ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ನಿವಾಸದ ಬಳಿ ಎಚ್‌ ವಿಶ್ವನಾಥ್ ಕಾಲಿಗೆ ಬಿದ್ದ ಶಾಸಕ ನಾರಾಯಣಗೌಡ

|
Google Oneindia Kannada News

ಬೆಂಗಳೂರು, ಫೆಬ್ರವರಿ 3: ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಎಚ್ ವಿಶ್ವನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.

ಸೋತವರಿಗೆ ಸಚಿವ ಸ್ಥಾನ ಇಲ್ಲ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಈ ಕುರಿತು ಎಚ್ ವಿಶ್ವನಾಥ್ ಸಿಎಂ ಜೊತೆ ಮಾತುಕತೆ ನಡೆಸಲು ಡಾಲರ್ಸ್ ಕಾಲೊನಿಯಲ್ಲಿರುವ ಸಿಎಂ ನಿವಾಸಕ್ಕೆ ತೆರಳಿದ್ದಾಗ ನಾರಾಯಣ ಗೌಡ ಎಚ್‌ ವಿಶ್ವನಾಥ್ ಅವರ ಕಾಲಿಗೆ ಬಿದ್ದಿದ್ದಾರೆ.

ಸಂಪುಟ ವಿಸ್ತರಣೆ ಕಗ್ಗಂಟು: 2ನೇ ಬ್ರಹ್ಮಗಂಟನ್ನು ಯಶಸ್ವಿಯಾಗಿ ಬಿಡಿಸಿದ ಸಿಎಂ ಬಿಎಸ್ವೈಸಂಪುಟ ವಿಸ್ತರಣೆ ಕಗ್ಗಂಟು: 2ನೇ ಬ್ರಹ್ಮಗಂಟನ್ನು ಯಶಸ್ವಿಯಾಗಿ ಬಿಡಿಸಿದ ಸಿಎಂ ಬಿಎಸ್ವೈ

ಉಪಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ ಕಾಂಗ್ರೆಸ್ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು, ಸಚಿವ ಸಂಪುಟ ಸ್ಥಾನ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನೊಂದಿಗೆ 38 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಜನರಿಗೆ ಸೇವೆ ಸಲ್ಲಿಸಲು, ಜನಪರವಾಗಿ ಕೆಲಸ ಮಾಡಲು ನನಗೆ ಸರ್ಕಾರದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಅವರು ನನಗೆ ಯಾವ ಸ್ಥಾನ ನೀಡುತ್ತಾರೆಂಬುದು ನನಗೆ ತಿಳಿದಿಲ್ಲ. ಅದರ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ.

ನೆನಪಿರಲಿ, ನಮ್ಮ ತ್ಯಾಗದಿಂದಲೇ ಬಿಜೆಪಿ ಸರ್ಕಾರ ಬಂದಿದ್ದು!ನೆನಪಿರಲಿ, ನಮ್ಮ ತ್ಯಾಗದಿಂದಲೇ ಬಿಜೆಪಿ ಸರ್ಕಾರ ಬಂದಿದ್ದು!

ಆದರೆ, ನನಗೆ ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇದೆ. ಹೇಳಿದಂತೆ ಅವರು ಮಾಡುತ್ತಾರೆಂದು ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಹೊರ ಬಂದ ನಾಗರಾಜ್ ಹಾಗೂ ವಿಶ್ವನಾಥ್ ಅವರು, ಸರ್ಕಾರ ಅಸ್ಥಿರಗೊಂಡ ಬಳಿಕ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಚುನಾವಣೆಯಲ್ಲಿ ನಾನು ಸೋಲು ಕಂಡಿದ್ದಕ್ಕೆ ಜನರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನನಗೆ ಮತ ಹಾಕದ್ದಕ್ಕೆ ಅವರೇ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿಯವರು ನನ್ನನ್ನು ಸೋಲಿಸುವ ಪಣ ತೊಟ್ಟಿದ್ದರು. ನಾನು ಪಕ್ಷ ತೊರೆದಿದ್ದೇ ಸರ್ಕಾರ ಬೀಳಲು ಕಾರಣವಾಯಿತು ಎಂದು ಅವರಿಗೆ ನನ್ನ ಮೇಲೆ ಕೋಪವಿತ್ತು ಎಂದು ಹೇಳಿದ್ದಾರೆ.

