MLA Suresh Kumar: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ ಸುರೇಶ್ ಕುಮಾರ್: ವದಂತಿಗೆ ಸ್ಪಷ್ಟನೆ
ಬೆಂಗಳೂರು ಸೆಪ್ಟೆಂಬರ್ 4: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೂಪಾಂತರಿ ಚಿಕುನ್ ಗುನ್ಯಾದಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಸುರೇಶ್ ಕುಮಾರ್ ಅವರಿಗೆ ಚಿಕನ್ ಗುನ್ಯಾ ಸೋಂಕು ತಗುಲಿದ ಬೆನ್ನಲ್ಲೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದರು. ಸದ್ಯ ಅವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ತಮ್ಮ ಅನಾರೋಗ್ಯದ ಬಗ್ಗೆ ವದಂತಿಗಳು ಹರಡಿದ ಬೆನ್ನಲ್ಲೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. 'ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ. ವೈದ್ಯರು ಸಲಹೆ ಮೇರೆಗೆ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಯಾರೂ ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಕೆಲ ದಿನಗಳಿಂದ ಚಿಕನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದೇನೆ' ಎಂದು ತಿಳಿಸಿದ್ದಾರೆ.
'ಹೀಗಾಗಿ ಕಾಳಜಿ ಹೊಂದಿರುವ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ. ಈಗ ನಾನು ಸಂಪೂರ್ಣವಾಗಿ ಚೇತರಿಕೆ ಕಂಡಿದ್ದೇನೆ' ಎಂದಿದ್ದಾರೆ. ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರು ನಿನ್ನೆ (ಸೆಪ್ಟೆಂಬರ್ 3) ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಸುರೇಶ್ ಕುಮಾರ್ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಸುರೇಶ್ ಕುಮಾರ್ ಅವರ ಪೋಸ್ಟ್ ಹೀಗಿದೆ-
ನನ್ನ ಆರೋಗ್ಯ ಕಳೆದ ಆಗಸ್ಟ್ 20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್ 15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು 3 ಕಡೆ ಜನಸ್ಪಂದನ, ಆಗಸ್ಟ್ 14 ರಂದು ಮಧ್ಯರಾತ್ರಿ ರಾಷ್ಟ್ರಧ್ವಜ ಹಾರಿಸುವ ಭರ್ಜರಿ ಕಾರ್ಯಕ್ರಮ, ನಮ್ಮ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ ಅತ್ಯಂತ ಯಶಸ್ವಿ ಆಶು ಭಾಷಣ ಸ್ಪರ್ಧೆ, ಆಗಸ್ಟ್ 15 ರಂದು ಬೆಳಗ್ಗೆ ಯಿಂದ ಸಂಜೆಯವರೆಗೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳು, ಆಗಸ್ಟ್ 16 ರಂದು ಕ್ಷೇತ್ರದ ರಾಮ ಮಂದಿರ ವಾರ್ಡಿ ನಲ್ಲಿ ಕೈಗೊಂಡ ಜನ ಸ್ಪಂದನ ಕಾರ್ಯಕ್ರಮ.... ಹೀಗೆ ಸಂಪೂರ್ಣವಾಗಿ ಕ್ಷೇತ್ರದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೆ.
ಆಗಸ್ಟ್ 16, ವರಮಹಾಲಕ್ಷ್ಮಿ ಹಬ್ಬದಂದು ರಾಮಮಂದಿರ 4ನೇ ಬ್ಲಾಕ್ ನ ಎಬಿಸಿ ಪಾರ್ಕ್ ನಲ್ಲಿ ಮುಂಜಾನೆ ಜನಸ್ಪಂದನ ಕಾರ್ಯಕ್ರಮ ಯೋಜಿಸಲಾಗಿತ್ತು. ಅಂದು ಸಂಜೆ ಐದು ಗಂಟೆಯ ವೇಳೆಗೆ ನನ್ನ ಆರೋಗ್ಯ ಸ್ವಲ್ಪ ಹೆಚ್ಚೇ ಹದಗೆಟ್ಟಿತು. ಸಂಜೆ ವೇಳೆಗೆ ಎರಡು ಕಾಲುಗಳು ತುಂಬಾ ನೋಯಲು ಪ್ರಾರಂಭಿಸಿದವು.
ಮಾರನೆಯ ದಿನ ಇಡೀ ದೇಹದಲ್ಲಿ ಒಂದಿಂಚು ಸಹ ನೋವು ಇಲ್ಲದ ಜಾಗ ನನಗೆ ಲಭ್ಯವಿರಲಿಲ್ಲ. ಅದರ ಮಾರನೆಯ ದಿನ ನನ್ನ ರಕ್ತ ಪರೀಕ್ಷೆ ಮಾಡಲಾಯಿತು. ಅದರಲ್ಲೂ ಯಾವುದೇ ಚಿನ್ಹೆ ಗೊತ್ತಾಗಲಿಲ್ಲ. ಸೋಮವಾರ ದಿನಾಂಕ 19.8. 2024 ನೋವು ತಡೆಯಲಾರದೆ ಬಾಧೆ ಎದುರಿಸಲಾಗದೆ ಆಸ್ಪತ್ರೆಗೆ ಸೇರಲೇ ಬೇಕಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಕೊಟ್ಟು ಬುಧವಾರ ಅಂದರೆ 23 ಆಗಸ್ಟ್ ರಂದು ನನ್ನ ಡಿಸ್ಚಾರ್ಜ್ ಮಾಡಲಾಯಿತು.
ಆದರೆ ಮಾರನೆಯ ದಿನ ಮತ್ತು ವಿಪರೀತ ದೇಹದಲ್ಲಿ ಅಸ್ತವ್ಯಸ್ತ ಉಂಟಾಯಿತು ಆಗ ವೈದ್ಯರು ತಪಾಸಣೆ ಮಾಡಿದ ಮೇಲೆ ನನಗೆ ಚಿಕನ್ ಗುನ್ಯಾ ಸಮಸ್ಯೆ ಗಂಭೀರ ಸ್ವರೂಪ ತಾಳಿದ್ದು ವೈದ್ಯರಿಂದ ತಿಳಿಯಿತು. ಅಲ್ಲಿಂದ ಪ್ರಾರಂಭವಾದ ನನ್ನ ಚಿಕನ್ ಗುನ್ಯಾ ವಿರುದ್ಧದ ಹೋರಾಟ ಇಂದು ಬೆಳಗ್ಗೆ ಒಂದು ಹಂತ ತಲುಪಿ, ಎಲ್ಲಾ ವೈದ್ಯರ ಉತ್ತಮ ಆರೈಕೆ, ಅಗತ್ಯ ಚಿಕಿತ್ಸೆ ಮೂಲಕ,ಆಸ್ಪತ್ರೆಯ ನರ್ಸ್ ಗಳ ಕಾಳಜಿ ಯಿಂದ ಕೂಡಿದ ಸೇವೆ ಯ ಪರಿಣಾಮವಾಗಿ ಇಂದು ನಾನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ.
ತಮಗೆಲ್ಲ ಗೊತ್ತು ಚಿಕನ್ ಗುನ್ಯಾ ನಂತರದ ಪರಿಣಾಮ ಸುಧಾರಿಸಲು ಕನಿಷ್ಠ 3 ವಾರಗಳು ಬೇಕು. ವೈದ್ಯರುಗಳ ಸಲಹೆಯ ಮೇರೆಗೆ ನಾನು ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಗುಣಮುಖವಾಗುವ ಹಾದಿಯಲ್ಲಿ ನನಗೆ ಮತ್ತೊಮ್ಮೆ ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ. ಎಲ್ಲರಿಗೂ ನಮಸ್ಕಾರ.
ಅನೇಕ ಗೆಳೆಯರು ಕುಕ್ಕೆ ಸುಬ್ರಹ್ಮಣ್ಯದಿಂದ ಹಿಡಿದು ಅಂಗಾಳ ಪರಮೇಶ್ವರಿ ದೇವಿ ಯವರೆಗೂ ವಿವಿಧ ಪೂಜೆ ಸಲ್ಲಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿರುವುದು ನನ್ನ ಮನ ತುಂಬಿ ಬಂದಿದೆ ಎಂದು ಬರೆದಿದ್ದಾರೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications