ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ಗೆ ಕೈಕೊಡಲು ಮುಂದಾದರಾ ಶಾಸಕಿ ಅಂಜಲಿ ನಿಂಬಾಳ್ಕರ್?

|
Google Oneindia Kannada News

ಬೆಂಗಳೂರು, ಜುಲೈ 6: ಬೆಳಗಾವಿಯ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೌದು ಈಗಾಗಲೇ ಶಿಡ್ಲಘಟ್ಟ ಶಾಸಕ ವಿ ಮುನಿಯಪ್ಪ, ಬಂಗಾರಪೇಟೆ ನಾರಾಯಣಸ್ವಾಮಿ. ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್, ಕೋಲಾರ ಶಾಸಕ ಶ್ರೀನಿವಾಸ ಗೌಡ, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರ ಹೆಸರು ಕೇಳಿಬರುತ್ತಿದೆ.

ದೋಸ್ತಿ ಸರ್ಕಾರದ ಅಂತ್ಯ? : ಕ್ಷಣ ಕ್ಷಣದ ಮಾಹಿತಿ Live Updates ದೋಸ್ತಿ ಸರ್ಕಾರದ ಅಂತ್ಯ? : ಕ್ಷಣ ಕ್ಷಣದ ಮಾಹಿತಿ Live Updates

ಬಂಡಾಯ ಶಾಸಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕಂಪ್ಲಿ ಶಾಸಕ ಗಣೇಶ್‌ ಮತ್ತು ಹೊಸಕೋಟೆ ಎಂಟಿಬಿ ನಾಗರಾಜ್ ಅವರೂ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

MLA Anjali Nimbalkar may Resign to Congress

ಬಿಸಿ ಪಾಟೀಲ್, ಶಿವರಾಂ ಹೆಬ್ಬಾರ್, ರಮೇಶ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾರಾಯಣಗೌಡ, ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಮುನಿರತ್ನ, ಪ್ರತಾಪ್ ಗೌಡ ಪಾಟೀಲ್, ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಬರುವಷ್ಟರಲ್ಲಿ 12 ಮಂದಿ ಶಾಸಕರು ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರ ಹರಿದುಹಾಕಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಯಡಿಯೂರಪ್ಪ ಕೈಗೆ ಅಧಿಕಾರವೋ, ರಾಷ್ಟ್ರಪತಿ ಆಳ್ವಿಕೆಯೋ?ಯಡಿಯೂರಪ್ಪ ಕೈಗೆ ಅಧಿಕಾರವೋ, ರಾಷ್ಟ್ರಪತಿ ಆಳ್ವಿಕೆಯೋ?

ನಾನು ಪಕ್ಷದ ಪರವಾಗಿ ಬಂದಿದ್ದೇನೆ. ನನ್ನ ಕೈಯಲ್ಲಿ ರಾಜೀನಾಮೆ ಪತ್ರವಿಲ್ಲ- ಎಂದು ಎಸ್. ಟಿ ಸೋಮಶೇಖರ್ ಹೇಳಿದ್ದಾರೆ. ಇವರುಗಳ ಮಧ್ಯೆ ಅಂಜಲಿ ನಿಂಬಾಳ್ಕರ್ ಹೆಸರೂ ಕೂಡ ಕೇಳಿ ಬಂದಿದೆ.

English summary
Khanpura MLA Anjali Nimbalkar name is also coming in the list of disgruntled MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X