ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರು ಇನ್ಯಾರೋ: ಜಮೀರ್ ಅಹ್ಮದ್

|
Google Oneindia Kannada News

ಬೆಂಗಳೂರು, ಆಗಸ್ಟ್ 13: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಖಾನ್, ಬಿಜೆಪಿ ಮುಖಂಡ ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Recommended Video

DJ halli , KG Halliಯಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ Zameer Ahmed | Oneindia Kannada

ಕಾಂಗ್ರೆಸ್‌ಗೆ ಸೇರಿದ ದಲಿತ ಶಾಸಕರ ಮನೆ ಮೇಲೆ ದಾಳಿಯಾಗಿದ್ದರೂ ಕಾಂಗ್ರೆಸ್‌ನವರು ಒಬ್ಬರೂ ಮಾತನಾಡುತ್ತಿಲ್ಲ ಎಂದು ಬಿಎಲ್ ಸಂತೋಷ್ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.

ದೊಂಬಿ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ: ಸಚಿವ ಸದಾನಂದ ಗೌಡದೊಂಬಿ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ: ಸಚಿವ ಸದಾನಂದ ಗೌಡ

ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಜಮೀರ್ ಹೇಳಿದ್ದಾರೆ. ಮುಂದೆ ಓದಿ...

ಕುಟುಂಬಗಳ ಸ್ಥಿತಿಕಂಡು ಕಣ್ಣೀರು ಬಂತು

ಕುಟುಂಬಗಳ ಸ್ಥಿತಿಕಂಡು ಕಣ್ಣೀರು ಬಂತು

'ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ' ಎಂದು ಗೋಲಿಬಾರ್‌ಗೆ ಬಲಿಯಾದ ಯುವಕರ ಪರ ಮಾತನಾಡಿದ್ದಾರೆ.

ಕಾನೂನು ಹೋರಾಟದ ಮೂಲಕ ನ್ಯಾಯ

ಕಾನೂನು ಹೋರಾಟದ ಮೂಲಕ ನ್ಯಾಯ

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಜಮೀರ್ ಹೇಳಿದ್ದಾರೆ.

ನಿನ್ನೆ ರಾತ್ರಿ ನಡೆದ ಗಲಭೆಯ ಕಾರಣ ಹೇಳಿದ ಸಚಿವ ಅಶೊಕ್ನಿನ್ನೆ ರಾತ್ರಿ ನಡೆದ ಗಲಭೆಯ ಕಾರಣ ಹೇಳಿದ ಸಚಿವ ಅಶೊಕ್

ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸುವುದೇಕೆ?

ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸುವುದೇಕೆ?

'ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?

ರಾಜಕೀಯ ಲಾಭಕ್ಕೆ ಸೀಮಿತ

ರಾಜಕೀಯ ಲಾಭಕ್ಕೆ ಸೀಮಿತ

ಆತ್ಮೀಯರಾದ ಅಖಂಡ ಶ್ರೀನಿವಾಸ ಮೂರ್ತಿಯವರು ದಲಿತ ಎಂಬ ಕಾರಣಕ್ಕೆ ನಮ್ಮ ಪಕ್ಷದಲ್ಲಿ ರಕ್ಷಣೆ ನೀಡುತ್ತಿಲ್ಲ ಎಂಬ ಸಂತೋಷ್ ಅವರ ಆರೋಪ ಕೇವಲ ರಾಜಕೀಯ ಲಾಭಕ್ಕಷ್ಟೇ ಸೀಮಿತ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸೋದರತೆ, ಸಮಾನತೆ ಸಾರುವ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ನಿಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಿ

ನಿಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಿ

ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತ ಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ದಿ ಹೇಳಿದ್ದೀರಾ ಸಂತೋಷ್ ಅವರೇ? ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ವಿಧಾನಸಭೆ, ವಿಧಾನ ಪರಿಷತ್, ಬಿಬಿಎಂಪಿ, ಪಂಚಾಯತ್ ರಾಜ್ ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದೀರ? ಹೋಗಲಿ ಸಾಮಾಜಿಕ ನ್ಯಾಯದ ಪರವಾಗಿ ಒಮ್ಮೆಯಾದರೂ ಮಾತಾಡಿದ್ದೀರ? ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳುವುದು ಒಳಿತು.

ಬಿಜೆಪಿಗೆ ನೈತಿಕತೆ ಇದೆಯೇ?

ಬಿಜೆಪಿಗೆ ನೈತಿಕತೆ ಇದೆಯೇ?

ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಾಧಾರಿತ, ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ನಮ್ಮದು ಸಮಾನತೆ, ಜಾತ್ಯತೀತತೆಯಲ್ಲಿ ನಂಬಿಕೆಯಿರುವ ಪಕ್ಷ. ಕೋಮು ಗಲಭೆಗಳ ಮೂಲಕ ಮತ ಧ್ರುವೀಕರಣ ಮಾಡುವ ಬಿಜೆಪಿಗೆ ನಮ್ಮ ಪಕ್ಷವನ್ನು ಪ್ರಶ್ನಿಸುವ ನೈತಿಕತೆ ಇದೆಯೇ?

ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ

ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ

ಕಳೆದ 60 ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರ ಮನಸ್ಸಿನಲ್ಲಿದೆ. ಯಾವ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತತೆಯ ಪರವಿದೆ ಎಂಬುದು ಜನತೆಗೆ ಚೆನ್ನಾಗಿಯೇ ಗೊತ್ತು. ನಿಮ್ಮ ಸುಳ್ಳು ಪ್ರಚಾರಗಳಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

English summary
MLA Zameer Ahmed Khan questions BJP leader BL Santhosh over his tweet on Bengaluru KG Halli and DJ Halli clashes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X