ಎದುರಾಳಿಗಳ ಎದೆಯಲ್ಲಿ ಮೋದಿ ನಡುಕ ಹುಟ್ಟಿಸಿದ್ದಾರೆ: ಸದಾನಂದಗೌಡ
Recommended Video

ಬೆಂಗಳೂರು, ಏಪ್ರಿಲ್ 10: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ನಿನ್ನೆ ಎರಡು ಕಡೆ ಬಹಿರಂಗ ಪ್ರಚಾರ ನಡೆಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿರುವುದು ಪ್ರತಿಪಕ್ಷಗಳಲ್ಲಿ ನಡುಕು ಹುಟ್ಟಿಸಿದೆ ಎಂದು ಕೇಂದ್ರ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದರು.
ಇಂದು ಬೆಳಗ್ಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ನಂದೀಶ್ ರೆಡ್ಡಿ , ಚಿತ್ರನಟಿ ಶೃತಿ, ಸ್ಥಳೀಯ ಬಿಬಿಎಂಪಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಬೆಳಗಿನಿಂದಲೇ ಅನೇಕ ಕಡೆ ಪ್ರಚಾರ ನಡೆಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಾಗರೇಶ್ವರ ನಾಗೇನಹಳ್ಳಿ , ಕೆ.ನಾರಾಯಣಪುರ, ಕೊತ್ತನೂರು, ಕೈಲಾಸನಹಳ್ಳಿ, ಗೆಡಲಹಳ್ಳಿ, ವಡರಪಾಳ್ಯ, ಚಳ್ಳಕೆರೆ, ಮೇಗನಪಾಳ್ಯ, ಬಾಬುಸಾಬ್ ಪಾಳ್ಯ, ಜ್ಯೋತಿನಗರ, ಜಯಂತಿನಗರ, ಹೊರಮಾವು, ಹೊಯ್ಸಳನಗರ, ಮುನೇಶ್ವರನಗರ ಸೇರಿದಂತೆ ಅನೇಕ ಕಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು, ನರೇಂದ್ರ ಮೋದಿ ಅವರು ನಿನ್ನೆ ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಪಕ್ಷದ ಪರ ಪ್ರಚಾರ ನಡೆಸಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ. 28 ಕ್ಷೇತ್ರಗಳಲ್ಲೂ ಮೋದಿ ಅವರ ಸಂದೇಶ ಸಂಚಲನ ಸೃಷ್ಟಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಮೋದಿ ವಿರುದ್ಧ ಭ್ರಷ್ಟಾಚಾರ ಆರೋಪಗಳೇ ಇಲ್ಲ’
ಐದು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೆ ಆಡಳಿತ ನೀಡಿದ ಕೀರ್ತಿ ನರೇಂದ್ರಮೋದಿ ಮತ್ತು ನಮ್ಮ ಪಕ್ಷಕ್ಕೆ ಸಲ್ಲುತ್ತದೆ. ಹಿಂದಿನ ಯುಪಿಎ ಅವಧಿಯಲ್ಲಿ ಆಕಾಶದಿಂದ ನೆಲದವರೆಗೂ ಹಗರಣಗಳ ಸರಮಾಲೆಯೇ ಸೃಷ್ಟಿಯಾಗಿತ್ತು. ಇದರಿಂದ ವಿಶ್ವದಲ್ಲಿ ಭಾರತದ ಮುಕುಟಕ್ಕೆ ಕಳಂಕ ಬಂದಿತ್ತು ಎಂದು ವಿಷಾದಿಸಿದರು.

‘ಭಾರತವನ್ನು ಮೋದಿ ವಿಶ್ವಮಟ್ಟಕ್ಕೆ ಕೊಂಡೊಯ್ದಿದ್ದಾರೆ’
ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದರು. ಇಂದು ಅಮೆರಿಕ, ಚೀನಾ, ಜಪಾನ್ ಸೇರಿದಂತೆ ಮುಂದುವರಿದ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮೋದಿ ಅವರ ಜನಪ್ರಿಯತೆಯನ್ನು ಸಹಿಸದೆ ವಿರೋಧ ಪಕ್ಷಗಳು ವಿನಾಕಾರಣ ಸುಳ್ಳು ಆರೋಪ ಮಾಡುತ್ತಿವೆ. ಇತಿಹಾಸದಲ್ಲೇ ದೇಶವೇ ನನ್ನ ಕುಟುಂಬ ಎಂದ ಮೊದಲ ಪ್ರಧಾನಿ ಎಂದರೆ ನರೇಂದ್ರಮೋದಿಯವರು ಎಂದು ಪ್ರಶಂಸಿಸಿದರು.

ಪುಕ್ಕಟೆ ಪ್ರಚಾರ ಪಡೆಯುವವ ನಾನಲ್ಲ: ಸದಾನಂದಗೌಡ
ನಾನು ಸಂಸದನಾದ ಮೇಲೆ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದೇನೆ. ಬೇರೆಯವರ ರೀತಿ ಮಾಡದೇ ಇರುವ ಕೆಲಸಗಳಿಗೆ ಪುಕ್ಕಟೆ ಪ್ರಚಾರ ಪಡೆಯುವ ಅಗತ್ಯ ನನಗಿಲ್ಲ.ನಾನು ಮಾಡಿರುವ ಕೆಲಸಗಳು ಮತದಾರರಿಗೆ ತಿಳಿದಿದೆ. ಈ ಬಾರಿ ಯಾರು ಎಷ್ಟೇ ಅಪಪ್ರಚಾರ ನಡೆಸಿದರೂ ನನ್ನನ್ನು ಆಯ್ಕೆ ಮಾಡುವುದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು.

‘ಹಲವು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ’
ಸಂಸದನಾಗುವ ಬದಲು ಕ್ಷೇತ್ರದಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿತ್ತು. ಕುಡಿಯುವ ನೀರು, ಸಮುದಾಯಭವನಗಳ ನಿರ್ಮಾಣ, ಶೌಚಾಲಯ, ಅಗತ್ಯವಿರುವ ಕಡೆ ರಸ್ತೆಗಳ ಅಗಲೀಕರಣ, ಮಹಿಳೆಯರ ಸಬಲೀಕರಣ, ಬಡವರಿಗೆ ನಿವೇಶನ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಸಿದ್ದೇನೆ. ಯಾರು ಏನೇ ಅಪಪ್ರಚಾರ ಟೀಕೆ ಮಾಡಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನ ಪ್ರಬುದ್ಧರಾಗಿದ್ದು, 2ನೇ ಬಾರಿಗೆ ನನ್ನನ್ನು ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡಲಿದ್ದಾರೆ ಎಂದು ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.

ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಇದಕ್ಕೂ ಮುನ್ನ ಸದಾನಂದಗೌಡ ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು. ಉದ್ಯಾನವನಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಯುವಕರನ್ನು ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದರು. ಮನೆಮನೆಗಳಿಗೆ ತೆರಳಿ ನರೇಂದ್ರ ಮೋದಿಯವರ ಮತ್ತು ಪಕ್ಷದ ಅಭಿವೃದ್ಧಿ ಕೆಲಸಗಳನ್ನು ಮನವರಿಕೆ ಮಾಡಿಕೊಟ್ಟು, ಬಿಜೆಪಿಗೆ ಮತ ಹಾಕುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications