ಬೆಂಗಳೂರಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಬೆಂಗಳೂರು, ಮೇ4: ವ್ಯಕ್ತಿಯ ಮೇಲೆ ಅಪರಿಚತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಎಚ್‌ಬಿಆರ್ ಲೇಔಟ್‌ನ ಓಟರ್ ರಿಂಗ ರಸ್ತೆ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಸೈಯದ್ ಜುಬೇರ್ ಎನ್ನುವವ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ತಮ್ಮ ಕೈಯಲ್ಲಿದ್ದ ಬ್ಯಾಗಿನಿಂದ ಪಿಸ್ತೂಲ್ ತೆಗೆದು ಝುಬೇರ್ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ದಾಳಿ ಮಾಡಿದವರು ಹೆಲ್ಮೆಟ್ ಹಾಕಿಕೊಂಡು ಬಂದಿದ್ದರು. ಇತ್ತ ಗುಂಡೇಟು ತಿಂದ ಝುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.












Click it and Unblock the Notifications