ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಮೀರ್ ಅಹಮದ್: ಕಾರಣವೇನು?

|
Google Oneindia Kannada News

ಬೆಂಗಳೂರು, ಆ.16-ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ಗಳ ಪುನರ್ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸಂಬಂಧ ಹೈಕೋರ್ಟ್‌ನಲ್ಲಿ ಇಂದು (ಆಗಸ್ಟ್ 16) ವಾದ-ಪ್ರತಿವಾದ ನಡೆಯುತ್ತಿದೆ. ಈ ನಡುವೆ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಖಾನ್ ಸಿಎಂ ಬಸವರಾಜ ಬೊಮ್ಮಾಯಿರನ್ನು ಭೇಟಿಯಾಗಿದ್ದಾರೆ.

ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ಎಸ್.ಇಸ್ಮಾಯಿಲ್ ಜಬಿವುಲ್ಲಾ ಸಲ್ಲಿಸಿದ ಅರ್ಜಿ ಒಳಗೊಂಡಂತೆ ಪದ್ಮನಾಭನಗರ, ಶಾಂತಿನಗರ ಮತ್ತು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳ ಬಿಬಿಎಂಪಿ ವಾರ್ಡ್ ಗಳ ಮರು ವಿಂಗಡಣೆಯನ್ನು ಪ್ರಶ್ನಿಸಿಯೂ ಹೈಕೋರ್ಟ್ ಗೆ ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆ ನಡೆಯುತ್ತಿದೆ.

ಆಗಸ್ಟ್ 16ರಂದು ಬಿಬಿಎಂಪಿ ಆಯುಕ್ತರಿಗೆ ನೊಟೀಸ್
ಇದೇ ತಿಂಗಳ 11ರಂದು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ನ್ಯಾಯಪೀಠವು ಆ.16ರವರೆಗೆ ವಾರ್ಡ್‍ವಾರು ಮೀಸಲು ಪಟ್ಟಿ ಅಂತಿಮಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೆ, ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಸರ್ಕಾರ, ರಾಜ್ಯ ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿತ್ತು.

MLA Zameer Ahmed Khan has meet CM Basavaraja Bommai over Chamarajpet Constituency issues

ವಾರ್ಡ್‌ಗಳ ಮರು ವಿಂಗಡಣೆಯಲ್ಲಿ ತಾರತಮ್ಯ
ಗೋವಿಂದರಾಜನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‌ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. ವಾರ್ಡ್‌ಗಳ ಸಂಖ್ಯೆ ಸಹ ಹೆಚ್ಚಿಸಲಾಗಿದೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್‌ಗೆ ಸರಾಸರಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿಕೊಂಡಿದ್ದಾರೆ.

MLA Zameer Ahmed Khan has meet CM Basavaraja Bommai over Chamarajpet Constituency issues

ಕೆ.ಆರ್.ಮಾರ್ಕೆಟ್ ವಾರ್ಡ್ ಮರು ರಚನೆಗೆ ಕೋರಿಕೆ
ಚಾಮರಾಜಪೇಟೆ ವಿಧಾನ ಸಭೆ ಕ್ಷೇತ್ರದಲ್ಲಿ ಏಳು ವಾರ್ಡ್ ಗಳು ಇದ್ದವು. ಇದೀಗ ಕೆ.ಆರ್.ಮಾರ್ಕೆಟ್ ವಾರ್ಡ್ ಕೈಬಿಟ್ಟು ವಾರ್ಡ್ ಗಳ ಸಂಖ್ಯೆಯನ್ನು ಆರಕ್ಕೆ ಇಳಿಸುವ ಮೂಲಕ ತಾರತಮ್ಯ ಮಾಡಲಾಗಿದೆ. ಇದರಿಂದಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಾರ್ಡ್‌ಗಳನ್ನು ಪುನರ್ ರಚಿಸಿ 2022ರ ಜು.14ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಹೊಸದಾಗಿ ವಾರ್ಡ್‌ಗಳನ್ನು ರಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಐತಿಹಾಸಿಕ ಕೆ.ಆರ್.ಮಾರ್ಕೆಟ್ ವಾರ್ಡ್ ಮರು ರಚಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

MLA Zameer Ahmed Khan has meet CM Basavaraja Bommai over Chamarajpet Constituency issues

ಸಿಎಂರನ್ನು ಭೇಟಿಯಾದ ಜಮೀರ್
ಚಾಮರಾಜಪೇಟೆ ಈದ್ಗಾ ವಿವಾದದ ಬಳಿಕ ಮತ್ತು ಚಾಮರಾಜಪೇಟೆ ವಾರ್ಡ್‌ ಮರುವಿಂಗಡಣೆಯ ವೇಳೆಯಲ್ಲಿ ಉಂಟಾಗಿರುವ ತಾರತಮ್ಯವನ್ನು ಪರಿಹರಿಸಿಕೊಡಬೇಕೆಂದು ಚಾಮರಾಜ ಪೇಟೆಯ ಶಾಸಕ ಜಮೀರ್ ಅಹಮದ್ ಖಾನ್ ಸಿಎಂ ಬಸವರಾಜ ಬೊಮ್ಮಾಯಿಯನ್ನು ಕೋರಿಕೊಂಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ.

Recommended Video

ಅಟಲ್ ಅಂದ್ರೆ ಅಮೋಘ, ಅನನ್ಯ, ಅನರ್ಘ್ಯ ರತ್ನ | Oneindia Kannada

English summary
Arguments are going on in the High Court today (August 16) regarding the hearing of petitions filed questioning the delimitation of BBMP wards under Chamarajpet Assembly Constituency. Meanwhile Chamarajpet MLA Zameer Ahmed Khan has met CM Basavaraja Bommai, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X