• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು 1,743 ಕೋಟಿ ಆಸ್ತಿ ಒಡೆಯ!

|
Google Oneindia Kannada News

ಬೆಂಗಳೂರು, ನವೆಂಬರ್ 24: ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೋಲಾರ ಮೂಲದ 1,743 ಕೋಟಿ ರೂಪಾಯಿ ಆಸ್ತಿ ಒಡೆಯ ಯೂಸೂಫ್ ಷರೀಫ್ ಕಣಕ್ಕಿಳಿದಿದ್ದಾರೆ.

'ಕೆಜಿಎಫ್ ಬಾಬು' ಎಂದೇ ಪ್ರಸಿದ್ಧಿ ಪಡೆದಿರುವ ಯೂಸೂಫ್ ಷರೀಫ್ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಬರೋಬ್ಬರಿ 1,743 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಇಲ್ಲಿಯವರೆಗೆ ರಾಜ್ಯದ ಚುನಾವಣೆಯ ಇತಿಹಾಸದಲ್ಲಿ ಹೊಸಕೋಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಎಂಟಿಬಿ ನಾಗರಾಜ್‌ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು. 2019ರಲ್ಲಿ ನಡೆದ ಉಪ ಚುನಾವಣೆಯ ಸಂದರ್ಭದಲ್ಲಿ ಎಂಟಿಬಿ 1200 ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಎಂಟಿಬಿ ಹೆಸರಿನಲ್ಲಿದ್ದ 'ಶ್ರೀಮಂತ ಅಭ್ಯರ್ಥಿ' ದಾಖಲೆಯನ್ನು ಯೂಸುಫ್ ಷರೀಫ್ (ಕೆಜಿಎಫ್ ಬಾಬು) ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಬಾಲಿವುಡ್‌ ಖ್ಯಾತ ನಟ ಅಮಿತಾಭ್‌ ಬಚ್ಚನ್‌ರಿಂದ ಯೂಸೂಫ್ ಷರೀಫ್ ರೋಲ್ಸ್ ರಾಯ್ಸ್ ಕಾರು ಖರೀದಿಸಿದ್ದಾರೆ. ಯೂಸೂಫ್ ಷರೀಫ್‌ರಿಗೆ ತಾಜ್‌ ಅಬ್ದುಲ್‌ ರಜಾಕ್, ಶಾಜಿಯಾ ತರನ್ನಮ್ ಹೆಸರಿನ ಇಬ್ಬರು ಪತ್ನಿಯರಿದ್ದು, ಐದು ಮಕ್ಕಳನ್ನು ಹೊಂದಿದ್ದಾರೆ. ತಮ್ಮ ಮೇಲೆ ಒಟ್ಟು ನಾಲ್ಕು ಪ್ರಕರಣಗಳಿವೆ ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ಥಿರಾಸ್ತಿ ವಿವರ
ಬೆಂಗಳೂರಿನಲ್ಲಿ ನೂರಾರು ಎಕರೆ ಕೃಷಿ ಹಾಗೂ ಕೃಷಿಯೇತರ ಜಮೀನು ಹೊಂದಿರುವ ಯೂಸೂಫ್ ಷರೀಫ್ ತಮ್ಮ ಹೆಸರಿನಲ್ಲೇ 47.31 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು ಹಾಗೂ ಪತ್ನಿಯ ಹೆಸರಿನಲ್ಲಿ 1.30 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು ಹೊಂದಿದ್ದಾರೆ. ಅಷ್ಟೇ ಅಲ್ಲದೇ 1,593.27 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು, ಬೆಂಗಳೂರಿನಲ್ಲಿ 3.01 ಕೋಟಿ ರೂ. ಮೌಲ್ಯದ ವಸತಿ ಕಟ್ಟಡ ಹೊಂದಿದ್ದು, ಒಟ್ಟು 67.24 ಕೋಟಿ ರೂ. ಸಾಲ ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಚರಾಸ್ತಿ ವಿವರ
4.8 ಕೆ.ಜಿ ಚಿನ್ನಾಭರಣ ಹಾಗೂ 1.10 ಕೋಟಿ ರೂ. ಮೌಲ್ಯದ ವಾಚ್ ಸೇರಿದಂತೆ ದುಬಾರಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಕೈಯಲ್ಲಿ 19.53 ಲಕ್ಷ ರೂ. ನಗದು, ಬ್ಯಾಂಕ್‌ಗಳಲ್ಲಿ16.87 ಕೋಟಿ ರೂ. ಠೇವಣಿ, 17.61 ಕೋಟಿ ರೂ. ಹೂಡಿಕೆ, 58.10 ಕೋಟಿ ರೂ. ವೈಯಕ್ತಿಕ ಸಾಲ ಮಾಡಿದ್ದಾರೆ.

