ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧಿಕೃತವಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸಿ.ಎಂ. ಇಬ್ರಾಹಿಂ; ಮುಂದಿನ ನಡೆ ಏನು?

|
Google Oneindia Kannada News

ಬೆಂಗಳೂರು, ಮಾರ್ಚ್ 12: ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರನ್ನು ಅದರಲ್ಲಿಯೂ ಮುಸ್ಲಿಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಎಂಎಲ್‌ಸಿ ಸಿ.ಎಂ. ಇಬ್ರಾಹಿಂ ಅಧಿಕೃತವಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ, ಆದರೆ ಅಧಿಕಾರ ಕೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯಲು, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ," ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

 ಸಿ.ಎಂ.ಇಬ್ರಾಹಿಂ ಹಚ್ಚಿದ ಬೆಂಕಿಗೆ ನಲುಗುತ್ತಿರುವ ಕಾಂಗ್ರೆಸ್, ಸಿದ್ದರಾಮಯ್ಯ ಸಿ.ಎಂ.ಇಬ್ರಾಹಿಂ ಹಚ್ಚಿದ ಬೆಂಕಿಗೆ ನಲುಗುತ್ತಿರುವ ಕಾಂಗ್ರೆಸ್, ಸಿದ್ದರಾಮಯ್ಯ

"1995ನೇ ಇಸವಿಯಲ್ಲಿ ಆಗಿದ್ದ ಬೆಳವಣಿಗೆಯೇ ಈಗಲೂ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ ಎನ್ನುವುದನ್ನು ನಾನು ಹಲವು ದಿನಗಳಿಂದ ಹೇಳುತ್ತಲೇ ಇದ್ದೇನೆ," ಎಂದು ಎಚ್ಚರಿಕೆ ನೀಡಿದರು.

MLC CM Ibrahim Has Officially Resigned To the Congress Party; He Will Join JDS Soon

"ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿದಿದೆ. ಆದರೆ ಕರ್ನಾಟಕವನ್ನು ಉತ್ತರಪ್ರದೇಶ ಆಗಲು ನಾವು ಬಿಡುವುದಿಲ್ಲ. ಇದು ಬಸವಣ್ಣ, ಸರ್ವಜ್ಞ, ಕನಕದಾಸ, ಪುರಂದರದಾಸ, ರಾಘವೇಂದ್ರ ಸ್ವಾಮಿಗಳ ಪುಣ್ಯಸ್ಥಳ. ಹೀಗಾಗಿ ನಾನಿವತ್ತು ಕಾಂಗ್ರೆಸ್ ಪಕ್ಷ ತೊರೆದು, ನನ್ನ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ," ಎಂದರು.

ನಾನು ಸ್ವಾಭಿಮಾನದಿಂದ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ರಾಜೀನಾಮೆ ಅಂಗೀಕಾರ ಮಾಡುವುದು ಅವರಿಗೆ ಬಿಟ್ಟಿದ್ದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದರು.

MLC CM Ibrahim Has Officially Resigned To the Congress Party; He Will Join JDS Soon

ನಾನು ಮುಂದೆ ಯಾವ ನಿರ್ಧಾರ ಬೇಕಿದ್ದರೂ ತೆಗೆದುಕೊಳ್ಳಬಹುದು. ನೀವು ಪಕ್ಷ ತೊರೆಯಬೇಡಿ ಅಂತಾ ಜನರನ್ನು ಕಳುಹಿಸಿದ್ದರು. ಪಕ್ಷ ತೊರೆಯಬೇಡಿ ಎಂದು ನನ್ನನ್ನು ಬೈಯಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ, ಸಿದ್ದರಾಮಾಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಿ.ಎಂ. ಇಬ್ರಾಹಿಂ ನುಡಿದರು.

ಕೆಲವರನ್ನು ಪಕ್ಷದಿಂದ ಅವರೇ ತಳ್ಳುತ್ತಿದ್ದಾರೆ. ನನ್ನನ್ನು ತಳ್ಳುವ ಮೊದಲೇ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ನನ್ನ ಜೊತೆ ಅನೇಕರು ಬರುತ್ತಾರೆ. ಮುಂದೆ ದೇವೇಗೌಡ, ಕುಮಾರಣ್ಣ, ರೇವಣ್ಣರ ಜೊತೆ ಚರ್ಚೆ ಮಾಡಿ ನಿರ್ಣಯ ಪ್ರಕಟ ಮಾಡುತ್ತೇನೆ ಎಂದು ಹೇಳುವ ಮೂಲಕ ಜೆಡಿಎಸ್ ಸೇರ್ಪಡೆಯ ಸುಳಿವು ಬಿಟ್ಟುಕೊಟ್ಟರು.

ಇಬ್ರಾಹಿಂ ಜೊತೆ ಚರ್ಚೆ ನಡೆಸಿಲ್ಲ ಎಂದು ಮಾಜಿ ಪ್ರಧಾನಿ
ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರುವ ವಿಚಾರದ ಬಗ್ಗೆ ಹಲವು ತಿಂಗಳುಗಳಿಂದ ಚರ್ಚೆ ನಡೆಯುತ್ತಲೇ ಇದೆ. ಆದರೆ ಈವರೆಗೂ ಅವರು ನನ್ನೊಡನೆ ಚರ್ಚಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದ್ದಾರೆ.

Recommended Video

ಕಾಂಗ್ರೆಸ್ಸ್ ಪಾದಯಾತ್ರೆನ ಬೀದಿ ನಾಟಕಕ್ಕೆ ಹೊಲಿಸಿಬಿಟ್ಟರು ಸದಾನಂದ ಗೌಡ್ರು! | Part 2 | Oneindia Kannada

English summary
MLC CM Ibrahim has accused the Congress party is treating not well of minorities, especially Muslims and He has officially resigned from Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X