 ಸಿಎಂ ವಿರುದ್ಧ ಹರಿಹಾಯ್ದಿದ್ದ ವಿಶ್ವನಾಥ್

ಸಿಎಂ ವಿರುದ್ಧ ಹರಿಹಾಯ್ದಿದ್ದ ವಿಶ್ವನಾಥ್

ಭಾನುವಾರಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹರಿಹಾಯ್ದಿದ್ದ ವಿಶ್ವನಾಥ್ ಈ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತುಕತೆ ನಡೆಸಲು ಅವರ ನಿವಾಸಕ್ಕೆ ತೆರಳಿದ್ದರು.

 ಪದೇ ಪದೇ ಸಿಎಂ ಹೇಳಿಕೆ ಬಗ್ಗೆ ಚರ್ಚೆ ಬೇಡ

ಪದೇ ಪದೇ ಸಿಎಂ ಹೇಳಿಕೆ ಬಗ್ಗೆ ಚರ್ಚೆ ಬೇಡ

ಸೋತವರಿಗೆ ಸಚಿವ ಸ್ಥಾನ ಕೊಡಲು ಕಾನೂನು ತೊಡಕಿದೆ ಎನ್ನುವ ಸಿಎಂ ಹೇಳಿಕೆ ಕುರಿತು ಪದೇ ಪದೇ ಚರ್ಚೆ ಬೇಡ ಎಂದರು.ಈಗ ಸಂಪುಟ ಸೇರ್ಪಡೆ ಬಗ್ಗೆ ನಾನು ಸಿಎಂ ಜೊತೆ ಚರ್ಚೆ ಮಾಡುವುದಿಲ್ಲ. ಮುಂದೆಯೂ ಮಾಡುವುದಿಲ್ಲ. ಈ ಬಗ್ಗೆ ಯಡಿಯೂರಪ್ಪ ಅವರಿಗೆ ಗೊತ್ತಿದೆ.

ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ

 ಸಂಪುಟಕ್ಕೆ ಪರಿಗಣಿಸುತ್ತಾರೆ ಎಂದು ಪರೋಕ್ಷವಾಗಿ ನುಡಿದ ವಿಶ್ವನಾಥ್

ಸಂಪುಟಕ್ಕೆ ಪರಿಗಣಿಸುತ್ತಾರೆ ಎಂದು ಪರೋಕ್ಷವಾಗಿ ನುಡಿದ ವಿಶ್ವನಾಥ್

ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆ ಯಡಿಯೂರಪ್ಪ ಅವರೇ ತೀರ್ಮಾನ ಮಾಡುತ್ತಾರೆ, ನಮಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆಯನ್ನು ಸಿಎಂ ಬಳಿ ಕೇಳಿ ಎಂದು ಹೇಳಿದ ಅವರು ಯಡಿಯೂರಪ್ಪ ಅವರು ತಮಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂದು ಪರೋಕ್ಷವಾಗಿ ನುಡಿದಿದ್ದಾರೆ.

 ಯಡಿಯೂರಪ್ಪ ಮೇಲೆ ಭರವಸೆ ಇಟ್ಟ ಎಂಬಿಟಿ, ವಿಶ್ವನಾಥ್

ಯಡಿಯೂರಪ್ಪ ಮೇಲೆ ಭರವಸೆ ಇಟ್ಟ ಎಂಬಿಟಿ, ವಿಶ್ವನಾಥ್

ಉಪಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ ಕಾಂಗ್ರೆಸ್ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು, ಸಚಿವ ಸಂಪುಟ ಸ್ಥಾನ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನೊಂದಿಗೆ 38 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಜನರಿಗೆ ಸೇವೆ ಸಲ್ಲಿಸಲು, ಜನಪರವಾಗಿ ಕೆಲಸ ಮಾಡಲು ನನಗೆ ಸರ್ಕಾರದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಅವರು ನನಗೆ ಯಾವ ಸ್ಥಾನ ನೀಡುತ್ತಾರೆಂಬುದು ನನಗೆ ತಿಳಿದಿಲ್ಲ. ಅದರ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ನನಗೆ ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇದೆ. ಹೇಳಿದಂತೆ ಅವರು ಮಾಡುತ್ತಾರೆಂದು ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದಾರೆ.

English summary
KR Pete MLA Narayana Gowda Fell Into H Vishwanath Feet And Took Blessings From Him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X