ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಧ್ಯಪ್ರದೇಶದ ಸರ್ಕಾರ ಪತನ?; ಬೆಂಗಳೂರಿಗೆ 16 ಕಾಂಗ್ರೆಸ್ ಶಾಸಕರು!

|
Google Oneindia Kannada News

ಬೆಂಗಳೂರು, ಮಾರ್ಚ್ 09 : ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕರ್ನಾಟಕವನ್ನು ತಲುಪಿದೆ. 6 ಸಚಿವರು, 10 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ.

Recommended Video

ಬ್ಯಾಂಕ್ ನಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆದಿದ್ದ TTD

ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಸೋಮವಾರ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಶಾಸಕರು ಆಗಮಿಸಿದ್ದು ಅಲ್ಲಿಂದ ವೈಟ್‌ ಫೀಲ್ಡ್ ಬಳಿಯ ಆದರ್ಶ ಹೋಟೆಲ್‌ಗೆ ಹೋಗಿದ್ದಾರೆ.

ಬೆಂಗಳೂರಿನ ವಿಲ್ಲಾದಲ್ಲಿ ಮಧ್ಯಪ್ರದೇಶದ ಶಾಸಕರ ವಾಸ್ತವ್ಯಬೆಂಗಳೂರಿನ ವಿಲ್ಲಾದಲ್ಲಿ ಮಧ್ಯಪ್ರದೇಶದ ಶಾಸಕರ ವಾಸ್ತವ್ಯ

Madhya Pradesh 16 MLAs In Whitefield Bengaluru

ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದ 16 ಶಾಸಕರು ಬೆಂಗಳೂರಿಗೆ ಬಂದಿದ್ದು, ಕಮಲನಾಥ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಕಾಂಗ್ರೆಸ್ ಶಾಸಕರನ್ನು ಕಾಪಾಡುವ ಹೊಣೆಯನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ನೀಡಲಾಗಿದೆ ಎಂಬ ಸುದ್ದಿಗಳು ಹಬ್ಬಿವೆ.

ಮಧ್ಯಪ್ರದೇಶ; ರಾಜಕೀಯ ಬೆಳವಣಿಗೆಗೆ ಮಹತ್ವದ ತಿರುವುಮಧ್ಯಪ್ರದೇಶ; ರಾಜಕೀಯ ಬೆಳವಣಿಗೆಗೆ ಮಹತ್ವದ ತಿರುವು

ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಬೆಂಗಳೂರಿನಲ್ಲಿದ್ದ ಕಾಂಗ್ರೆಸ್ ಶಾಸಕ ಹರ್ದೀಪ್ ಸಿಂಗ್ ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ 16 ಶಾಸಕರು ಬೆಂಗಳೂರಿಗೆ ಬಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೆ ಸಿಎಂ ಕಮಲನಾಥ್ ಕೌಂಟರ್ ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೆ ಸಿಎಂ ಕಮಲನಾಥ್ ಕೌಂಟರ್

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡದಂತೆ ತಡೆಯಲು ರಣತಂತ್ರವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಹ್ಮದ್ ಪಟೇಲ್ ಸೇರಿದಂತೆ ಹಲವು ನಾಯಕರು ಶಾಸಕರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ.

English summary
BJP trying to topple Kamal Nath lead Congress government in Madhya Pradesh. 6 ministers and 10 MLA's of Congress in Whitefield, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X