ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಕೋವಿಡ್‌ ಸೋಂಕು

|
Google Oneindia Kannada News

ಬೆಂಗಳೂರು, ಆಗಸ್ಟ್ 18: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್‌ಗೆ ಕೋವಿಡ್ ಸೋಂಕು ತಗುಲಿದೆ. ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪ್ರದೇಶದಲ್ಲಿ ಜಮೀರ್ ಕಳೆದ ವಾರದಿಂದ ಸಂಚಾರ ನಡೆಸುತ್ತಿದ್ದರು.

Recommended Video

ಗಣಪತಿ ಹಬ್ಬ ಮಾಡೋರು ಈ ನಿಯಮ ಪಾಲಿಸಲೇ ಬೇಕು | Oneindia Kannada

ಮಂಗಳವಾರ ಟ್ವೀಟ್ ಮೂಲಕ ಜಮೀರ್ ಅಹ್ಮದ್ ಖಾನ್ ಕೋವಿಡ್ ಸೋಂಕು ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ. "ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ" ಎಂದು ಹೇಳಿದ್ದಾರೆ.

"ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ" ಎಂದು ಜಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ.

ಜಮೀರ್ ಅಹ್ಮದ್ ಖಾನ್‌ಗೆ ಕೋವಿಡ್ ಸೋಂಕು ತಗುಲಿರುವುದರಿಂದ ಅವರ ಜೊತೆ ಸಂಪರ್ಕದಲ್ಲಿದ್ದವರು ಆತಂಕಗೊಂಡಿದ್ದಾರೆ. ಅದರಲ್ಲೂ ಕಳೆದ ಮಂಗಳವಾರ ಗಲಭೆ ನಡೆದ ದಿನದಿಂದ ಜಮೀರ್ ಹಲವಾರು ಕಡೆ ಸಂಚಾರ ನಡೆಸಿದ್ದಾರೆ.

ಜಮೀರ್ ಅಹಮದ್ ಟ್ವೀಟ್

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್‌ಗೆ ಕೋವಿಡ್ ಸೋಂಕು ತಗುಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಭೇಟಿಯಾಗಿದ್ದರು

ಸಿದ್ದರಾಮಯ್ಯ ಭೇಟಿಯಾಗಿದ್ದರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಾಗ ಅವರನ್ನು ಬರಮಾಡಿಕೊಳ್ಳಲು ಜಮೀರ್ ಹೋಗಿದ್ದರು. ಮುಸ್ಲಿಂ ನಾಯಕರ ನಿಯೋಗದ ಜೊತೆ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೇಟಿಯಾಗಿದ್ದರು.

ಜಮೀರ್ ಅಹಮದ್ ಖಾನ್

ಜಮೀರ್ ಅಹಮದ್ ಖಾನ್

ಆಗಸ್ಟ್ 11ರಂದು ರಾತ್ರಿ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪ್ರದೇಶದಲ್ಲಿ ಗಲಭೆ ನಡೆದಾಗ ಅಲ್ಲಿಗೆ ಜಮೀರ್ ಅಹಮದ್ ಖಾನ್ ಭೇಟಿ ನೀಡಿದ್ದರು. ಕಳೆದ ಒಂದು ವಾರದಿಂದ ಈ ಪ್ರದೇಶಗಳಲ್ಲಿ ಹಲವಾರು ಬಾರಿ ಸಂಚಾರ ನಡೆಸಿದ್ದರು, ಹಲವರನ್ನು ಭೇಟಿ ಮಾಡಿದ್ದರು.

ಹಲವು ಮುಖಂಡರ ಭೇಟಿ

ಹಲವು ಮುಖಂಡರ ಭೇಟಿ

ಜಮೀರ್ ಅಹಮದ್ ಖಾನ್ ಕಳೆದ ಒಂದು ವಾರದಿಂದ ಹಲವಾರು ಬಾರಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಹಲವು ನಾಯಕರು, ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ.

English summary
Bengaluru Chamarajpet Congress MLA Zameer Ahmed Khan tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X