ಬಿಎಂಟಿಸಿ ನಿಲ್ದಾಣಗಳಲ್ಲಿ ಶೀಘ್ರ ಮೊಬೈಲ್ ಚಾರ್ಜಿಂಗ್ ಕಿಯೋಸ್ಕ್
ಬೆಂಗಳೂರು, ಏಪ್ರಿಲ್ 04: ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಸಂಸ್ಥೆಯು ತನ್ನ ನಿಲ್ದಾಣಗಳಲ್ಲಿ ಚಾರ್ಜಿಂಗ್ ಕಿಯೋಸ್ಕ್ ಅಳವಡಿಸಲು ಚಿಂತನೆ ನಡೆಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್, ಶಾಂತಿನಗರ, ಯಶವಂತಪುರ ಹಾಗೂ ಶಿವಾಜಿನಗರದ ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಕಿಯೋಸ್ಕ್ ಅಳವಡಿಸಲಾಗುತ್ತದೆ. ಇದರಿಂದ ಪ್ರಯಾಣಿಕರು ತಮ್ಮ ಕೈಯಲ್ಲಿ ಬ್ಯಾಟರಿ ಬ್ಯಾಕ್‌ಅಪ್ ನ್ನು ಹಿಡಿದುಕೊಂಡು ನಡೆದಾಡುವುದು ತಪ್ಪಲಿದೆ.
ಹಾಗೆಯೇ ವೈಟ್‌ಫೀಲ್ಡ್ ನಿಲ್ದಾಣ, ಬನಶಂಕರಿ, ಕೆಂಗೇರಿ, ವಿಜಯನಗರ, ದೊಮ್ಮಲೂರು ಹಾಗೂ ಜಯನಗರದಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ರೀಚಾರ್ಜ್ ಕಿಯೋಸ್ಕ್ ಇರಿಸಲಾಗುತ್ತದೆ. ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಐದು ವರ್ಷದ ಅವಧಿಗೆ ಪರವಾನಗಿ ನೀಡಲಾಗುತ್ತದೆ.

ಪ್ರಯಾಣಿಕರು ಉಚಿತವಾಗಿ ತಮ್ಮ ಮೊಬೈಲ್‌ನ್ನು ಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಕೆಲವು ಮಂದಿ ಬ್ಯಾಟರಿ ಬ್ಯಾಕ್‌ಅಪ್‌ಗಳನ್ನು ಹಿಡಿದುಕೊಂಡು ತೆರಳುತ್ತಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಿಲ್ಲ. ಹೀಗಾಗಿ ಬಸ್ ಕಾಯುತ್ತಿರುವ ಸಮಯದಲ್ಲಿ ಮೊಬೈಲ್ ರೀಚಾರ್ಜ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications