ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಹಗಲು ಹೊತ್ತು ಮಾತ್ರ ಕಾಂಗ್ರೆಸ್ ಅಧ್ಯಕ್ಷ, ಜೋಡೆತ್ತು ವಿರುದ್ಧ ಯೋಗೇಶ್ವರ್ ವಾರ್

|
Google Oneindia Kannada News

ಬೆಂಗಳೂರು, ಜುಲೈ 30: ನೂತನವಾಗಿ ವಿಧಾನ ಪರಿಷತ್‌ ಸದಸ್ಯನಾಗಿ ಆಯ್ಕೆಯಾಗಿರುವ ಸಿ ಪಿ ಯೋಗೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಯೋಗೇಶ್ವರ್ ನೇರವಾಗಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

Recommended Video

North Korea claims to be 'totally free' of Coronavirus | Oneindia Kannada

'ಡಿ.ಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಮೂಲ ಕ್ಷೇತ್ರ ರಾಮನಗರದಲ್ಲಿಯೇ ಅವರ ಬುಡಕ್ಕೆ ಕೈ ಹಾಕಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಡಿ.ಕೆ.ಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅವರಿಬ್ಬರು ಅಗತ್ಯಕ್ಕೆ ತಕ್ಕಂತೆ ರಾಜಕಾರಣ ಮಾಡ್ತಾರೆ. ಡಿಕೆಶಿ ಹಗಲು ಹೊತ್ತು ಮಾತ್ರ ಕಾಂಗ್ರೆಸ್ ಅಧ್ಯಕ್ಷ. ಹಾಗಾಗಿ, ಬಿಜೆಪಿ ಪಕ್ಷವನ್ನು ಬೆಂಬಲಿಸಿ' ಎಂದು ಆಹ್ವಾನ ನೀಡಿದ್ದಾರೆ.

ಪರಿಷತ್ತಿಗೆ ಸೈನಿಕ ಯೋಗೇಶ್ವರ್ ಎಂಟ್ರಿ: ಬಿಎಸ್ವೈ ಸರಕಾರದೊಳಗಿನ ಅಸಲಿ ಗೇಂ ಇನ್ನು ಶುರು?ಪರಿಷತ್ತಿಗೆ ಸೈನಿಕ ಯೋಗೇಶ್ವರ್ ಎಂಟ್ರಿ: ಬಿಎಸ್ವೈ ಸರಕಾರದೊಳಗಿನ ಅಸಲಿ ಗೇಂ ಇನ್ನು ಶುರು?

ಸಿಪಿ ಯೋಗೇಶ್ವರ್ ಆಯ್ಕೆ ಕುರಿತು ಸ್ವಪಕ್ಷದಲ್ಲೇ ಅಸಮಾಧಾನ ಇದ್ಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು '''ನನ್ನ ಆಯ್ಕೆಯಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಪಕ್ಷ ಹಾಗೂ ಯಡಿಯೂರಪ್ಪ ಎಲ್ಲರೂ ಒಮ್ಮತದಿಂದ ಆಯ್ಕೆ ಮಾಡಿದಾರೆ. ನನ್ನನ್ನು ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದು ಪುಣ್ಯ, ಸಂಪುಟಕ್ಕೆ ಸೇರಿಸಿಕೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ' ಎಂದು ಹೇಳಿದರು. ಮುಂದೆ ಓದಿ....

ಡಿಕೆಶಿ ಹಾಗು ಎಚ್‌ಡಿಕೆಗೆ ಅಸ್ತಿತ್ವದ ಪ್ರಶ್ನೆ

ಡಿಕೆಶಿ ಹಾಗು ಎಚ್‌ಡಿಕೆಗೆ ಅಸ್ತಿತ್ವದ ಪ್ರಶ್ನೆ

'ಡಿ.ಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಮೂಲ ಕ್ಷೇತ್ರ ರಾಮನಗರದಲ್ಲಿಯೇ ಅವರ ಬುಡಕ್ಕೆ ಕೈ ಹಾಕಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಡಿ.ಕೆ.ಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಡಿ.ಕೆ.ಶಿ ಹಾಗೂ ಕುಮಾರಸ್ವಾಮಿ ಅನುಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡುತ್ತಾರೆ. ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ' ಎಂದು ಸಿಪಿ ಯೋಗೇಶ್ವರ್ ಟೀಕಿಸಿದ್ದಾರೆ.

ಕುಮಾರಸ್ವಾಮಿ ಬಿಜೆಪಿಗೆ ಬೆಂಬಲಿಸುತ್ತಿದ್ದಾರೆ

ಕುಮಾರಸ್ವಾಮಿ ಬಿಜೆಪಿಗೆ ಬೆಂಬಲಿಸುತ್ತಿದ್ದಾರೆ

'ಕುಮಾರಸ್ವಾಮಿಗೆ ಈಗ ಅಸ್ತಿತ್ವದ ಪ್ರಶ್ನೆ, ಮಾತನಾಡುತ್ತಿದ್ದಾರೆ. ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಅಂತ ಕಾಣಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ. ಕೆಲಸಗಳೂ ಆಗುತ್ತಿವೆ. ಅವರು ಹೇಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ. ಹೀಗಾಗಿ ಅವರೂ ಬಿಜೆಪಿಗೆ ಸಫೋರ್ಟ್ ಮಾಡಲು ಮುಂದಾಗಿದ್ದಾರೆ' ಎಂದು ಕುತೂಹಲ ಮೂಡಿಸಿದರು.

ಡಿಕೆಶಿ ಹಗಲು ಹೊತ್ತು ಮಾತ್ರ ಕಾಂಗ್ರೆಸ್ ಅಧ್ಯಕ್ಷ

ಡಿಕೆಶಿ ಹಗಲು ಹೊತ್ತು ಮಾತ್ರ ಕಾಂಗ್ರೆಸ್ ಅಧ್ಯಕ್ಷ

ಡಿ. ಕೆ. ಶಿವಕುಮಾರ್ ಹಗಲು ಹೊತ್ತಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ. ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿಕೊಳ್ಳುತ್ತಾರೆ. ಇಬ್ಬರೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲು ಎಂದು ಬಯಸುತ್ತಾರೆ. ಇಬ್ಬರೂ ನಾಯಕರು ಸಂದರ್ಭಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ಬನ್ನಿ....

ಬಿಜೆಪಿಗೆ ಬನ್ನಿ....

ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರನ್ನು ನಂಬಿ ಕಾರ್ಯಕರ್ತರು ಹಾಳಾಗ್ತಿರಿ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರಿ ಎಂದು ನೂತನ ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಆಹ್ವಾನ ನೀಡಿದ್ದಾರೆ.

English summary
'DK Shivakumar is Only Day-time Congress president' said Newly elected MLC CP Yogeshwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X