ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಮಾಡಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಜಿ.ಪರಮೇಶ್ವರ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ 26: ಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಖಡಕ್ ಎಚ್ಚರಿಕೆ ಕೊಟ್ಟರು.
ಭಾನುವಾರ ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಯಾರು ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಪದೇ ಪದೆ ಹೇಳುತ್ತಿದ್ದೇನೆ. ಶಾಸಕರಾಗಿರಲಿ, ಸಂಸದರಾಗಿರಲಿ ಮತ್ಯಾರಾದರು ಆಗಲಿ. ಯಾರನ್ನು ಕೂಡ ಬಿಡುವುದಿಲ್ಲ. ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ.
ದಾವಣಗೆರೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಇನ್ಸ್‌ಪೆಕ್ಟರ್, ಪಿಎಸ್‌ಐನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂದರು.
ಮರಣೋತ್ತರ ಪರೀಕ್ಷೆ ಬಳಿಕ ಸತ್ಯ ಬಯಲು
ಮೃತನು ಮಟ್ಕಾ ಆಡಿಸುವುದರಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಠಾಣೆಗೆ ಕರೆದುಕೊಂಡು ಬಂದಿದ್ದರು. ಮರಣೋತ್ತರ ಪರೀಕ್ಷೆಯ ವರದಿ ಬಂದನಂತರ ಆತನ ಸಾವಿಗೆ ನಿಖರವಾದ ಕಾರಣ ಗೊತ್ತಾಗಲಿದೆ ಎಂದು ಹೇಳಿದರು.

ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಅಧಿಕಾರಿಗಳು ಆ ರೀತಿ ಭಾಗಿಯಾಗಿರುವುದು ಕಂಡು ಬಂದರೆ, ಅಂತವರ ವಿರುದ್ಧ ಸೇವೆಯಿಂದ ಡಿಸ್ಮಿಸ್‌ಗೊಳಿಸುವ ಕ್ರಮ ತೆಗೆದುಕೊಳ್ಳುತ್ತೇವೆ. ಅಂತವರು ಅಧಿಕಾರದಲ್ಲಿರಬಾರದು ಎಂದು ಹೇಳಿದರು.
ಬಿಜೆಪಿ ಅಧಿಕಾರದ ರಾಜ್ಯಗಳು ಹೇಗಿವೆ? ಎಂದು ನೋಡಿಕೊಳ್ಳಲಿ
ಕರ್ನಾಟಕ ಬಿಹಾರವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಕ್ಕೆ ತಿರುಗೇಟು ಕೊಟ್ಟರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಹೇಗಿವೆ? ಎಂಬುದನ್ನು ನೋಡಿಕೊಳ್ಳಲಿ. ಗುಜುರಾತ್‌ನಲ್ಲಿ ಬೆಂಕಿ ಹೊತ್ತಿಕೊಂಡು 27 ಜನ ಮೃತಪಟ್ಟಿದ್ದಾರೆ. ಅದಕ್ಕೆ ಯಾರು ಹೊಣೆ? ಅಲ್ಲಿನ ಮುಖ್ಯಮಂತ್ರಿ, ಗೃಹ ಸಚಿವರು ರಾಜೀನಾಮೆ ಕೊಡಬೇಕಲ್ಲವೇ? ಎಂದು ಕೇಳಿದರು.
ಹೇಳುವುದು ಬಹಳ ಸುಲಭವಾಗಿರುತ್ತದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಯನ್ನು ಹಾಳಾಗಲು ಬಿಡುವುದಿಲ್ಲ ಎಂದು ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.
ಸಿಎಂ ಪತ್ರಕ್ಕೆ ಕೇಂದ್ರದಿಂದ ಸ್ಪಂದನೆ ಇಲ್ಲ
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತ ಪತ್ರಕ್ಕೆ ಕೇಂದ್ರದಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ವಿದೇಶಾಂಗ ಸಚಿವರು, ಇನ್ನೆರಡು ದಿನಗಳಲ್ಲಿ ರದ್ದು ಮಾಡುವುದಾಗಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ.
ಮುಖ್ಯಮಂತ್ರಿಯವರು ಮೇ1ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆ ಪತ್ರ ಎಲ್ಲಿ ಹೋಯಿತು? ಮುಖ್ಯಮಂತ್ರಿಯವರ ಪತ್ರ ಪ್ರಧಾನಮಂತ್ರಿಯವರ ಕಚೇರಿಗೆ ಹೋಗುತ್ತದೆ ಎಂದಾದರೆ ಅದಕ್ಕೆ ಗೌರವ ಸಿಗಬೇಕಲ್ಲವೇ? ಕರ್ನಾಟಕ ಮುಖ್ಯಮಂತ್ರಿ, ಈಗ ಪತ್ರ ಬರೆದಿದ್ದಾರೆ ಎಂದು ವಿದೇಶಾಂಗ ಸಚಿವರು ಹೇಳಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳ ಅಸಮಾಧಾನ ಬಗ್ಗೆ ಮಾತನಾಡಿದ ಅವರು, ಸಂತ್ರಸ್ತೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಣೆ ನೀಡುವುದಾಗಿ ನಾನು ಮತ್ತು ಮುಖ್ಯಮಂತ್ರಿಯವರು ಹೇಳಿದ್ದೇವೆ. ಸಂತ್ರಸ್ತೆಯರನ್ನು ಯಾರು ಕೂಡ ಒತ್ತಾಯ ಮಾಡಿ, ಬೇರೆ ರೀತಿಯಲ್ಲಿ ಬಳಸಿಕೊಳ್ಳಲು ಬಿಡುವುದಿಲ್ಲ.
ಸಂತ್ರಸ್ತರಿಗೆ ರಕ್ಷಣೆ: ನಿಜವಾದ ಆರೋಪಿಗೆ ಶಿಕ್ಷೆ
ಸಂತ್ರಸ್ತೆಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಲಯ ಐಜಿಪಿಯವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪೆನ್‌ಡ್ರೈವ್ ಪ್ರಕರಣದಲ್ಲಿ ನಿಜವಾದ ಆರೋಪಿಗೆ ಶಿಕ್ಷೆಯಾಗಿಸಬೇಕು ಎಂದು ಆಗ್ರಹಿಸಿರುವ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಅದೇ ಕೆಲಸವನ್ನು ಮಾಡುತ್ತಿದ್ದೇವೆ.
ನಿಜವಾದ ಆರೋಪಿ ಯಾರು, ಪ್ರಕರಣದಲ್ಲಿ ಪ್ರಜ್ವಲ್ ಪಾತ್ರ ಏನು ಎಂಬುದಕ್ಕಾಗಿಯೇ ತನಿಖೆ ನಡೆಸಬೇಕು ಎಂಬ ಕಾರಣಕ್ಕಾಗಿಯೇ ಎಸ್‌ಐಟಿ ರಚಿಸಲಾಗಿದೆ. ಗಾಳಿಯಲ್ಲಿ ಗುಂಡು ಹೊಡೆದ ಹಾಗೇ, ಯಾರದ್ದೋ ಹೆಸರು ಹೇಳುವ ಅಗತ್ಯವಿಲ್ಲ. ತನಿಖೆ ಆಗುವ ಮುಂಚೇಯೇ ಹೇಳಿಕೆಗಳನ್ನು ನೀಡಿದರೆ ತನಿಖೆಗೆ ತೊಂದರೆಯಾಗುತ್ತದೆ ಎಂದು ತಿರುಗೇಟು ನೀಡಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications