ಬೆಂಗಳೂರು: ಚುನಾವಣಾ ತರಬೇತಿಯಲ್ಲಿ ಅಸಭ್ಯ ವರ್ತನೆ; ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಆರಂಭಕ್ಕೆ ಕೆಲವೇ ಗಂಟೆಗಳು ಉಳಿದಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ನಾಳೆ (ಮೇ 10) ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಇನ್ನು ಇದೇ ವೇಳೆ ಬುಧವಾರದ ಮತದಾನ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರನ್ನು ಅಮಾನತು ಮಾಡಲಾಗಿದೆ.

Missbehavior In Election Training; Woman Police Inspector Suspension In Bengaluru

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಭವ್ಯ ಎಂಬುವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಬೆಂಗಳೂರಿನ ಜ್ಞಾನಭಾರತಿಯ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆ ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ತರಬೇತಿ ಪಡೆಯುವ ಸಂದರ್ಭದಲ್ಲಿ ಉದ್ಧಟತನ ತೋರಿದ್ದಕ್ಕೆ ಅಮಾನತುಗೊಳಿಸಲಾಗಿದೆ.

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ಇನ್ಸ್‌ಪೆಕ್ಟರ್ ಭವ್ಯ ತರಬೇತಿಗೆ ಹಾಜರಾಗದೇ ಪತ್ರಿಕೆ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ತೋರಿದ್ದಾರೆ.

"ನಾನು ಮಾಡುತ್ತಿರುವುದು ಸರಿ. ತರಬೇತಿ ಕೊಡುವುದು ನಿಮ್ಮ ಕೆಲಸ. ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ. ನೀವು ಹೇಳಿದಂತೆ ಕೇಳುವುದಕ್ಕೆ ನಾನು ನಿಮ್ಮ ಇಲಾಖೆ ಅಲ್ಲ.‌ ಈ ತರಬೇತಿ ಉಪಯೋಗಕ್ಕಿಲ್ಲ," ಎಂದೆಲ್ಲಾ ಇನ್ಸ್‌ಪೆಕ್ಟರ್ ಭವ್ಯ ಅಹಂಕಾರದ ಮಾತುಗಳನ್ನಾಡಿದ್ದಾರೆ.

ಯಾರಿಗಾದರೂ ಹೇಳಿಕೊಳ್ಳಿ ಹೋಗಿ ಎಂದಿದ್ದ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಭವ್ಯ ವರ್ತನೆಯ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಸೆಕ್ಟರ್ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಬಿಬಿಎಂಪಿ ಆಯುಕ್ತರು ಮತ್ತು ಬೆಂಗಳೂರು ಚುನಾವಣಾಧಿಕಾರಿಗಳು ಅಮಾನತುಗೊಳಿಸಿದ್ದಾರೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+