ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರನ ಮೇಲೆ ಹಲ್ಲೆ ಪ್ರಕರಣ
ಬೆಂಗಳೂರು, ಫೆಬ್ರವರಿ 18 : ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ವಿರುದ್ಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ ದಾಖಲಾಗಿದೆ.
ಮಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಕ್ಷುಲ್ಲಕ ಕಾರಣಕ್ಕೆ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಶನಿವಾರ ರಾತ್ರಿ 11 ಗಂಟೆಯ ವೇಳೆಗೆ ಯುಬಿಸಿಟಿಯ ಫರ್ಜ್ ಕೆಫೆಯಲ್ಲಿ ವಿದ್ವತ್ ಅವರು ಕಾಲು ಚಾಚಿಕೊಂಡು ಕುಳಿತ್ತಿದ್ದರು. ಕಾಲು ಹಿಂದಕ್ಕೆ ತೆಗೆದುಕೊಳ್ಳುವಂತೆ ಮೊಹಮ್ಮದ್ ನಲಪಾಡ್ ಸಂಗಡಿಗರು ಧಮಕಿ ಹಾಕಿದ್ದಾರೆ.

ಈ ಸಂದರ್ಭದಲ್ಲಿ ವಿದ್ವತ್ ಸಹಾಯಕ್ಕೆ ಸಹೋದರ ಸಾತ್ವಿಕ್ ಬಂದಿದ್ದಾರೆ. ಮಾತಿಗೆ ಮಾತು ಬೆಳೆದಿದೆ. ವಿದ್ವತ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ. ಪ್ರಜ್ಞೆ ತಪ್ಪಿದ ವಿದ್ವತ್ ನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಗೂ ಬಂದ ನಲಪಾಡ್ ಸಂಗಡಿಗರು ಮತ್ತೊಮ್ಮೆ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ವಿದ್ವತ್ ಗೆ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಮಹಮ್ಮದ್ ನಲಪಾಡ್ ನಾಪತ್ತೆಯಾಗಿದ್ದಾನೆ. ಹಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ನಂ. 1 ಆರೋಪಿಯಾಗಿರುವ ಮಹಮ್ಮದ್ ನಲಪಾಡ್ ನಾಪತ್ತೆಯಾಗಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸಿ, ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಅವರು ಇತ್ತೀಚೆಗೆ ಸಿಂಗಪುರದಲ್ಲಿ ಪದವಿ ಪಡೆದು, ಬೆಂಗಳೂರಿಗೆ ವಾಪಸ್ ಆಗಿದ್ದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications