ನಿರಂತರ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಜಾಲ ಹಲವು ವರ್ಷಗಳಿಂದ ಬೇರೂರಿದೆ. ಅನೇಕ ನಾಪತ್ತೆ ಪ್ರಕರಣಗಳು ಮೆಜೆಸ್ಟಿಕ್ ನಲ್ಲಿಯೇ ಅಂತ್ಯವಾಗಿರುವ ಸಾಕಷ್ಟು ಉದಾಹರಣೆಗಳು ಕಣ್ಣೆದುರು ಇವೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications