ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಸಿಬಿ ಕಚೇರಿಗೆ ವಿಚಾರಣೆಗೆ ಬಂದ ಕಾಶಪ್ಪನವರ್

|
Google Oneindia Kannada News

ಬೆಂಗಳೂರು, ಜು. 7 : ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಸೋಮವಾರ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಸತತ ಐದು ಗಂಟೆಗಳ ಕಾಲ ಸಿಸಿಬಿ ಪೊಲೀಸರು ಅವರನ್ನು ವಿಚಾರಣೆ ನಡೆಸಿದ್ದು, ಹಲವಾರು ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

ಸೋಮವಾರ ಬೆಳಗ್ಗೆ 10.15ರ ಸುಮಾರಿಗೆ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್‌ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಆಗಮಿಸಿದ್ದರು. ಸಿಸಿಬಿ ಪೊಲೀಸರು ಸಿಆರ್ ಪಿಟಿ ಪಿಸಿ 41(ಎ) ಅಡಿ ಕಾಶಪ್ಪನವರ್ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. [ಶಾಸಕ ಕಾಶಪ್ಪನವರ್ ಪರಾರಿ!]

Vijayanand Kashappanavar (

ಸಿಸಿಪಿ ಎಸಿಪಿ ರವಿಕುಮಾರ್ ಮತ್ತು ಮೂವರು ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ವಿಜಯಾನಂದ ಕಾಶಪ್ಪನವರ್‌ ಅವರನ್ನು ವಿಚಾರಣೆ ನಡೆಸಲಾಗಿದ್ದು, ಸ್ಕೈ ಬಾರ್ ನಲ್ಲಿ ಲಭ್ಯವಾಗಿದ್ದ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಹಲವು ಸಾಕ್ಷಿಗಳ ಆಧಾರದ ಮೇಲೆ ಪೊಲೀಸರು ಶಾಸಕರನ್ನು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ರಾತ್ರಿ 12 ಗಂಟೆ ತನಕ ಮಾತ್ರ ಬಾರ್ ನಲ್ಲಿ ಇದ್ದೆ ಎಂದು ಶಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜುಲೈ 1ರ ಮಂಗಳವಾರ ರಾತ್ರಿ ಕಾಶಪ್ಪನವರ್ ಮತ್ತು ಅವರ ಬೆಂಬಲಿಗರು ಕಬ್ಬನ್ ಪಾರ್ಕ್ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ. [ಪೊಲೀಸರಿಗೆ ಥಳಿಸಿದ ಶಾಸಕರು]

English summary
Hungund MLA Vijayanand Kashappanavar (Congress) on Monday, July 7 appeared before the Central Crime Branch police for investigation. Vijayanand Kashappanavar and his supporters were accused of assaulting two constables on duty in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X