ಬಿಇಎಂಎಲ್ ಖಾಸಗೀಕರಣ ವಿರೋಧಿಸಿ ಸದನದಲ್ಲಿ ಹೋರಾಟ: ಶಾಸಕ ಎನ್ ಎ ಹ್ಯಾರಿಸ್
ಬೆಂಗಳೂರು ಫೆಬ್ರವರಿ 22: ಬೆಂಗಳೂರಿಗೆ ಖ್ಯಾತಿ ತಂದಿರುವ ಹಾಗೂ ಲಾಭದಾಯಕ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್ ಖಾಸಗೀಕರಣವನ್ನು ವಿರೋಧಿಸಿ ಮುಂದಿನ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಧ್ವನಿ ಎತ್ತುವುದಾಗಿ ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಬೆಂಗಳೂರಿನ ಬಿಇಎಂಎಲ್ ಎದುರು ನಡೆದ ದ್ವಾರ ಸಭೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿ ಮಾತನಾಡಿದ ಶಾಸಕ ಎನ್ ಎ ಹ್ಯಾರಿಸ್, ದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆ ಆಗುತ್ತಿವೆ. ಇರುವ ಉದ್ಯೋಗಗಳನ್ನು ಉಳಿಸಿಕೊಂಡು ಜೀವನ ನಿರ್ವಹಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬೆಲೆಗಳು ಜನರ ಜೀವನವನ್ನು ದುಸ್ತರಗೊಳಿಸುತ್ತಿವೆ. ರಾಜ್ಯದ ಸುಮಾರು 10 ಸಾವಿರ ಜನರಿಗೆ ಉದ್ಯೋಗ ನೀಡಿರುವ ಹಾಗೂ ದೇಶದ ಪ್ರಮುಖ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್ ನ್ನು ಖಾಸಗೀಕರಣಗೊಳಿಸುವ ಹಿಂದೆ ಖಾಸಗಿ ಕಂಪನಿಗಳ ಲಾಬಿ ಎದ್ದು ಕಾಣುತ್ತಿದೆ. ಲಾಭದಲ್ಲಿರುವ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವುದರ ಮೂಲಕ ದೇಶವನ್ನು ಖಾಸಗಿ ಕಂಪನಿಗಳ ಪಾಲು ಮಾಡಲು ಕೇಂಧ್ರ ಸರಕಾರ ಹೊರಟಿದೆ ಎಂದು ಆರೋಪಿಸಿದರು.
ಕಳೆದ ಹಲವಾರು ವರ್ಷಗಳಿಂದ ಈ ಖಾಸಗೀಕರಣದ ವಿರುದ್ದ ನೌಕರರು ಪ್ರತಿಭಟನೆ ನಡೆಸುತ್ತಾ ಬಂದಿದ್ದೀರಿ. ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. ಮುಂಬರುವ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಇದರ ವಿರುದ್ದ ಧ್ವನಿ ಎತ್ತುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರದ ಗಮನ ಸೆಳೆಯುವ ಭರವಸೆಯನ್ನು ನೀಡಿದರು.

Recommended Video
ಪ್ರತಿಭಟನೆಯಲ್ಲಿ ಬಿ.ಇ.ಎಂ.ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್ ನಾರಾಯಣ ಸೇರಿದಂತೆ ಸಾವಿರಾರು ಕಾರ್ಮಿಕರು ಪಾಲ್ಗೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications