• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕಿ ಸೌಮ್ಯ ರೆಡ್ಡಿಗೆ ಕೊರೊನಾ ಪಾಸಿಟಿವ್

|

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಾಸಕಿ ಸೌಮ್ಯಾ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್‌ಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಸಚಿನ್ ತೆಂಡೂಲ್ಕರ್‌ಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆ

ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಕೈಗೊಂಡು ಮಾಸ್ಕ್ ಧರಿಸಿಕೊಳ್ಳಬೇಕು. ಎಲ್ಲರಿಗೂ ಕೊರೊನಾ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಕೋವಿಡ್ ರೋಗಲಕ್ಷಣಗಳು ಹೆಚ್ಚಿಲ್ಲದಿದ್ದರೂ ಸಹ, ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಕಚೇರಿಗೆ ಕರೆ ಮಾಡಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ಎಚ್ಚರ: ಭಾರತದಲ್ಲಿ ಒಂದೇ 60,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಎಚ್ಚರ: ಭಾರತದಲ್ಲಿ ಒಂದೇ 60,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆ

ಮಾ.26, ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 2,566 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,490 ಕೇಸ್ ಪತ್ತೆಯಾಗಿವೆ.

   DK ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ | Oneindia Kannada
   English summary
   Sowmya Reddy, a Jayanagara MLA from Bengaluru, has been infected with coronavirus and has been hospitalized.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X