2.01 ಕೋಟಿ ರೂ. ಮೌಲ್ಯದ ರೋಲ್ಸ್‌ರಾಯ್ಸ್ ಕಾರು ಹಾಗೂ ಇಬ್ಬರು ಪತ್ನಿಯರ ಬಳಿ ತಲಾ 49 ಲಕ್ಷ ರೂ. ಮೌಲ್ಯದ ಎರಡು ಫಾರ್ಚೂನರ್ ಕಾರು ಅಲ್ಲದೇ 100 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.

ತಮ್ಮ ಬಳಿ 73 ಲಕ್ಷ ರೂ. ಮೌಲ್ಯದ 1.51 ಕೆ.ಜಿ ಚಿನ್ನಾಭರಣ, ಮೊದಲ ಪತ್ನಿಯ ಬಳಿ 75.89 ಲಕ್ಷ ರೂ. ಮೌಲ್ಯದ 1.56 ಕೆ.ಜಿ ಚಿನ್ನಾಭರಣ, ಎರಡನೇ ಪತ್ನಿ ಬಳಿ 29.19 ಲಕ್ಷ ರೂ. ಮೌಲ್ಯದ 600 ಗ್ರಾಂ. ಚಿನ್ನ, ಪುತ್ರಿ ಬಳಿ 57.40 ಲಕ್ಷ ರೂ. ಮೌಲ್ಯದ 1.18 ಕೆ.ಜಿ. ಚಿನ್ನ ಇರುವುದಾಗಿ ಉಲ್ಲೇಖಿಸಿದ್ದಾರೆ.

ಬಾಂಡ್, ಷೇರುಗಳು, ಮ್ಯೂಚುವಲ್ ಫಂಡ್‌ಗಳಲ್ಲಿ ಷರೀಫ್ 17.62 ಕೋಟಿ ರೂ. ಹೂಡಿಕೆ ಮಾಡಿದ್ದರೆ, ಮೊದಲ ಪತ್ನಿ 1.60 ಲಕ್ಷ ರೂ., ಎರಡನೇ ಪತ್ನಿ 75 ಸಾವಿರ ಹೂಡಿಕೆ ಮಾಡಿದ್ದಾರೆ. ಐದು ಕನ್‌ಸ್ಟ್ರಕ್ಷನ್ ಕಂಪನಿಗಳಲ್ಲಿ ಯೂಸೂಫ್ ಷರೀಫ್ ಹಣ ಹೂಡಿಕೆ ಮಾಡಿದ್ದು, ಒಟ್ಟು 17.61 ಕೋಟಿ ರೂ. ಹೂಡಿಕೆ ಮಾಡಿದ್ದಾರೆ ಎಂದು ಚುನಾವಣಾ ನಾಮಪತ್ರದ ಆಸ್ತಿ ಪ್ರಮಾಣ ಪತ್ರದಲ್ಲಿ ಘೋಷಿಸಿದ್ದಾರೆ.

ಒಟ್ಟು ಆಸ್ತಿ ವಿವರ
ಯೂಸೂಫ್ ಷರೀಫ್ ಬರೋಬ್ಬರಿ 100 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ 1,643.59 ಕೋಟಿ ರೂ. ಸ್ಥಿರಾಸ್ತಿ (ಒಟ್ಟು 1743 ಕೋಟಿ) ಹೊಂದಿರುವುದಾಗಿ ಚುನಾವಣಾ ನಾಮಪತ್ರದಲ್ಲಿ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

   ಪುನೀತ್ ರಾಜ್‍ಕುಮಾರ್ ರನ್ನು ಪಕ್ಷಕ್ಕೆ ಕರೆತರಲು BJP ಮಾಡಿದ ಪ್ರಯತ್ನ ಒಂದಾ ಎರಡಾ? | Oneindia Kannada
   English summary
   Karnataka MLC Election: Bengaluru Urban Congress candidate Yousuf Sharief Declares Assets Worth Rs.1743 Crores.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X