ಮಧ್ಯಪ್ರದೇಶದ ಸರ್ಕಾರ ಪತನ?; ಬೆಂಗಳೂರಿಗೆ 16 ಕಾಂಗ್ರೆಸ್ ಶಾಸಕರು!

ಬೆಂಗಳೂರು, ಮಾರ್ಚ್ 09 : ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕರ್ನಾಟಕವನ್ನು ತಲುಪಿದೆ. 6 ಸಚಿವರು, 10 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ.

Recommended Video

      ಬ್ಯಾಂಕ್ ನಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆದಿದ್ದ TTD

      ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಸೋಮವಾರ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಶಾಸಕರು ಆಗಮಿಸಿದ್ದು ಅಲ್ಲಿಂದ ವೈಟ್‌ ಫೀಲ್ಡ್ ಬಳಿಯ ಆದರ್ಶ ಹೋಟೆಲ್‌ಗೆ ಹೋಗಿದ್ದಾರೆ.

      Madhya Pradesh 16 MLAs In Whitefield Bengaluru

      ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದ 16 ಶಾಸಕರು ಬೆಂಗಳೂರಿಗೆ ಬಂದಿದ್ದು, ಕಮಲನಾಥ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಕಾಂಗ್ರೆಸ್ ಶಾಸಕರನ್ನು ಕಾಪಾಡುವ ಹೊಣೆಯನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ನೀಡಲಾಗಿದೆ ಎಂಬ ಸುದ್ದಿಗಳು ಹಬ್ಬಿವೆ.

      ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಬೆಂಗಳೂರಿನಲ್ಲಿದ್ದ ಕಾಂಗ್ರೆಸ್ ಶಾಸಕ ಹರ್ದೀಪ್ ಸಿಂಗ್ ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ 16 ಶಾಸಕರು ಬೆಂಗಳೂರಿಗೆ ಬಂದಿದ್ದಾರೆ.

      ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡದಂತೆ ತಡೆಯಲು ರಣತಂತ್ರವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಹ್ಮದ್ ಪಟೇಲ್ ಸೇರಿದಂತೆ ಹಲವು ನಾಯಕರು ಶಾಸಕರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+