Mobile Toilets: ಬೆಂಗಳೂರು ಮೆಜೆಸ್ಟಿಕ್ ಬಳಿ ಬರಲಿವೆ ಮೊಬೈಲ್ ಶೌಚಾಲಯಗಳು
ಬೆಂಗಳೂರು, ಸೆಪ್ಟಂಬರ್ 06: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳು ಬರಲಿವೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂಭಾಗದ ಆಟೋ ಟಿಪ್ಪರ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೆಜೆಸ್ಟಿಕ್ ಪ್ರದೇಶದಲ್ಲಿ ಪಾದಚಾರಿಗಳ ಸಂಚಾರ ಹೆಚ್ಚು ಇರುವುದರಿಂದ ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಇದರಿಂದ ಜನರು ಪಾದಚಾರಿ ಮಾರ್ಗದ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವವರ ಸಂಖ್ಯೆ ಕಡಿಮೆಯಾಗಿ ಸ್ವಚ್ಛತೆ ಕಾಪಾಡಬಹುದು. ಯಾವಾಗಿನಿಂದ ಎಷ್ಟು ಮೊಬೈಲ್ ಶೌಚಾಲಯಗಳನ್ನು ಎಲ್ಲೆಲ್ಲಿ ಆರಂಭಗೊಳ್ಳಲಿವೆ ಎಂಬುದರ ಮಾಹಿತಿ ಶೀಘ್ರವೇ ಸಿಗಲಿದೆ.

ಆಟೋ ಚಾಲಕರು ಮತ್ತು ಸಿಬ್ಬಂದಿ ಸರಿಯಾದ ಉಡುಪು, ಶೂ ಸುರಕ್ಷಾ ಸಾಮಗ್ರಿಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಬೇಕು. ಮಸ್ಟರಿಂಗ್ ಕೇಂದ್ರಗಳಲ್ಲಿ ಪ್ರತಿನಿತ್ಯ ಬೆಳಗ್ಗೆ 5.30 ರಿಂದ 6.30 ರೊಳಗೆ ಹಾಜರಾತಿ ಪೂರ್ಣಗೊಳ್ಳಬೇಕು. ಪೌರಕಾರ್ಮಿಕರು ಶೂ, ಸಮವಸ್ತ್ರ ಹಾಗೂ ಕೈಗವಸನ್ನು ತಪ್ಪದೆ ಧರಿಸಬೇಕು. ಕಟ್ಟಡ ಭಗ್ನಾವಶೇಷಗಳು, ಬ್ಲಾಕ್ ಸ್ಪಾಟ್ ಗಳನ್ನು ತೆರವುಗೊಳಿಸುವ ಕುರಿತಂತೆ ವರದಿ ವ್ಯವಸ್ಥೆ ಜಾರಿಗೊಳಿಸಬೇಕು. ಅದನ್ನು ಸರಿಯಾಗಿ ಅನುಷ್ಠಾನಗೊಳಿಸಲು ಮೇಲ್ವಿಚಾರಣೆ ಮಾಡುವ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗಳಿಗೆ ಸೂಚಿಸಿದರು.
ಮೆಜೆಸ್ಟಿಕ್ ಸುತ್ತಮುತ್ತ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಿ ಪ್ರತಿನಿತ್ಯ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವುದು. ಓಕಳಿಪುರಂನಂತಹ ಪ್ರಮುಖ ಜಂಕ್ಷನ್‌ಗಳಲ್ಲಿ ತೀವ್ರ ಸ್ವಚ್ಛತೆ ಮಾಡಬೇಕು. ಧನ್ವಂತರಿ ರಸ್ತೆಯಲ್ಲಿ ಹಾಕಲಾಗಿರುವ (ರೈಲ್ವೇ ಜಾಗದ ಎದುರು) ಕಟ್ಟಡಗಳ ಭಗ್ನಾವಶೇಷಗಳನ್ನು ತೆರವುಗೊಳಿಸಬೇಕು. ಪಾದಚಾರಿ ಮಾರ್ಗದಲ್ಲಿ ಹಾಳಾಗಿರುವ ಕರ್ಬ್ ಸ್ಟೋನ್ ಗಳು, ಸ್ಲ್ಯಾಬ್ ಗಳನ್ನು ಬದಲಾಯಿಸಬೇಕು ಎಂದರು.
ಕಸದ ಡಬ್ಬಿ ಅಳವಡಿಸಿ
ಮೆಜೆಸ್ಟಿಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬರುವ ಹೋಟೆಲ್‌ಗಳು ಹಾಗೂ ವಾಣಿಜ್ಯ ಮಳಿಗೆಗಳ ಬಳಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಸಂಬಂಧ ಎಲ್ಲಾ ಮಳಿಗೆಗಳ ಮುಂಭಾಗ ವಿಶೇಷ ಡಸ್ಟ್ ಬಿನ್ ಗಳನ್ನು ಅಳವಡಿಸಬೇಕು. ಅದನ್ನು ಪಾಲಿಸದಿರುವವರಿಗೆ ದಂಡ ವಿಧಿಸುವ ಕೆಲಸ ಮಾಡಬೇಕು. ಇದಲ್ಲದೆ ಸುತ್ತಮುತ್ತಲಿನ ನಾಗರಿಕರು ಹಾಗೂ ಅಂಗಡಿ ಮಾಲೀಕರು ಸಹಕರಿಸುವಂತೆ ಅವರು ಕೋರಿದರು.
ಸಣ್ಣ ಜಂಕ್ಷನ್‌ಗಳಲ್ಲಿ ಸಸಿಗಳನ್ನು ನೆಡಿ
ನಗರದ ಸಣ್ಣ-ಸಣ್ಣ ಜಂಕ್ಷನ್‌ಗಳಲ್ಲಿ ತೋಟಗಾರಿಕಾ ವಿಭಾಗದ ವತಿಯಿಂದ ಸಸಿಗಳನ್ನು ನೆಟ್ಟು, ಸಂರಕ್ಷಿಸುವ ಕೆಲಸ ಮಾಡಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ನೆಟ್ಟಿರುವ ಸಸಿಗಳನ್ನು ಸರಿಯಾಗಿ ಪೋಷಣೆ ಮಾಡಬೇಕು ಹಾಗೂ ಸಸಿಗಳ ಸುತ್ತಲು ಗ್ರಿಲ್ ಅಳವಡಿಸಬೇಕು. ಮಳೆ ಬೀಳುವ ಸಮಯದಲ್ಲಿ ರಸ್ತೆಯಿಂದ ಸೈಡ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವ ಸಲುವಾಗಿ ಗ್ರೇಟಿಂಗ್‌ಗಳ ಬಳಿ ಶುಚಿತ್ವ ಕಾಪಾಡಿ. ಜೊತೆಗೆ ಸೈಡ್ ಡ್ರೈನ್‌ಗಳಲ್ಲಿ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ನೋಟೀಸ್ ನೀಡಲು ನಿರ್ದೇಶನ
ಕೇಂದ್ರ ನಗರ ಪಾಲಿಕೆಯ ಪಾದಚಾರಿ ಮಾರ್ಗಗಳಲ್ಲಿ ಜಲಮಂಡಳಿ, ಬೆಸ್ಕಾಂ ಸಂಸ್ಥೆಗಳು ಪೈಪ್‌ಗಳು ಅಥವಾ ಇತರ ಕಾಮಗಾರಿಗಳ ತ್ಯಾಜ್ಯ/ ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲಿ ಹಾಕಬಾರದು. ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗುವಂತೆ ತ್ಯಾಜ್ಯ ಹಾಕಿದವರಿಗೆ ಕೂಡಲೇ ನೋಟಿಸ್ ನೀಡಿ ತೆರವುಗೊಳಿಸಲು ಕ್ರಮ ಕೈಗೊಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications