Breaking: ಗುರುವಾರದಂದು ಬೆಂಗಳೂರಿಗೆ ವ್ಯಾಪಕ ಮಳೆ: 'Yellow' ಅಲರ್ಟ್

ಬೆಂಗಳೂರು, ಅಕ್ಟೋಬರ್ 19: ಬೆಂಗಳೂರು ವ್ಯಾಪ್ತಿಯಲ್ಲಿ ಎರಡು ದಿನದಿಂದ ತುಸು ತಣ್ಣಗಾಗಿದ್ದ ಮಳೆರಾಯ ಅಕ್ಟೋಬರ್ 20ರಂದು ಗುರುವಾರ ಮತ್ತೆ ಅಬ್ಬರಿಸಲಿದ್ದಾರೆ. ಹೀಗಾಗಿ ಬೆಂಗಳೂರು ನಗರ ಜಿಲ್ಲೆಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಆಗುವ ಸಾಧ್ಯತೆ ಇದೆ. ಈ ವೇಳೆ ನಗರದಾದ್ಯಂತ ಮೋಡ ಕವಿದ ವಾತಾವರಣ, ತಂಪು ಗಾಳಿ ಬೀಸುವಿಕೆ ಪ್ರಮಾಣ ಅಧಿಕವಾಗಿರಲಿದೆ.

ಬಂಗಾಳಕೊಲ್ಲಿಯ ಪಶ್ಚಿಮ ಭಾಗದಲ್ಲಿ ತೀವ್ರ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅದರ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದಲ್ಲಿ ಒಂದು ಸುಳಿಗಾಳಿ ಸೃಷ್ಟಿಯಾಗಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ದಿನ ಬಿಟ್ಟು ದಿನ ಮಳೆ ಚುರುಕು ಪಡೆಯುತ್ತಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

Moderate to Heavy rain expected across Bengaluru, Yellow alert on Thursday

ಗುರುವಾರ ದಕ್ಷಿಣ ವಲಯದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ಆರ್‌ಆರ್‌ನಗರ ವ್ಯಾಪ್ತಿಯ ಹೆರೋಹಳ್ಳಿ, ಗೊಟ್ಟಿಗೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 64ಮಿ.ಮೀ. ಸಾಧಾರಣ ಮಳೆಯಿಂದ 115ಮಿ.ಮೀ.ವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣಕ್ಕೆ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ನಂತರ ಶುಕ್ರವಾರದಿಂದ ನಗರದಲ್ಲಿ ಮಳೆ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಅಂದು ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ಒಟ್ಟಾರೆ ಮುಂದಿನ ಒಂದು ವಾರ ನಗರದಲ್ಲಿ ಅತ್ಯಧಿಕ ಬಿಸಿಲಿನ ವಾತಾವರಣ ಕಂಡು ಬರುವುದು ಅನುಮಾನ ಎನ್ನಲಾಗಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+