ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರು ಇನ್ಯಾರೋ: ಜಮೀರ್ ಅಹ್ಮದ್
ಬೆಂಗಳೂರು, ಆಗಸ್ಟ್ 13: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಖಾನ್, ಬಿಜೆಪಿ ಮುಖಂಡ ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Recommended Video
ಕಾಂಗ್ರೆಸ್‌ಗೆ ಸೇರಿದ ದಲಿತ ಶಾಸಕರ ಮನೆ ಮೇಲೆ ದಾಳಿಯಾಗಿದ್ದರೂ ಕಾಂಗ್ರೆಸ್‌ನವರು ಒಬ್ಬರೂ ಮಾತನಾಡುತ್ತಿಲ್ಲ ಎಂದು ಬಿಎಲ್ ಸಂತೋಷ್ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.
ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಜಮೀರ್ ಹೇಳಿದ್ದಾರೆ. ಮುಂದೆ ಓದಿ...

ಕುಟುಂಬಗಳ ಸ್ಥಿತಿಕಂಡು ಕಣ್ಣೀರು ಬಂತು
'ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ' ಎಂದು ಗೋಲಿಬಾರ್‌ಗೆ ಬಲಿಯಾದ ಯುವಕರ ಪರ ಮಾತನಾಡಿದ್ದಾರೆ.

ಕಾನೂನು ಹೋರಾಟದ ಮೂಲಕ ನ್ಯಾಯ
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಜಮೀರ್ ಹೇಳಿದ್ದಾರೆ.

ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸುವುದೇಕೆ?
'ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?

ರಾಜಕೀಯ ಲಾಭಕ್ಕೆ ಸೀಮಿತ
ಆತ್ಮೀಯರಾದ ಅಖಂಡ ಶ್ರೀನಿವಾಸ ಮೂರ್ತಿಯವರು ದಲಿತ ಎಂಬ ಕಾರಣಕ್ಕೆ ನಮ್ಮ ಪಕ್ಷದಲ್ಲಿ ರಕ್ಷಣೆ ನೀಡುತ್ತಿಲ್ಲ ಎಂಬ ಸಂತೋಷ್ ಅವರ ಆರೋಪ ಕೇವಲ ರಾಜಕೀಯ ಲಾಭಕ್ಕಷ್ಟೇ ಸೀಮಿತ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸೋದರತೆ, ಸಮಾನತೆ ಸಾರುವ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಿ
ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತ ಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ದಿ ಹೇಳಿದ್ದೀರಾ ಸಂತೋಷ್ ಅವರೇ? ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ವಿಧಾನಸಭೆ, ವಿಧಾನ ಪರಿಷತ್, ಬಿಬಿಎಂಪಿ, ಪಂಚಾಯತ್ ರಾಜ್ ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದೀರ? ಹೋಗಲಿ ಸಾಮಾಜಿಕ ನ್ಯಾಯದ ಪರವಾಗಿ ಒಮ್ಮೆಯಾದರೂ ಮಾತಾಡಿದ್ದೀರ? ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳುವುದು ಒಳಿತು.

ಬಿಜೆಪಿಗೆ ನೈತಿಕತೆ ಇದೆಯೇ?
ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಾಧಾರಿತ, ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ನಮ್ಮದು ಸಮಾನತೆ, ಜಾತ್ಯತೀತತೆಯಲ್ಲಿ ನಂಬಿಕೆಯಿರುವ ಪಕ್ಷ. ಕೋಮು ಗಲಭೆಗಳ ಮೂಲಕ ಮತ ಧ್ರುವೀಕರಣ ಮಾಡುವ ಬಿಜೆಪಿಗೆ ನಮ್ಮ ಪಕ್ಷವನ್ನು ಪ್ರಶ್ನಿಸುವ ನೈತಿಕತೆ ಇದೆಯೇ?

ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ
ಕಳೆದ 60 ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರ ಮನಸ್ಸಿನಲ್ಲಿದೆ. ಯಾವ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತತೆಯ ಪರವಿದೆ ಎಂಬುದು ಜನತೆಗೆ ಚೆನ್ನಾಗಿಯೇ ಗೊತ್ತು. ನಿಮ್ಮ ಸುಳ್ಳು ಪ್ರಚಾರಗಳಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications